ಲಾಕ್‌ಡೌನ್, ನೈಟ್ ಕರ್ಫ್ಯೂ ಪರಿಹಾರವಲ್ಲ: ಸಚಿವ ಜೋಶಿ
Team Udayavani, Apr 18, 2021, 5:16 PM IST
ಹುಬ್ಬಳ್ಳಿ: ಕೋವಿಡ್-19 ನಿಯಂತ್ರಣಕ್ಕೆ ಲಾಕ್‌ಡೌನ್, ನೈಟ್ ಕರ್ಫ್ಯೂ ಒಂದೇ ಪರಿಹಾರವಲ್ಲ. ಸೋಂಕು ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳನ್ನು ಹೊಂದಿದ್ದೇವೆ. ಯಾವುದೇ ಕಾರಣಕ್ಕೂ ಲಾಕ್‌ಡೌನ್ ಅಗತ್ಯವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ದೇಶದಲ್ಲಿ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಯಾವುದೇ ಪೂರ್ವ ಸಿದ್ಧತೆ ಇರಲಿಲ್ಲ. ಚಿಕಿತ್ಸೆಗೆ ಬೇಕಾದ ಎನ್-95 ಮಾಸ್ಕ್, ಪಿಪಿಇ ಕಿಟ್ ಸೇರಿದಂತೆ ಸಣ್ಣ ಪುಟ್ಟ ವೈದ್ಯಕೀಯ ಪರಿಕರಗಳು ನಮ್ಮಲ್ಲಿರಲಿಲ್ಲ. ಆದರೆ ಇಂದಿನ ಪರಿಸ್ಥಿತಿ ಹಿಂದಿನಂತೆ ಇಲ್ಲ. ವೆಂಟಿಲೇಟರ್‌ನಿಂದ ಹಿಡಿದು ಪ್ರತಿಯೊಂದು ವ್ಯವಸ್ಥೆ ಮಾಡಿಕೊಂಡಿದ್ದೇವೆ. ಆಕ್ಸಿಜೆನ್‌ಗೆ ಯಾವುದೇ ಕೊರತೆಯಾಗಿಲ್ಲ. ಹೀಗಾಗಿ ಈ ಬಾರಿ ಯಾವುದೇ ಕಾರಣಕ್ಕೂ ಲಾಕ್‌ಡೌನ್, ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದರು.
ಜನರಲ್ಲಿ ನಿರ್ಲಕ್ಷ್ಯ ಬೇಡ:
ಸೋಂಕಿನ ಬಗ್ಗೆ ಜನರಲ್ಲಿ ನಿರ್ಲಕ್ಷé ಹಾಗೂ ಭಯ ಬೇಡ. ಲಸಿಕೆ, ಪರೀಕ್ಷೆ, ಚಿಕಿತ್ಸೆ ಮೂರರ ಬಗ್ಗೆ ಕಾಳಜಿ ಇರಲಿ. ಸೋಂಕು ಕಾಣಿಸಿಕೊಂಡರೆ ಕೂಡಲೆ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು. ಹಿಂದಿನ ವರ್ಷಕ್ಕೆ ಹೋಲಿಸಿದರೆ ಸಾವಿನ ಪ್ರಮಾಣ ಸಾಕಷ್ಟು ಕಡಿಮೆಯಿದೆ. ಆದರೆ ಎರಡನೇ ಅಲೆ ಹಬ್ಬುವಿಕೆ ತೀವ್ರವಾಗಿದೆ. ಹೀಗಾಗಿ ಜನರು ಸರಕಾರ ಜಾರಿಗೆ ತಂದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಜಿಲ್ಲೆಯಲ್ಲಿ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸೋಂಕು ನಿಯಂತ್ರಿಸುವಲ್ಲಿ ಸಾರ್ವಜನಿಕರ ಪಾತ್ರ ಬಹು ದೊಡ್ಡದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ, ಜಾಗೃತಿ, ಚಿಕಿತ್ಸೆ, ಲಸಿಕೆ ಪ್ರತಿಯೊಂದು ವಿಷಯಗಳನ್ನು ಗಂಭೀರವಾಗಿ ತೆಗೆದುಕೊಂಡು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಡಲಿರುವ ಕುರಿತು ಚರ್ಚಿಸಲಾಗಿದೆ. ಈಗಾಗಲೇ ಹುಬ್ಬಳ್ಳಿ, ಧಾರವಾಡದಲ್ಲಿ ತಲಾ ಒಂದು ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 18 ಜನರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೇ.70 ಜನರು ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಈ ಹಿಂದೆ ಒಂದು ಸೋಂಕಿತ ಪ್ರಕರಣ ಪತ್ತೆಯಾದಾಗ ಸುತ್ತಲಿನ 3 ಕಿ.ಮೀ. ಪ್ರದೇಶ ಸೀಲ್‌ಡೌನ್ ಮಾಡಲಾಗಿತ್ತು. ಆದರಿಂದು ಸೋಂಕಿತರ ಪ್ರಮಾಣ ದಿನಕ್ಕೆ 200 ದಾಟಿದರು ಅಂತಹ ಪರಿಸ್ಥಿತಿಯಿಲ್ಲ. ಕಾರಣ ಲಸಿಕೆ, ಪರೀಕ್ಷೆ ಹಾಗೂ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಕರಣ ನೋಡಿಕೊಂಡು ಹಾಸಿಗೆ ಹೆಚ್ಚಿಸುವ ನಿಟ್ಟಿನಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಸಾರ್ವಜನಿಕರು ಸೋಂಕು ಹರಡದಂತೆ ಎಚ್ಚರ ವಹಿಸುವಲ್ಲಿ ದೊಡ್ಡ ಪಾತ್ರ ಎಂದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ, ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ, ಜಿಪಂ ಸಿಇಒ ಡಾ|ಬಿ. ಸುಶೀಲಾ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.