ಜಾತಿ ಬದಲು ವ್ಯಕ್ತಿತ್ವದಿಂದ ಗುರುತಿಸುವಂತಾಗಲಿ: ಮತ್ತಿಕಟ್ಟಿ

Team Udayavani, Jul 31, 2017, 12:46 PM IST

hub2.jpg

ಧಾರವಾಡ: ಪರಿಶ್ರಮ ಹಾಗೂ ಶ್ರದ್ಧೆಯಿಂದ ಜನರು ನಮ್ಮನ್ನು ಗುರುತಿಸುವಂತಾಗಬೇಕೇ ಹೊರತು ಜಾತಿಯಿಂದ ಗುರುತಿಸುವಂತೆ ಆಗಬಾರದು ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಹೇಳಿದರು. ನಗರದ ಆಲೂರು ವೆಂಕಟರಾವ್‌ ಭವನದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

ಸಮುದಾಯದಲ್ಲಿನ ಭಿನ್ನಾಭಿಪ್ರಾಯ ಹೆಚ್ಚಿಸಲು ಅನೇಕರು ಪ್ರಯತ್ನಿಸುತ್ತಾರೆ. ಅದನ್ನು ತಡೆದು ಮುಂದೆ ಬರುವ ಪ್ರಯತ್ನ ಮಾಡಬೇಕು. ಉಳಿದ ಸಮಾಜವನ್ನೂ ಗೌರವಿಸಬೇಕು. ಲಿಂಗಾಯತರು ಸಮಾಜಕ್ಕೆ ನೀಡಿದ ಕೊಡುಗೆ ಅಪಾರ. ಆದರೆ ಇಂದು ಸಂಘರ್ಷಮಯ ವಾತಾವರಣದಲ್ಲಿ ಸಿಲುಕುವಂತಾಗಿದೆ. ಇಂತಹ ಸಂದರ್ಭವನ್ನು ಮೀರಿ ಮೇಲೇಳುವ ಶಕ್ತಿ ಲಿಂಗಾಯತ ಸಮುದಾಯಕ್ಕೆ ಇದೆ ಎಂದರು. 

ಮೊಬೈಲ್‌ಗಿಂತ ಲಿಂಗದೀಕ್ಷೆ ಮುಖ್ಯ: ಜಿಪಂ ಅಧ್ಯಕ್ಷೆ ಚೈತ್ರಾ ಶಿರೂರ ಮಾತನಾಡಿ, ಮೊಬೈಲ್‌ ಗೆ ಮಾರು ಹೋಗಿರುವ ಮಕ್ಕಳಿಗೆ ಧರ್ಮ, ಸಂಸ್ಕೃತಿ ಹಾಗೂ ಸಂಸ್ಕಾರದ ಕೊರತೆ ಇದೆ. ಈ ಕೊರತೆ ನೀಗಿಸುವ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಲಿಂಗದೀಕ್ಷೆ ಹಾಗೂ ಲಿಂಗತತ್ವ, ಬಸವತತ್ವದ ಅರಿವು ನೀಡಬೇಕು.

ಸ್ಮಾರ್ಟ್‌ಪೋನ್‌ಗಳ ಮೇಲೆ ಬೆರಳು ಆಡಿಸುವ ಬದಲು ಲಿಂಗಕ್ಕೆ ವಿಭೂತಿ ಹಚ್ಚುವ ಕೆಲಸ ಮಕ್ಕಳಿಂದ ಆಗಬೇಕಿದೆ ಎಂದು ಹೇಳಿದರು. ಕಾರ್ಯಕ್ರಮ ಉದ್ಘಾಟಿಸಿದ ಸಂಘದ ರಾಜ್ಯಾಧ್ಯಕ್ಷ ಡಾ| ಶಿವಬಸಪ್ಪ ಹೆಸರೂರು ಮಾತನಾಡಿ, ಮಕ್ಕಳು ಕೇವಲ ಅಂಕಗಳನ್ನು ಪಡೆಯುವತ್ತ ಗಮನ ಹರಿಸದೆ ಮುಕ್ತ ಮನಸ್ಸಿನಿಂದ ಒಳ್ಳೆಯ ಕಾರ್ಯಗಳನ್ನು ಮಾಡುವಲ್ಲಿ ಸಹ ಗಮನಹರಿಸಬೇಕು ಎಂದರು. 

ಗದಗ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಸಿದ್ದು ಯಾಪಲಪರವಿ ಮಾತನಾಡಿ, ಇಂಗ್ಲೆಂಡ್‌ನ‌ಲ್ಲಿ ಬಸವಣ್ಣನವರ ಮೂರ್ತಿ ಸ್ಥಾಪಿಸುವ ಮೂಲಕ ಅವರ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರುವಂತಹ ಕೆಲಸವಾಗಿದ್ದು ಹೆಮ್ಮೆಯ ಸಂಗತಿ. ಸಮಾಜವನ್ನು ಜಾಗರೂಕತೆಯಿಂದ ಮುನ್ನಡೆಸುವ ಜವಾಬ್ದಾರಿ ಸಂಘದ ಮೇಲಿದೆ.

ಹೀಗಾಗಿ ಸಂಘದಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಹೆಚ್ಚು ಉತ್ತಮ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು. ಹಾಸನದ ಅರಕಲಗೂಡಿನ ಬಸವಪಟ್ಟಣದ ಶ್ರೀ ತೋಂಟದಾರ್ಯ ಸಂಸ್ಥಾನಮಠದ ಸ್ವತಂತ್ರ ಬಸವಲಿಂಗ ಶಿವಯೋಗಿಗಳು ಸಾನ್ನಿಧ್ಯ ವಹಿಸಿದ್ದರು. ಸಂಘದ ತಾಲೂಕಾಧ್ಯಕ್ಷ ಶೇಖರ ಕವಳಿ ಅಧ್ಯಕ್ಷತೆ ವಹಿಸಿದ್ದರು.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ರ್‍ಯಾಂಕ್‌ ಪಡೆದ ರಾಚಪ್ಪ ತಿರ್ಲಾಪುರ, ಪ್ರಿಯದರ್ಶಿನಿ ಸಾಣಿಕೊಪ್ಪ, ಸ್ನೇಹಾ ಕೋರಿ ಹಾಗೂ ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಪಿಎಂಸಿ ಮಾಜಿ ಅಧ್ಯಕ್ಷ ಶಿವಶಂಕರ ಹಂಪಣ್ಣವರ, ಡಾ| ಎಸ್‌.ಆರ್‌. ಜಂಬಗಿ, ಡಾ| ಅಮೃತ ಮಹಾಬಲಶೆಟ್ಟಿ, ವಿ.ಸಿ. ಸವಡಿ, ಜಿಲ್ಲೆ-ತಾಲೂಕು ಘಟಕದ ಪದಾಧಿ ಕಾರಿಗಳು ಇದ್ದರು. ರಾಜಶೇಖರ ಉಪ್ಪಿನ ಸ್ವಾಗತಿಸಿದರು.  

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.