Hubli; ಇದು ದಪ್ಪ ಚರ್ಮದ ಸರ್ಕಾರ; ಕೂಡಲೇ ನಾಗೇಂದ್ರ ರಾಜೀನಾಮೆ ನೀಡಲಿ: ಪ್ರಹ್ಲಾದ ಜೋಶಿ


Team Udayavani, Jun 1, 2024, 5:03 PM IST

joshi

ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿ ನಡೆದಿರುವುದು ಬಹುದೊಡ್ಡ ಹಗರಣ. ಇದರಲ್ಲಿ ಸರ್ಕಾರದ ನೇರಪಾತ್ರ ಎದ್ದು ಕಾಣಿಸುತ್ತಿದ್ದು, ಕೂಡಲೇ ನಾಗೇಂದ್ರ ಸಚಿವ ಸ್ದಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕೆ ನಿಗಮದ ಹಣ ಬೇರೆ ಖಾತೆಗೆ ವರ್ಗಾವಣೆ ಆಯಿತೆಂದು ಸರ್ಕಾರ ಹೇಳಿಲ್ಲ. ಈ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳದೆ ಇದ್ದಲ್ಲಿ ಈ ಹಗರಣ ಮುಚ್ಚಿ ಹೋಗುತ್ತಿತ್ತು ಎಂದು ಗಂಭೀರ ಆರೋಪ ಮಾಡಿದರು.

ಹಗರಣದ ಹೊಣೆ ಹೊತ್ತು ಮಂತ್ರಿ ರಾಜೀನಾಮೆ ಕೊಟ್ಟಿಲ್ಲ. ಅಷ್ಟರಮಟ್ಟಿಗೆ ಇದು ದಪ್ಪ ಚರ್ಮದ ಸರ್ಕಾರ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ಕೊಡಬೇಕು. ಅವರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಬೇಕು. ಯೂನಿಯನ್ ಬ್ಯಾಂಕಿನ ಅಧಿಕಾರಿಗಳು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ.‌ ಸರ್ಕಾರಿ ದುಡ್ಡು ಹೊಡೆದು ಚುನಾವಣೆಗೆ ಬಳಸುವಂತಹ ವ್ಯವಸ್ಥಿತ ಷಡ್ಯಂತ್ರ ಇದಾಗಿದೆ.‌ ಮುಖ್ಯಮಂತ್ರಿ ಮತ್ತಿತರರನ್ನು ವಿಚಾರಣೆಗೆ ಗುರಿಪಡಿಸಬೇಕು. ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು. ರಾಜ್ಯ ಸರ್ಕಾರವೇ ಆ ಕುರಿತು ಶಿಫಾರಸು ಮಾಡಬೇಕು ಎಂದರು.

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರಕಣರಕ್ಕೂ ಈ ಹಗರಣಕ್ಕೂ ಬಹಳ ವ್ಯತ್ಯಾಸವಿದೆ. ಈಶ್ವರಪ್ಪ ಪ್ರಕರಣದಲ್ಲಿ ಯಾವುದೇ ದಾಖಲೆಗಳಿರಲಿಲ್ಲ. ಈ ಪ್ರಕರಣದಲ್ಲಿ ಹಣಕಾಸು ವರ್ಗಾವಣೆಯ ದಾಖಲೆಗಳಿವೆ. ಅವರು ಏನೇನು ಮಾಡಬೇಕು ಅದೆಲ್ಲ ಪ್ರಯತ್ನ ಮಾಡುತಿದ್ದಾರೆ. ಆದರೂ ಸಾಕ್ಷಿ ನಾಶ, ಬೆದರಿಸುವ ಕೆಲಸ ಆಗುತ್ತಿದೆ. ಕೂಡಲೇ ಸಚಿವ ನಾಗೇಂದ್ರನನ್ನು ಬಂಧಿಸಬೇಕು, ರಾಜೀನಾಮೆ ಪಡೆಯಬೇಕು ಎಂದರು.

ಕಾಂಗ್ರೆಸ್ ಪಕ್ಷದಲ್ಲಿ 100 ಪರ್ಸೆಂಟ್ ಭ್ರಷ್ಟಾಚಾರದಲ್ಲಿದೆ. ಗುತ್ತಿಗೆದಾರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ ಪಾಟೀಲ್ ಮಾದರಿಯಲ್ಲಿ ಆತ್ಮಹತ್ಯೆಯಾಗಿದೆ. ಇನ್ನೊಂದೆಡೆ ಚೆಕ್‌ ಮೂಲಕ ಭ್ರಷ್ಟಾಚಾರವಾಗಿದೆ. ಇದಕ್ಕಿಂತ ಗಂಭೀರತೆ ಏನು ಬೇಕು. ಹಿಂದೆ ಇಂದಿರಾ ಗಾಂಧಿ ಕಾಲದಲ್ಲಿ ನಗರವಾಲಾ ಪ್ರಕರಣವಾಗಿತ್ತು. ಇದು ಅದಕ್ಕೆ ಹೋಲುತ್ತದೆ ಎಂದರು.

