ಲಿಂಗಾಯತ ಹೋರಾಟ ನಿಂತ ನೀರಲ್ಲ
Team Udayavani, Aug 26, 2019, 9:26 AM IST
ಹುಬ್ಬಳ್ಳಿ: ನಗರದಲ್ಲಿ ನಡೆದ ವಚನ ಶ್ರಾವಣ ಕಾರ್ಯಕ್ರಮದಲ್ಲಿ ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.
ಹುಬ್ಬಳ್ಳಿ: ಲಿಂಗಾಯತ ಧರ್ಮ ಹೋರಾಟ ನಿಂತ ನೀರಲ್ಲ, ಬದಲಾಗಿ ಅದು ನಿರಂತರ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾ ಹಾಗೂ ಬಸವ ಕೇಂದ್ರ ಹುಬ್ಬಳ್ಳಿ ಆಶ್ರಯದಲ್ಲಿ ನಡೆದ ವಚನ ಶ್ರಾವಣ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ಹೋರಾಟದಲ್ಲಿ ಹಲವರು ಹಲವು ರೀತಿಯ ಹೇಳಿಕೆ ನೀಡಿದರು. ಒಬ್ಬರು ಸ್ವಾಮೀಜಿ ಇಡೀ ರಾಜ್ಯವನ್ನೇ ಕಂಟ್ರೋಲ್ ಮಾಡಿದರು. ಇದರಿಂದ ಲಿಂಗಾಯತ ಹೋರಾಟ ಸ್ವಲ್ಪ ಹಿನ್ನಡೆಯಾಗಿದೆ ಎಂದರು.
ಲಿಂಗಾಯತ ಹೋರಾಟದ ಪ್ರಮುಖ ರೂವಾರಿ ಎಂ.ಬಿ.ಪಾಟೀಲ, ಎಸ್.ಎಂ.ಜಾಮದಾರ ಅವರು ಧಾರವಾಡ ಜಿಲ್ಲೆಯ ಇಬ್ಬರು ಮಠಾಧೀಶರು ಸೇರಿದಂತೆ ನಾಡಿನ ಹಲವಾರು ಮಠಾಧೀಶರನ್ನು ಭೇಟಿ ಮಾಡಿದ್ದರು. ಹೋರಾಟ ಉತ್ತಮವಾಗಿಯೇ ಸಾಗಿತ್ತು. ಮಧ್ಯದಲ್ಲಿ ರಾಜಕೀಯ ಸೇರಿ ಕೊಂಚು ಹಿನ್ನಡೆಯಾಯಿತು ಎಂದರು.
ಇತ್ತೀಚಿಗೆ ತಾವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಧರ್ಮದ ವಿಷಯದಲ್ಲಿ ಪಾಲ್ಗೊಳ್ಳದಂತೆ ತಿಳಿಸಿದ್ದೇನೆ ಎಂದರಲ್ಲದೇ ಬಸವ ಕೇಂದ್ರಗಳಿಂದ ಹೆಚ್ಚು ಹೆಚ್ಚು ಕಾರ್ಯಕ್ರಮ ಮಾಡುವ ಮೂಲಕ ಜನರಿಗೆ ಜಾಗೃತಿ ಮೂಡಿಸುವುದು ಅವಶ್ಯ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾದಿಂದ ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ನೆರವು ನೀಡಲಾಗುವುದು. ಧಾರವಾಡ ಜಿಲ್ಲೆಯಲ್ಲಿ ಮುರಘಾಮಠ ಹಾಗೂ ಮೂರುಸಾವಿರಮಠದ ಶ್ರೀಗಳು ಬಸವತತ್ವ ವಿಚಾರದಲ್ಲಿ ಗಟ್ಟಿಯಾಗಿ ನಿಲ್ಲಲಿದ್ದು, ಅವರಿಗೆ ನಾವೆಲ್ಲರೂ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.
ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪುರಾಣ-ಪ್ರವಚನ ಎಂದರೆ ತಾತ್ಸಾರ ಮನೋಭಾವ ಬೆಳೆಯುತ್ತಿದೆ. ಲಿಂಗ ಕಟ್ಟಿಕೊಳ್ಳಿ ಎಂದರೆ ಒಲ್ಲೆ ಎನ್ನುತ್ತಾರೆ. ಇಂದಿನ ಯುವ ಪೀಳಿಗೆಗೆ ಲಿಂಗದ ಮಹತ್ವ ತಿಳಿಸಿ ಜಾಗೃತಿ ಮೂಡಿಸಬೇಕಿದೆ. ಬಸವಾದಿ ಶರಣರ ಸಾಹಿತ್ಯ, ವಚನಗಳ ಕುರಿತು ಚಿಂತನೆ ನಡೆಯಬೇಕಿದೆ. ಕೇವಲ ಊಹೆ, ಕಲ್ಪನೆಗಳಿಂದ ಏನೂ ಸಾಧ್ಯವಿಲ್ಲ. ವಾಸ್ತವಿಕತೆ ಅವಶ್ಯವಿದ್ದು, ಅದರಿಂದಲೇ ಎಲ್ಲವನ್ನು ತಿಳಿಯಲು ಸಾಧ್ಯ ಎಂದರು.
ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ವಿ.ಗೊಂಗಡಶೆಟ್ಟಿ ಪ್ರಾಸ್ತಾವಿಕ ಮಾತನಾಡಿ, ಎಲ್ಲ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಹಾಕಬೇಕು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರಿಡಬೇಕು. ಈ ಹಿಂದೆ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಉಣಕಲ್ಲ ಕೆರೆಗೆ ಬಸವಸಾಗರ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿದರು.
ಬೆಳಗಾವಿ ಕೆಎಲ್ಇ ಜೆಎನ್ ಮೆಡಿಕಲ್ ಕಾಲೇಜಿನ ಡಾ| ಅವಿನಾಶ ಕವಿ ವಚನದ ಅನುಭಾವ ನೀಡಿದರು. ಲೋಕೇಶ ಕೊರವಿ, ಡಾ|ಬಿ.ವಿ.ಶಿರೂರ, ಪ್ರೊ|ಎಸ್. ವಿ.ಪಟ್ಟಣಶೆಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.