ಅಂಗನವಾಡಿಗಳಲ್ಲೇ ಎಲ್ಕೆಜಿ-ಯುಕೆಜಿ ಆರಂಭಿಸಲು ಒತ್ತಾಯ
ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದ ಆಗ್ರಹ
Team Udayavani, May 29, 2019, 2:56 PM IST
ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ-ಯುಕೆಜಿ ಆರಂಭಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದಿಂದ ತಹಶೀಲ್ದಾರ್ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.
ಹುಬ್ಬಳ್ಳಿ: ಅಂಗನವಾಡಿ ಕೇಂದ್ರಗಳಲ್ಲಿಯೇ ಸರಕಾರ ಎಲ್ಕೆಜಿ, ಯುಕೆಜಿ ಆರಂಭಿಸಬೇಕೆಂದು ಒತ್ತಾಯಿಸಿ ಸಿಐಟಿಯು ನೇತೃತ್ವದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಆಯ್ದ 4100 ಸರ್ಕಾರಿ ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸ್ಥಳಾಂತರಿಸಿ ಬಾಲಸ್ನೇಹಿ ಕೇಂದ್ರಗಳನ್ನಾಗಿ ಬಲವರ್ಧನೆಗೊಳಿಸಬೇಕು. ಸರ್ಕಾರಿ ಶಾಲೆಗಳ ಬದಲಾಗಿ ಅಂಗನವಾಡಿಯಲ್ಲೇ ಎಲ್ಕೆಜಿ-ಯುಕೆಜಿ ತರಗತಿ ಆರಂಭಿಸಬೇಕೆಂದು ಒತ್ತಾಯಿಸಲಾಯಿತು.
ಅಂಗನವಾಡಿ ನೌಕರರು ಮೇ 30 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದ್ದು ಅಂಗನವಾಡಿ ನೌಕರರು-ಸಹಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಇದೇ ಸಂದರ್ಭದಲ್ಲಿ ಕೋರಲಾಯಿತು. ಅಂಗನವಾಡಿ ಕಾರ್ಯಕರ್ತೆಯ ಹೋರಾಟಕ್ಕೆ ಸಿಐಟಿಯು ಸಂಘಟನೆ ಬೆಂಬಲ ಸೂಚಿಸಿದೆ. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಅಂಗನವಾಡಿ ನೌಕರರ ಸಂಘದ ಮುಖಂಡರಾದ ಮಾರುತಿ ಚಿಟಗಿ, ಚನ್ನಮ್ಮ ಹೆಬ್ಬಳ್ಳಿ, ರಜನಿ ಪಾಟೀಲ, ಅಕ್ಕಮ್ಮ ಕಬ್ಬೇರ, ಬಸಮ್ಮ ಕಳಸದ, ಕಲಾವತಿ ಪೀರಗಣ್ಣವರ, ಅಕ್ಕಮ್ಮ ಅಂಗಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.