Loksabha; ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆ: ಮಾಜಿ ಸಂಸದ ಮಂಜುನಾಥ
Team Udayavani, Apr 1, 2024, 1:00 PM IST
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧೆಗಿಳಿಯುತ್ತೇನೆ. ಕಾಂಗ್ರೆಸ್-ಬಿಜೆಪಿಯಿಂದ ವೀರಶೈವ-ಲಿಂಗಾಯತ ಸಮಾಜಕ್ಕೆ ಆಗಿರುವ ಅನ್ಯಾಯದ ವಿರುದ್ಧ ಈ ಸ್ಫರ್ಧೆ ಮಾಡುವುದಾಗಿ ಮಾಜಿ ಸಂಸದ ಮಂಜುನಾಥ ಕುನ್ನೂರು ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದೆ ನೀಡಲಿಲ್ಲ. ಲೋಕಸಭಾ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಹೊಂದಾಣಿಕೆ ರಾಜಕೀಯದಿಂದಾಗಿ ಈಗಲೂ ಟಿಕೆಟ್ ತಪ್ಪಿದೆ. ರಾಜ್ಯದಲ್ಲಿ ಮೈಸೂರು, ಶಿವಮೊಗ್ಗ, ಧಾರವಾಡ ಸೇರಿದಂತೆ ಹಲವು ಕಡೆ ಕಾಂಗ್ರೆಸ್-ಬಿಜೆಪಿ ಮಧ್ಯೆ ಹೊಂದಾಣಿಕೆ ರಾಜಕೀಯ ನಡೆದಿದೆ. ಕುಟುಂಬ ರಾಜಕಾರಣಕ್ಕೆ ಒತ್ತು ನೀಡಲಾಗಿದೆ ಎಂದು ಆರೋಪಿಸಿದರು.
ಅನೇಕ ಮಠಾಧೀಶರು, ಸಮಾಜದ ಪ್ರಮುಖರ ಅನಿಸಿಕೆ ಮೇರೆಗೆ ಸ್ಪರ್ಧೆಗೆ ಮುಂದಾಗಿದ್ದೇನೆ. ದಿಂಗಾಲೇಶ್ವರ ಸ್ವಾಮೀಜಿ ಅವರನ್ನು ಭೇಟಿಯಾಗಿಲ್ಲ. ಒಂದು ವೇಳೆ ಅವರು ಸ್ಪರ್ಧಿಸುವುದಾದರೆ ನಾನು ಸ್ಪರ್ಧೆಗೆ ಮುಂದಾಗದೆ ಅವರನ್ನು ಬೆಂಬಲಿಸುವೆ ಎಂದರು.
ಮಹದಾಯಿ, ಕಳಸಾ-ಬಂಡೂರಿ ನಾಲಾ ಯೋಜನೆಯಿಂದ ನೀರು ತರುವಲ್ಲಿ ಪ್ರಹ್ಲಾದ ಜೋಶಿ, ಬಸವರಾಜ ಬೊಮ್ಮಾಯಿ ವಿಫಲರಾಗಿದ್ದಾರೆ. ಸಮಾಜದವರು, ಪ್ರಮುಖರೊಂದಿಗೆ ಚರ್ಚಿಸಿ, ನಾಮಪತ್ರ ಸಲ್ಲಿಕೆಗೆ ಬಗ್ಗೆ ನಿರ್ಧರಿಸುವೆ. ಸ್ಪರ್ಧಿಸಿದರೆ ಗೆಲ್ಲುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
Hubballi–Dharwad; 45 ಅಪರಾಧಿಗಳು ಬೇರೆ ಬೇರೆ ಜಿಲ್ಲೆಗಳಿಗೆ 6 ತಿಂಗಳ ಕಾಲ ಗಡಿಪಾರು
ಇಂದಿನಿಂದ ವರೂರು ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ
Congress Government: ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಆರ್.ಬಿ.ತಿಮ್ಮಾಪುರ
Hubli: ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾದರೆ ಸ್ವಾಗತಿಸುವೆ: ಎಸ್.ಆರ್.ಪಾಟೀಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.