ಗೋವೆಗೆ ಕಡಿವಾಣ ಹಾಕಿ
Team Udayavani, Jan 1, 2020, 10:18 AM IST
ನವಲಗುಂದ: ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆಗಾಗಿ 1625 ದಿನಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ನ್ಯಾಯಾಧಿಕರಣದಲ್ಲಿ 13.5 ಟಿಎಂಸಿ ನೀರು ಹರಿಸಲು ಆದೇಶವಾಗಿದ್ದರೂ ಗೋವಾ ಸರಕಾರ ಪದೇ ಪದೇ ತನ್ನ ಮಾನವೀಯತೆ ಮೀರುತ್ತಿರುವುದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ರೈತರು ತಹಶೀಲ್ದಾರ್ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.
ಪಕ್ಷಾತೀತ ರೈತ ಹೋರಾಟ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ ಮಾತನಾಡಿ, 28 ಸಂಸದರಲ್ಲಿ 25 ಜನ ಬಿಜೆಪಿ ಸಂಸದರಿದ್ದಾರೆ. ಅವರಲ್ಲಿ ಇದೇ ಭಾಗದವರಾದ ಪ್ರಹ್ಲಾದ ಜೋಶಿಯವರು ಇಚ್ಛಾಶಕ್ತಿ ವಹಿಸಿ ಕೆಲಸವನ್ನು ಮಾಡುತ್ತಿಲ್ಲ. ಇತರಿಂದ ರೈತರು ಹಿಡಿಶಾಪ ಹಾಕುತ್ತಿದ್ದಾರೆ. ಕರ್ನಾಟಕ ಸರಕಾರ ದೇಶದ ಕಾನೂನಿಗೆ ಒಳಪಟ್ಟಿದೆಯೇ ಅಥವಾ ಇಲ್ಲವೇ ಎಂಬುದು ತಿಳಿಯದಂತಾಗಿದೆ ಎಂದರು.
ರೈತರಾದ ಮಲ್ಲೇಶ ಉಪ್ಪಾರ, ಸುಭಾಸಚಂದ್ರಗೌಡ ಪಾಟೀಲ, ಡಿ.ವಿ. ಕುರಹಟ್ಟಿ ಮಾತನಾಡಿ, ಇತ್ತೀಚಿಗೆ ಅತಿವೃಷ್ಟಿಯಿಂದ ರೈತರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ರೈತ ಕುಲದ ಉಳಿವಿಗಾಗಿ ವಿಶೇಷ ಪ್ಯಾಕೇಜ್ ನೀಡಬೇಕು. ಮಹದಾಯಿ ಯೋಜನೆ ಕಾರ್ಯಗತವಾಗಲು ಕೇಂದ್ರ ಸರಕಾರ ಮುತುವರ್ಜಿ ವಹಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಂಸದರು, ಶಾಸಕರು ರೈತರ ಉಗ್ರ ಹೋರಾಟಕ್ಕೆ ಬಲಿಯಾಗಬೇಕಾಗುತ್ತದೆ. ಇದು ನಮ್ಮ ಪಾಲಿನ ನೀರಿನ ಹಕ್ಕನ್ನು ಪಡೆಯಲು ಅನಿವಾರ್ಯವಾಗಿದೆ ಎಂದು ಹೇಳಿದರು.
ಎಚ್.ವಿ. ಪಾಟೀಲ, ಮಲ್ಲಪ್ಪ ಬಸಿಗೊಣ್ಣರ, ಸಂಗಪ್ಪ ನಿಡವಣೆ, ಶಿವಪ್ಪ ಸಂಗಳದ, ಬಸಯ್ಯ ಮಠಪತಿ, ಶಿದ್ದಪ್ಪ ಮುಪ್ಪಯ್ಯನವರ, ದ್ಯಾಮಣ್ಣ ಸಾಮೋಜಿ, ಅರುಣ ಈಟಿ, ಗುರುಶಿದ್ದಪ್ಪ ಕಾಲುಂಗುರ, ಅಲ್ಲಾಭಕ್ಷ ಹಂಚಿನಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.