ಸಿದ್ಧಾರ್ಥ ವಿರುದ್ಧ ತನಿಖೆ ಮಾಡಲು ಪತ್ರ


Team Udayavani, May 6, 2017, 3:38 PM IST

hub3.jpg

ಹುಬ್ಬಳ್ಳಿ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕಸ ವಿಲೇವಾರಿ ಹಗರಣದಲ್ಲಿ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅಳಿಯ ವಿ.ಜಿ.ಸಿದ್ಧಾರ್ಥ ಪಾಲ್ಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ಸಮಗ್ರ ವಿಚಾರಣೆ ನಡೆಸಬೇಕೆಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಸಂಸ್ಥಾಪಕ ಎಸ್‌. ಆರ್‌.ಹಿರೇಮಠ ತಿಳಿಸಿದರು. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ಕಸ ವಿಲೇವಾರಿಯಲ್ಲಿ ನೂರಾರು ಕೋಟಿ ರೂ.ಗಳ ಹಗರಣ ನಡೆದಿದ್ದು, ಸಮರ್ಪಕ ತನಿಖೆ ನಡೆಸುವಂತೆ ಮೇ 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ. ಕಸ ವಿಲೇವಾರಿ ಹಗರಣದಲ್ಲಿ ಡಾ| ಗಣೇಶ, ಪ್ರವೀಣ ಹಾಗೂ ವಿ.ಜಿ.ಸಿದ್ಧಾರ್ಥ ಶಾಮೀಲಾಗಿರುವುದು ಕಂಡು ಬಂದಿದೆ.

ಅಳಿಯನನ್ನು ರಕ್ಷಿಸುವುದಕ್ಕಾಗಿಯೇ ಎಸ್‌.ಎಂ.ಕೃಷ್ಣ ಬಿಜೆಪಿಗೆ ಸೇರಿದ್ದಾರೆ ಎಂದರು. ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸಾಕ್ಷಿಗಳನ್ನು ಧ್ವಂಸಮಾಡಿ ಟೆರ್ರಾ ಫಾರ್ಮಾ ಬಯೋ ಟೆಕ್ನಾಲಜಿ ಹಾಗೂ ಇನ್‌ಫ್ರಾಟೆಕ್‌ ಲಿಮಿಟೆಡ್‌ ಸಂಸ್ಥೆಗಳು ಕಾನೂನು ಬಾಹಿರವಾಗಿಕೆಲಸ ಮಾಡುತ್ತಿವೆ.

ಬಿಬಿಎಂಪಿಯಲ್ಲಿ  ನಡೆದಿರುವ ಹಗರಣ ತುಂಬಾ ಗಂಭೀರವಾಗಿದ್ದು, ಸರ್ಕಾರ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಹಾಗೂ ತಪ್ಪಿತಸ್ಥ ಕಂಪನಿಗಳನ್ನು ಕಪ್ಪು ಪಟ್ಟಿಗೆಸೇರಿಸಬೇಕು ಎಂದು ಆಗ್ರಹಿಸಿದರು. 

ಜಾಥಾಕ್ಕೆ ಉತ್ತಮ ಸ್ಪಂದನೆ: ಮಂಡ್ಯದಲ್ಲಿ ಆರಂಭಗೊಂಡು ರಾಯಚೂರಿನಲ್ಲಿ ಮುಕ್ತಾಯಗೊಂಡ ಜನಪರ್ಯಾಯ ಕಟ್ಟೋಣ ಜಾಥಾಕ್ಕೆ ಉತ್ತಮ ಪ್ರತಿಕ್ರಿಯೆ ಲಭಿಸಿತು. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ದುಷ್ಟ ರಾಜಕಾರಣದ ವಿರುದ್ಧ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜಾಥಾ ನಡೆಯಿತು.

ಜನಾಂದೋಲನಗಳ ಮಹಾಮೈತ್ರಿಗೆ ಜಾಥಾ ಪೂರಕವಾಗಿದೆ ಎಂದರು. ಪ್ರಬಲ ಚಳವಳಿ ಬೆಳೆಸುವುದು ಹಾಗೂ ಪರ್ಯಾಯ ರಾಜಕೀಯ ಆಂದೋಲನ ಹುಟ್ಟು ಹಾಕುವುದು  ಇದರ ಉದ್ದೇಶವಾಗಿದೆ. ಎಲ್ಲ ಜೀವಪರ ಶಕ್ತಿಗಳನ್ನು ಒಗ್ಗೂಡಿಸಿ ಜನರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಹಕ್ಕುಗಳಿಗಾಗಿ ಹೋರಾಟ ನಡೆಸಲಾಗುವುದೆಂದರು. 

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.