ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ನೀಡಿ: ಗಂಗಾದೇವಿ
Team Udayavani, May 26, 2019, 10:08 AM IST
ಧಾರವಾಡ: ನಗರದ ಜಗನ್ಮಾತಾ ಅಕ್ಕಮಹಾದೇವಿ ಮಠದ ಬಸವ ಮಂಟಪದಲ್ಲಿ 10ನೇ ಶರಣೋತ್ಸವಕ್ಕೆ ಚಾಲನೆ ನೀಡಲಾಯಿತು.
ಧಾರವಾಡ: ಪ್ರಚಂಡ ಬಹುಮತದೊಂದಿಗೆ ಮತ್ತೂಮ್ಮೆ ಕೇಂದ್ರ ಸರಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಲಿಂಗಾಯತ ಧರ್ಮಕ್ಕೆ ಸ್ವತಂತ್ರ್ಯ ಧರ್ಮದ ಮಾನ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿ. ಇದು ಅವರ ಪ್ರಥಮ ನಿರ್ಧಾರವಾಗಲಿ ಎಂದು ಕೂಡಲ ಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.
ನಗರದ ಜಗನ್ಮಾತಾ ಅಕ್ಕಮಹಾದೇವಿ ಮಠದ ಬಸವ ಮಂಟಪದಲ್ಲಿ ಮಠದ 51ನೇ ವಾರ್ಷಿಕೋತ್ಸವ ಹಾಗೂ 10ನೇ ಶರಣೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಲಿಂಗಾಯತರ ಅಸ್ಮಿತೆಗಾಗಿ ನಡೆದ ಹೋರಾಟ ಅರ್ಥ ಮಾಡಿಕೊಂಡು ಈ ಹಿಂದಿನ ರಾಜ್ಯ ಸರಕಾರ ಮಾಡಿದ ಶಿಫಾರಸನ್ನು ಕೇಂದ್ರ ಸರಕಾರ ಅಂಗೀಕರಿಸಬೇಕು. ಈ ಮೂಲಕ ಬಿಜೆಪಿ ಬೆಂಬಲಿಸಿದ ಲಿಂಗಾಯತರ ಋಣ ತೀರಿಸಬೇಕು. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ 1940ರಿಂದಲೇ ಆರಂಭವಾಗಿದೆ. ಇದು ಯಾರ ಪರ ಹಾಗೂ ವಿರುದ್ಧದ ಹೋರಾಟವಲ್ಲ ಎಂದರು.
ಈ ಮೊದಲು ಕೇಂದ್ರದಲ್ಲಿ ಒಬ್ಬ ಲಿಂಗಾಯತರೂ ಮಂತ್ರಿಯಾಗಿಲ್ಲ. ಆದ್ದರಿಂದ ಈ ಬಾರಿ 4 ಲಿಂಗಾಯತ ಸಂಸದರನ್ನು ಕೇಂದ್ರ ಮಂತ್ರಿ ಮಾಡಿ ತಮಗೆ ಬೆಂಬಲಿಸಿದ ಲಿಂಗಾಯತರಿಗೆ ನ್ಯಾಯ ಕೊಡಬೇಕು ಎಂದು ಒತ್ತಾಯಿಸಿದರು.
ಚನ್ನಬಸವಾನಂದ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ, ಮಾತೆ ಜ್ಞಾನೇಶ್ವರಿ, ಮಾತೆ ದಾನೇಶ್ವರಿ, ಮಾತೆ ಸತ್ಯದೇವಿ, ಸಿದ್ದಣ್ಣ ನಟೇಗಲ್, ಕೆ.ಎಸ್. ಕೌಜಲಗಿ, ಕೆ.ಎಸ್. ಕೋರಿಶೆಟ್ಟರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.