ಪರವಾನಗಿ ಕಡ್ಡಾಯ; ಚಿಲ್ಲರೆ ವ್ಯಾಪಾರಿಗಳ ಪ್ರತಿಭಟನೆ
ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಯಾವುದೇ ಹೊಸ ಪರವಾನಗಿ ನಿಯಮದ ಅಗತ್ಯವೇ ಇಲ್ಲ
Team Udayavani, Aug 30, 2022, 5:34 PM IST
ಧಾರವಾಡ: ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಚಿಲ್ಲರೆ ವ್ಯಾಪಾರಿಗಳಿಗೆ ಬೈಲಾಗಳ ಮೂಲಕ ಲೈಸನ್ಸ್ ಕಡ್ಡಾಯಗೊಳಿಸುವ ಕಾಯ್ದೆ ಜಾರಿ ಖಂಡಿಸಿ ಕರ್ನಾಟಕ ರಾಜ್ಯ ಸಣ್ಣ ಬೀಡಿ-ಸಿಗರೇಟು ಮಾರಾಟಗಾರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಹಿಂದಿ ಪ್ರಚಾರ ಸಭಾ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು, ಕರ್ನಾಟಕ ಮುನಿಸಿಪಾಲಿಟಿಗಳ (ಸಿಗರೇಟುಗಳು ಮತ್ತಿತರೆ ತಂಬಾಕು ಉತ್ಪನ್ನಗಳ ಮಾರಾಟ ನಡೆಸುವ ಸ್ಥಳಗಳ ನಿಯಂತ್ರಣಗಳು ಮತ್ತು ತನಿಖೆ) ಮಾದರಿ ಬೈಲಾಗಳು-2020ರ ಅನುಷ್ಠಾನ ಖಂಡಿಸಲಾಯಿತು. ಅಲ್ಲದೇ ಡಿಸಿ ಕಚೇರಿ ಎದುರು ಕೆಲಹೊತ್ತು ಪ್ರತಿಭಟನೆ ಕೈಗೊಂಡು, ಜಿಲ್ಲಾಡಳಿತದ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಣ್ಣ ವ್ಯಾಪಾರಿಗಳಿಗೆ ಲೈಸನ್ಸ್ ಪಡೆಯುವುದು ಸವಾಲಿನದಾಗಿದೆ. ಅವರಲ್ಲಿ ಪಾವತಿಸಲು ಹಣವೂ ಇಲ್ಲ, ಅನುಮತಿ ಪಡೆಯಲು ಅಗತ್ಯವಾದ ಕಾಗದಪತ್ರಗಳನ್ನು ಸಿದ್ಧಪಡಿಸುವ ಶಿಕ್ಷಣವೂ ಇಲ್ಲ. ಹೆಚ್ಚು ಕಾನೂನುಗಳು ಎಂದರೆ ನಮ್ಮ ಸದಸ್ಯರನ್ನು ಶೋಷಣೆ ಮಾಡಲು ಅಧಿಕಾರಿಗಳಿಗೆ ಹೆಚ್ಚು ಅವಕಾಶಗಳನ್ನು ನೀಡಿದಂತಾಗುತ್ತದೆ ಎಂದು ಆರೋಪಿಸಲಾಯಿತು.
ಲೈಸನ್ಸ್ ಮತ್ತು ನವೀಕರಣಗಳಿಗೆ ಹೆಚ್ಚುವರಿ ಖರ್ಚು ಮಾಡಲು ಅಸಾಧ್ಯವಾಗಿದೆ. ವ್ಯಾಪಾರಿಗಳಿಗೆ ಆದಾಯ ನಷ್ಟ ಉಂಟು ಮಾಡುವಂತಹ ಕಾನೂನುಗಳನ್ನು ಅನುಷ್ಠಾನಕ್ಕೆ ತರುವ ಮುನ್ನ ರಾಜ್ಯ ಸರ್ಕಾರ ಪರ್ಯಾಯ ಜೀವನೋಪಾಯಗಳನ್ನು ಪೂರೈಸಬೇಕು. ತಂಬಾಕು ಉತ್ಪನ್ನಗಳ ವ್ಯಾಪಾರಕ್ಕೆ ಯಾವುದೇ ಹೊಸ ಪರವಾನಗಿ ನಿಯಮದ ಅಗತ್ಯವೇ ಇಲ್ಲ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಸಂಘದ ವಕ್ತಾರ ರತ್ನಾಕರ ಶೆಟ್ಟಿ ಮಾತನಾಡಿ, ಈಗಾಗಲೇ ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದಾರೆ. ಈಗಿನ ಬೈಲಾದ ಕರಡಿನ ಪ್ರಕಾರ ತಂಬಾಕು ಉತ್ಪನ್ನ ಮಾರಾಟಗಾರರು ಪರವಾನಗಿ ಪಡೆಯಬೇಕು. ಪ್ರತಿವರ್ಷ ಪರವಾನಗಿ ನವೀಕರಣ ಮಾಡಿಕೊಳ್ಳಬೇಕು. ಚಿಲ್ಲರೆ ವ್ಯಾಪಾರಿಗಳಿಗೆ ಪರವಾನಗಿ ಪ್ರದರ್ಶಿಸುವುದು ಮತ್ತು ಸಲಹಾ ಪುಸ್ತಕ ಇರಿಸುವುದು ಇತ್ಯಾದಿಗಳಿಂದ ತೀವ್ರ ತೊಂದರೆಯಾಗಲಿದ್ದು, ಕೂಡಲೇ ಇದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಸುಕೇಶ ಶೆಟ್ಟಿ, ಶಿವಾರಮ್ ಶೆಟ್ಟಿ, ಜಯಕರ ಶೆಟ್ಟಿ, ಜಯರಾಮ ಪೂಜಾರಿ, ಬಾಬಣ್ಣ ಅಂಗಡಿ, ಸಮೀರ್ ಮುಲ್ಲಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.