ಕಾರ್ಮಿಕರಿಂದ ಹೆಚ್ಚು ಶುಲ್ಕ ಪಡೆದರೆ ಕಾನೂನು ಕ್ರಮ
Team Udayavani, May 23, 2020, 7:28 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕು ಸೇರಿದಂತೆ ವಿವಿಧ ಕಡೆಗಳಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಗೆ ನೋಂದಣಿಗಾಗಿ ಕಾರ್ಮಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಕೇಳಿ ಬಂದಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತರಾದ ಮೀನಾ ಪಾಟೀಲ ಎಚ್ಚರಿಸಿದ್ದಾರೆ.
ಕಾರ್ಮಿಕ ಕಲ್ಯಾಣ ಮಂಡಳಿಗೆ ಕಾರ್ಮಿಕರ ನೋಂದಣಿಗಾಗಿ ಕೆಲ ಸಂಘ-ಸಂಸ್ಥೆ ಹಾಗೂ ಆನ್‌ಲೈನ್ ಕೇಂದ್ರಗಳಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ನೋಂದಣಿಗೆ 25ರೂ.ಗಳ ಶುಲ್ಕ ನಿಗದಿ ಪಡಿಸಲಾಗಿದ್ದು, ಇದಕ್ಕಿಂತಲೂ ಹೆಚ್ಚು ಶುಲ್ಕ ವಸೂಲಿ ಮಾಡುವಂತಿಲ್ಲ. ಸೇವಾ ಸಿಂಧು ಮೂಲಕ ಕಾರ್ಮಿಕರು ಆನ್‌ಲೈನ್ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಅರ್ಹ ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿ ಸದಸ್ಯರನ್ನಾಗಿ ನೋಂದಾಯಿಸಿಕೊಂಡು, ಕಾರ್ಮಿಕ ಇಲಾಖೆಯಿಂದ ವಿವಿಧ ಸೌಲಭ್ಯ ನೀಡಲಾಗುತ್ತಿದೆ. ಕಟ್ಟಡ ಕಾರ್ಮಿಕರು ಮಧ್ಯಸ್ಥರು, ಸಂಘ-ಸಂಸ್ಥೆಗಳನ್ನು ನೋಂದಣಿಗೆ ಸಂಪರ್ಕಿಸದೆ ಇಲಾಖೆ ಮೂಲಕ ನೋಂದಣಿ, ನವೀಕರಣ ಇನ್ನಿತರ ಅರ್ಜಿ ಪಡೆಯಬಹುದು, ಇಲಾಖೆಯ ಕಾರ್ಮಿಕ ನಿರೀಕ್ಷಕರು ನೋಂದಣಿ ಅಧಿಕಾರಿಗಳಾಗಿರುತ್ತಾರೆ. ಕಾರ್ಮಿಕ ಇಲಾಖೆ ಹೆಸರು ದುರುಪಯೋಗ ಪಡಿಸಿಕೊಂಡು ಹೆಚ್ಚು ಹಣ ಕೇಳಿದರೆ, ದೂ.ಸಂ. 0836-2353662, 2356503ಗೆ ಕರೆ ಮಾಡಬಹುದೆಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.