ಅರಭಾವಿಯಲ್ಲಿ ಶಾಸಕ ಜಾರಕಿಹೊಳಿ ಪ್ರಚಾರ
Team Udayavani, Apr 30, 2018, 5:28 PM IST
ಮೂಡಲಗಿ: ಈ ಬಾರಿ ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿ ದಾಖಲೆ ಬರೆಯುವಂತೆ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ, ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಅರಭಾವಿ ಮತಕ್ಷೇತ್ರದ ತಿಮ್ಮಾಪುರ, ಹಳೇಯರಗುದ್ರಿ, ಹೊಸಯರಗುದ್ರಿ, ವೆಂಕಟಾಪುರ, ಢವಳೇಶ್ವರ, ಅರಳಿಮಟ್ಟಿ ಹಾಗೂ ಅವರಾದಿಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಚುನಾವಣೆಯನ್ನು ಇಡೀ ರಾಜ್ಯವೇ ಅರಭಾವಿ ಕ್ಷೇತ್ರದತ್ತ ನೋಡುವಂತೆ ಕಾರ್ಯಕರ್ತರು ದುಡಿಯುವಂತೆ ಕೋರಿದರು.
ಅರಭಾವಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಬೇಕು. ಈಗಾಗಲೇ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿರುವುದರಿಂದ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬಂದರೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ನೆರವು ಸಿಗುತ್ತದೆ. ಯಡಿಯೂರಪ್ಪನವರು ಮುಖ್ಯಮಂತ್ರಿಯಾದರೆ ನೀರಾವರಿಗೆ ಪ್ರಮುಖ ಪ್ರಾಶಸ್ತ್ಯ ದೊರೆಯಲಿದೆ ಎಂದರು.
ಜಿಪಂ ಸದಸ್ಯ ಗೋವಿಂದ ಕೊಪ್ಪದ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಮಾತನಾಡಿದರು. ಎಪಿಎಂಸಿ ಮಾಜಿ ಉಪಾಧ್ಯಕ್ಷ ಎಂ.ಎಂ. ಪಾಟೀಲ, ನಿಂಗಪ್ಪಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ಗಿರೀಶ ನಾಡಗೌಡ, ಕಲ್ಲಪ್ಪ ರಂಜನಗಿ, ಸತ್ತೆಪ್ಪ ನಾಯಿಕ, ಹಣಮಂತ ಪೂಜೇರಿ, ದೇವನಗೌಡ ಪಾಟೀಲ, ಅಲ್ಲಪ್ಪ ಕುದರಿಮನಿ, ಬಸವರಾಜ ರಂಜನಗಿ, ಗಿರೀಶ ಹಳ್ಳೂರ, ಸಂಗಪ್ಪ ಕಂಟಿಕಾರ, ಬಸಪ್ಪ ಬಾರ್ಕಿ, ಸಿ.ಎಲ್. ನಾಯಿಕ, ಅಲ್ಲಪ್ಪ ನಂದಗನ್ನವರ, ದುಂಡಪ್ಪ ಪಾಟೀಲ, ಈರಣ್ಣಾ ಜಾಲಿಬೇರಿ, ಮಹಾದೇವ ನಾಡಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.