ಅಧಿಕಾರಿಗಳಿಗೆ ಮತ ಪಾಠ
Team Udayavani, May 10, 2018, 4:46 PM IST
ಧಾರವಾಡ: ವಿಧಾನಸಭಾ ಚುನಾವಣೆ ಅಂಗವಾಗಿ ಮೇ 15ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗೆ ನಿಯೋಜಿಸಿದ ಅಧಿಕಾರಿಗಳು, ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾ ವೀಕ್ಷಕ ರೂಪಕ್ ಮಜುಂದಾರ್ ಹೇಳಿದರು.
ನಗರದ ಆಲೂರು ವೆಂಕಟರಾವ್ ಭವನದಲ್ಲಿ ಸೆಕ್ಟರ್ ಅಧಿಕಾರಿಗಳು, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕ ಅ ಧಿಕಾರಿಗಳಿಗೆ ಮತ ಎಣಿಕೆ ಕಾರ್ಯ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಇದುವರೆಗೆ ಮುಕ್ತ, ನ್ಯಾಯಸಮ್ಮತ, ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯುತ್ತಿದೆ. ಮತ ಎಣಿಕೆ ಕಾರ್ಯ ಸಹ ಸಮರ್ಪಕವಾಗಿ ನಡೆಯುವಂತೆ ಎಚ್ಚರ ವಹಿಸಬೇಕು. ಯಾವುದೇ ಒತ್ತಡಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕು. ಪ್ರತಿ ಸುತ್ತಿನ ನಂತರ ಅಭ್ಯರ್ಥಿಯ ಪ್ರತಿನಿಧಿಗಳ ಸಹಿ ಪಡೆಯಬೇಕು ಎಂದರು.
ಜಿಲ್ಲಾ ಚುನಾವಣಾಧಿಕಾರಿ ಡಾ|ಎಸ್ .ಬಿ.ಬೊಮ್ಮನಹಳ್ಳಿ ಮಾತನಾಡಿ, ಕೃಷಿ ವಿವಿಯಲ್ಲಿ ಜಿಲ್ಲೆಯ ಎಲ್ಲ ಏಳೂ ಕ್ಷೇತ್ರಗಳ ಮತ ಎಣಿಕೆ ನಡೆಸಲಾಗುವುದು. ಈಗಾಗಲೇ ಮತ ಎಣಿಕೆ ಕೇಂದ್ರ ಸಜ್ಜುಗೊಂಡಿದೆ. ಪ್ರತಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ನಿಗದಿಪಡಿಸಲಾಗಿದೆ. ಇವಿಎಂ ಸ್ಟ್ರಾಂಗ್ ರೂಮ್ ಸ್ಥಾಪಿಸಲಾಗಿದೆ ಎಂದರು.
ಮತ ಎಣಿಕಾ ಕೇಂದ್ರದಲ್ಲಿ ಮೀಡಿಯಾ ಸೆಂಟರ್, ಪೊಲೀಸ್ ವೇಟಿಂಗ್ ರೂಮ್, ವೀಕ್ಷಕರ ಕೊಠಡಿ ಹಾಗೂ ಡಿಇಒ ರೂಮ್‌ಗಳನ್ನು ನಿಗದಿಪಡಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗಾಗಿ 14 ಟೇಬಲ್‌ನಂತೆ ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಅಂದಾಜು 15 ರಿಂದ 20 ಸುತ್ತುಗಳಲ್ಲಿ ನಡೆಯಲಿದೆ ಎಂದರು.
ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಬೇಕಿದ್ದು, ಇದಕ್ಕಾಗಿ ನಿಯೋಜಿಸಲಾದ ಅಧಿಕಾರಿಗಳು ಮೇ 15ರಂದು ಬೆಳಿಗ್ಗೆ 5:30 ಗಂಟೆಗೆ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳಬೇಕು. ತಮಗೆ ಹಂಚಿಕೆಯಾದ ವಿಧಾನಸಭಾ ಕ್ಷೇತ್ರ ಹಾಗೂ ಟೇಬಲ್ ಸಂಖ್ಯೆಯನ್ನು ತಿಳಿದುಕೊಳ್ಳಬೇಕು ಎಂದರು.
ಬೆಳಿಗ್ಗೆ 8:00 ಗಂಟೆಗೆ ಸರಿಯಾಗಿ ಪೋಸ್ಟಲ್ ಮತಗಳ ಎಣಿಕೆ ಕ್ಷೇತ್ರ ಚುನಾವಣಾಧಿ ಕಾರಿಗಳ ಟೇಬಲ್‌ನಲ್ಲಿ ಪ್ರಾರಂಭಗೊಂಡು, ಉಳಿದಂತೆ ಮತಗಟ್ಟೆಗಳಲ್ಲಿ ಇವಿಎಂ ಮೂಲಕ ದಾಖಲಾದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗುತ್ತದೆ. ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.
ಉಪವಿಭಾಗಾಧಿಕಾರಿ ಪಿ. ಜಯಮಾಧವ ಮಾತನಾಡಿದರು. ಅಪರ ಜಿಲ್ಲಾಧಿ ಕಾರಿ ರಮೇಶ ಕಳಸದ, ಪ್ರೊಬೆಷನರಿ ಉಪವಿಭಾಗಾ ಧಿಕಾರಿ ಶೇಖರ್ ಇದ್ದರು. ತರಬೇತಿಯಲ್ಲಿ ಚುನಾವಣಾ ಮತ ಎಣಿಕೆಗೆ ನಿಯೋಜನೆಗೊಂಡಿರುವ ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.