ಲೋಕ ಅದಾಲತ್; 50 ಸಾವಿರ ಪ್ರಕರಣ ಇತ್ಯರ್ಥ
Team Udayavani, Jun 26, 2022, 11:53 AM IST
ಧಾರವಾಡ: ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 50,272 ಪ್ರಕರಣಗಳಲ್ಲಿ ರಾಜಿ ಸಂಧಾನ ಮಾಡಿಸಿ ಒಟ್ಟು 78,85,39,702ರೂ. ಮೊತ್ತದ ಪರಿಹಾರ ಲಭಿಸುವಂತೆ ಇತ್ಯರ್ಥಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ| ಉಮೇಶ ಎಂ. ಅಡಿಗ ಮಾರ್ಗದರ್ಶನದಲ್ಲಿ ಲೋಕ್ ಅದಾಲತ್ ನಡೆಯಿತು. ಲೋಕ ಅದಾಲತ್ ಅನ್ನು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆಯೋಜಿಸಲಾಗಿತ್ತು.
ಧಾರವಾಡದಲ್ಲಿ 13 ಪೀಠಗಳನ್ನು, ಹುಬ್ಬಳ್ಳಿಯಲ್ಲಿ 16 ಪೀಠಗಳನ್ನು, ಕುಂದಗೋಳ 1 ನವಲಗುಂದ ಮತ್ತು ಕಲಘಟಗಿಯಲ್ಲಿ ತಲಾ 2 ಸೇರಿ ಒಟ್ಟು 34 ಪೀಠಗಳನ್ನು ಸ್ಥಾಪಿಸಲಾಗಿತ್ತು. ವಿವಿಧ ರೀತಿಯ ಹಾಗೂ ವಿವಿಧ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜಿ ಆಗಬಹುದಾದಂತಹ ಸುಮಾರು 10,776 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 4,595 ಪ್ರಕರಣಗಳನ್ನು ಹಾಗೂ 45,677 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 50,272ರಲ್ಲಿ ರಾಜಿ ಸಂಧಾನ ಮಾಡಿಸಿ ಒಟ್ಟು 78,85,39,702 ರೂ. ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧಿಧೀಶರು, ವಿವಿಧ ವಿಮೆ ಕಂಪನಿ ಅಧಿಕಾರಿಗಳು, ವಿಮೆ ಕಂಪನಿಯ ಪ್ಯಾನಲ್ ವಕೀಲರುಗಳು, ಅರ್ಜಿದಾರರ ಪರ ವಕೀಲರುಗಳು, ಕಂದಾಯದ ಅ ಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ಕಕ್ಷಿದಾರರು ಭಾಗವಹಿಸಿ ಸದರಿ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಯಶಸ್ವಿಗೊಳಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪುಷ್ಪಲತ ಸಿ. ಎಮ್. ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೈಕೋರ್ಟ್‌ನಲ್ಲಿ 221 ಪ್ರಕರಣ ಇತ್ಯರ್ಥ
ಧಾರವಾಡ: ರಾಷ್ಟ್ರೀಯ ಲೋಕ ಅದಾಲತ್ ಅಂಗವಾಗಿ ಇಲ್ಲಿನ ಹೈಕೋರ್ಟ್‌ನಲ್ಲಿ ಒಟ್ಟು 221 ಪ್ರಕರಣಗಳಲ್ಲಿ 4 ಕೋಟಿ ರೂ.ಗೂ ಅಧಿಕ ಮೊತ್ತದ ಪರಿಹಾರ ಲಭಿಸುವಂತೆ ಇತ್ಯರ್ಥಪಡಿಸಲಾಯಿತು.
ಹಿರಿಯ ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್, ಪ್ರತಿಪಸಿಂಗ್ ಏರೂರ್, ಎಂ.ಜಿ.ಎನ್.ಅದಾಲತ್‌ನ ಸದಸ್ಯರಾದ ಎಂ.ಟಿ. ಬಂಗಿ, ಡಿ.ಎಲ್. ಲಾಡ್‌ಖಾನ್ ಮತ್ತು ಎಂ.ಸಿ.ಹುಕ್ಕೇರಿ ಅವರನ್ನೊಳಗೊಂಡ ಮೂರು ಪೀಠಗಳಲ್ಲಿ ಒಟ್ಟು 1227 ಪ್ರಕರಣಗಳನ್ನು ವಿಚಾರಣೆಗೆ ಗುರುತಿಸಿಕೊಂಡು ಅವುಗಳ ಪೈಕಿ 221 ಪ್ರಕರಣಗಳನ್ನು 4,45,53,063 ರೂ. ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು.
ನ್ಯಾ| ಎಂ.ಜಿ.ಎಸ್.ಕಮಾಲ್ ಹಾಗೂ ಎಂ.ಸಿ. ಹುಕ್ಕೇರಿ ಅವರನ್ನೊಳಗೊಂಡ ಅದಾಲತ್ ಪೀಠವು ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ 30 ವರ್ಷಗಳ ಹಳೆಯದಾದ ದಿವಾಣಿ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಉಭಯ ಪಕ್ಷಗಾರರ ಸಮಕ್ಷಮ ಇತ್ಯರ್ಥಪಡಿಸಿರುವುದು ವಿಶೇಷವಾಗಿದೆ.
ಇದರಿಂದ ಉಭಯ ಪಕ್ಷಗಾರರಿಗೆ ತುಂಬಾ ಅನುಕೂಲವಾಗಿದ್ದು, ವ್ಯಾಜ್ಯ ಮುಕ್ತರಾಗಿದ್ದಾರೆ ಎಂದು ಹೈಕೋರ್ಟ್‌ನ ನ್ಯಾಯಾಂಗದ ಅಧಿಕ ಲೇಖನಾಧಿಕಾರಿ ಮತ್ತು ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ವೆಂಕಟೇಶ ಹುಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.