ಕೇರಳದಲ್ಲಿ ನನ್ನ ವಿರುದ್ಧ ಭೈರವಿ ಯಾಗ ಪೂಜೆ ಮಾಡುತ್ತಿದ್ದಾರೆಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರಕ್ರಿಯೆಯಿಸಿದ ಅವರು, ನೀವು ಸರಿಯಾಗಿದ್ದರೆ ಯಾಕೆ ಆಗತ್ತದೆ. ದೇವರು ಇರುವುದು ಆಶೀರ್ವಾದ ಮಾಡುವುದಕ್ಕೆ. ಯಾವುದೇ ಕೆಡುಕು ಮಾಡುವುದಕ್ಕೆ ಅಲ್ಲ. ನಾನು ಗೆಲ್ಲಲಿ ಅಂತಾ ಪೂಜೆ ಮಾಡುತ್ತೇವೆ.‌ ಮತ್ತೊಬ್ಬರು ಸೋಲಲಿ ಅಂತಾ ಪೂಜೆ ಮಾಡಿದರೆ ದೇವರು ಮಾನ್ಯ ಮಾಡಲ್ಲ ಎಂದರು.

ಸಂಸದ ಪ್ರಜ್ವಲ ರೇವಣ್ಣ ಕ್ಷಮಿಸಲಾರದಂತಹ ತಪ್ಪು ಮಾಡಿದ್ದು, ಹೀಗಾಗಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರನ್ನು ಎಸ್ಐಟಿ ಕಸ್ಟಡಿಗೆ ಕೊಟ್ಟಿದ್ದಾರೆ. ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು. ಇದೊಂದು ಗಂಭೀರವಾದ ಪ್ರಕರಣವಾಗಿದ್ದು, ದೇಶದಲ್ಲಿ ಮಹಿಳೆಯರನ್ನು ನಾವು ಗೌರವದಿಂದ ಕಾಣುತ್ತೇವೆ. ಈ ರೀತಿಯ ಘಟನೆ ನಡೆದಿರುವುದು ಹೇಸಿಗೆ ಹುಟ್ಟಿಸುವಂತಾಗಿದೆ. ಮನಸ್ಸಿಗೆ ಕಿರಿಕಿರಿ ಆಗುತ್ತಿದೆ. ಅದನ್ನು ಅತ್ಯಂತ ಕಟ್ಟುನಿಟ್ಟಾಗಿ ತನಿಖೆಗೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆಯಿದೆ. ತ್ವರಿತ ಗತಿಯಲ್ಲಿ ತನಿಖೆ ಮುಗಿಸಿ ಗರಿಷ್ಠ ಶಿಕ್ಷೆ ಕೊಡುವಂತಾಗಬೇಕು ಎಂದರು.

ಪ್ರಜ್ವಲ ಕ್ಷಮೆಗೆ ಅರ್ಹರಲ್ಲ: ಪ್ರಜ್ವಲ ರೇವಣ್ಣ ಕ್ಷಮೆ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆರೋಪಿ ಸ್ಥಾನದಲ್ಲಿದ್ದವರು ಕ್ಷಮೆ ಕೇಳಿದ ಕೂಡಲೇ ಬಿಟ್ಟುಬಿಡಲು ಆಗುತ್ತದೆಯೇ? ಯಾಕೆ ಕ್ಷಮೆ ಕೇಳಿದರೆಂದು ಅವರು ಉತ್ತರ ಕೊಡಲಿ, ಕ್ಷಮೆ ಕೇಳುವುದಿದ್ದರೂ ಸಂತ್ರಸ್ತರ ಕ್ಷಮೆ ಕೇಳಲಿ. ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷೆಯಾಗಲೆಬೇಕು. ಪೆನ್‌ಡ್ರೈವ್ ಹಂಚಿಕೆ ಇತ್ಯಾದಿಗಳನ್ನು ನೋಡಿದಾಗ ಪ್ರಜ್ವಲ ಕ್ಷಮೆಗೆ ಅರ್ಹರಲ್ಲ ಎಂದರು.

ಟಾಪ್ ನ್ಯೂಸ್

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

siddaramaiah

MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

vidhana-soudha

2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ

Vijayendra (2)

50 crores ಆಮಿಷ ಸುಳ್ಳಿನ ಕಂತೆ; ಸೂಕ್ತ ಸಾಕ್ಷಿ ನೀಡಿ ಇಲ್ಲವೇ ED ತನಿಖೆಗೊಪ್ಪಿಸಿ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.