ಮುತ್ತಳ್ಳಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಚಿರತೆ
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಸುದ್ದಿ ! ಅರಣ್ಯ ಇಲಾಖೆ ಸಿಬ್ಬಂದಿ ನಿಗಾ
Team Udayavani, Jun 25, 2021, 4:06 PM IST
ಕಲಘಟಗಿ: ಉತ್ತರ ಕನ್ನಡ ಜಿಲ್ಲೆ ಧುಂಡಶಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಶಿಗ್ಗಾವಿ ತಾಲೂಕಿನ ಮುತ್ತಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಚಿರತೆ ಅಡ್ಡಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.
ಇಲ್ಲಿನ ವಲಯಾರಣ್ಯಾಧಿಕಾರಿ ಶ್ರೀಕಾಂತ ಪಾಟೀಲ ಕಾರ್ಯೋನ್ಮುಖರಾಗಿದ್ದು, ತಾಲೂಕಿನ ಕೊನೆಯಂಚಿನ ಬೆಂಡಲಗಟ್ಟಿ-ಬೀರವಳ್ಳಿ ಗ್ರಾಮಗಳ ಜಮೀನುಗಳಿಗೆ ಹೊಂದಿಕೊಂಡ ಅರಣ್ಯ ಪ್ರದೇಶದಲ್ಲಿ ತೀವ್ರ ನಿಗಾ ವಹಿಸಲು ಕಾರ್ಯಾಚರಣೆ ಇಂದಿಗೂ ಮುಂದುವರಿಸಲಾಗಿದೆ. ತಾಲೂಕಿನ ಅರಣ್ಯ ವ್ಯಾಪ್ತಿ ಪ್ರದೇಶದಿಂದ ಕೆಲವೇ ಕಿಲೋಮೀಟರ್ ಅಂತರದಲ್ಲಿರುವ ಶಿಗ್ಗಾವಿ ತಾಲೂಕಿನ ಮುತ್ತಳ್ಳಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ಜಮೀನಿನಲ್ಲಿ ಚಿರತೆ ಅಡ್ಡಾಡಿರುವ ಕುರಿತು ಅದರ ಹೆಜ್ಜೆ ಗುರುತು ಕಾಣಿಸಿಕೊಂಡಿದೆ.
ಚಿರತೆಯ ಚಲನ ವಲನದ ಕುರಿತು ನಿಗಾ ವಹಿಸಲು ಉಪ ವಲಯಾರಣ್ಯಾ ಧಿಕಾರಿ ನೇತೃತ್ವದಲ್ಲಿ ಇಲಾಖಾ ಸಿಬ್ಬಂದಿಯ ಎರಡು ತಂಡಗಳನ್ನು ರಚಿಸಲಾಗಿದೆ. ತಮ್ಮ ಸಿಬ್ಬಂದಿ ಗಡಿಯಂಚಿನ ಭಾಗದಲ್ಲಿ ಎರಡು ದಿನಗಳಿಂದ ಠಿಕಾಣಿ ಹೂಡಿ ನಿಗಾ ವಹಿಸಿದೆ ಎಂದು ವಲಯಾರಣ್ಯಾ ಧಿಕಾರಿ ಶ್ರೀಕಾಂತ ಪಾಟೀಲ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.