ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ; ಸರ್ಕಾರಿ ಆದೇಶ ಸರಿಯಲ್ಲ
Team Udayavani, May 5, 2019, 11:17 AM IST
ಧಾರವಾಡ: ಶತಮಾನ ಪೂರೈಸಿದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಬೀಗ ಹಾಕುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದ ಶಿಕ್ಷಕಿಯರ ತರಬೇತಿ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಧಾರವಾಡಿಗರ ಭಾವನೆಯಾಗಿದೆ. ಸಂಖ್ಯೆ ಕಡಿಮೆಯಾಗಿದೆಯೆಂದು ತರಬೇತಿ ಕೇಂದ್ರ ಮುಚ್ಚಲು ಸರ್ಕಾರ ಆದೇಶ ನೀಡಿದ್ದು, ಆದೇಶವನ್ನು ಶೀಘ್ರವೇ ಹಿಂಪಡೆಯುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಲಾಗುವುದು.
ವಿದ್ಯಾಕಾಶಿಯ ಮಹತ್ವದ ತರಬೇತಿ ಸಂಸ್ಥೆ ಇದಾಗಿದ್ದು, 11 ಎಕರೆ ವಿಸ್ತಾರ ಜಾಗ ಹೊಂದಿದೆ. ಮಹಿಳೆಯರ ವಸತಿ ನಿಲಯ, ವಿವಿಧ ರೀತಿಯ ಪರೀಕ್ಷೆ ನಡೆಸಲು ಸಹಾಯಕಾರಿಯಾಗಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಬ್ರಿಟಿಷ್ ಕಾಲದಲ್ಲಿ ನಿರ್ಮಿಸಲಾದ ಪಾರಂಪರಿಕವಾದ ಕಟ್ಟಡ ನೋಡಲು ಸಿಗಲ್ಲ. ಇದು ಶಿಕ್ಷಣ ಸಂಸ್ಥೆಗೆ ಸೂಕ್ತವಾದ ಜಾಗವಾಗಿದೆ ಎಂದರು.
ಮಕ್ಕಳು ಕಡಿಮೆಯಾಗಿದ್ದಾರೆಂಬ ಕಾರಣಕ್ಕೆ ಬೀಗ ಹಾಕುವ ನಿರ್ಧಾರಕ್ಕೆ ಬರದೇ ಮಕ್ಕಳನ್ನು ಕೇಂದ್ರದತ್ತ ಸೆಳೆಯಲು ಯೋಜನೆಗಳನ್ನು ರೂಪಿಸಬೇಕು. ಒಂದು ವೇಳೆ ಸರ್ಕಾರ ಮುಚ್ಚಲು ಮುಂದಾದರೆ ಧಾರವಾಡದ ಶಿಕ್ಷಣ ಪ್ರೇಮಿಗಳು ಒಂದಾಗಿ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಬರಗಾಲದ ಸಂಕಷ್ಟದ ಸನ್ನಿವೇಶದಲ್ಲಿ ಮುಖ್ಯಮಂತ್ರಿಗಳು ಹೋಮ, ಹವನವೆಂದು ಸುತ್ತಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂಬ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ನಾಲ್ಕೈದು ದಿನಗಳಿಂದ ಆರೋಗ್ಯ ಸರಿ ಇಲ್ಲ ಕಾರಣ ಚಿಕಿತ್ಸೆಗೆಂದು ಹೋಗಿದ್ದಾರೆ. ಆರೋಗ್ಯ ಬಗ್ಗೆ ಗಮನ ಹರಿಸುವುದು ಅತೀ ಮುಖ್ಯ. ಹೀಗಾಗಿ ನಾಳೆ ಬಂದು ಉಳಿದ ಕೆಲಸಗಳಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎಂದರು.
ಮೈತ್ರಿ ಸರ್ಕಾರದಲ್ಲಿರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುವ ಮೂಲಕ ಸಮರ್ಥವಾದ ಆಡಳಿತ ನೀಡಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡಿದ್ದು, ಅದರಂತೆ ಸ್ಥಳೀಯ ಚುನಾವಣೆಯಲ್ಲೂ ಮುಂದುವರಿಯಲಿ. ಈ ವಿಷಯದಲ್ಲಿ ತಲೆಗೊಬ್ಬರು ಒಂದರಂತೆ ಮಾತನಾಡುವುದು ಸರಿಯಲ್ಲ, ಬಾಯಿಗಳಿಗೆ ಬೀಗ ಹಾಕಿಕೊಂಡು ಕೆಲಸ ಮಾಡಬೇಕು. ಇನ್ನು ಕೋಮುವಾದಿ ಪಕ್ಷ ಆಡಳಿತಕ್ಕೆ ಬರಬಾರದೆನ್ನುವ ದೃಷ್ಟಿಯಿಂದ ಮೈತ್ರಿ ಸರ್ಕಾರ ರಚಿಸಲಾಗಿದ್ದು, ಒಂದು ವೇಳೆ ಮೈತ್ರಿ ಸರ್ಕಾರ ಮುರಿದು ಬಿದ್ದರೆ ನಗೆಪಾಟಲಿಗೆ ಬಲಿಯಾಗಬೇಕಾಗುತ್ತದೆ.
∙ ಬಸವರಾಜ ಹೊರಟ್ಟಿ, ವಿದಾನ ಪರಿಷತ್ ಮಾಜಿ ಸಭಾಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.