ಮಹದಾಯಿ ಹೋರಾಟಗಾರರೇ ಜೋಶಿ ಸೋಲಿಸ್ತಾರೆ
Team Udayavani, Apr 21, 2019, 11:44 AM IST
ಧಾರವಾಡ: ಮಹದಾಯಿ ಯೋಜನೆ ಜಾರಿಯಲ್ಲಿ ಸಂಸದ ಪ್ರಹ್ಲಾದ ಜೋಶಿ ಅಡ್ಡಗಾಲು ಹಾಕಿದ್ದು, ಅವರ ಈ ತಪ್ಪಿಗಾಗಿ ಕ್ಷೇತ್ರದ ಜನ ಮತ್ತು ಮಹದಾಯಿ ಹೋರಾಟಗಾರರು ಅವರನ್ನು ಚುನಾವಣೆಯಲ್ಲಿ ಸೋಲಿಸುವುದು ನಿಶ್ಚಿತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಕಳಸಾ-ಬಂಡೂರಿ, ಮಹದಾಯಿ ನಾಲಾ ಜೋಡಣೆ ವಿಷಯದಲ್ಲಿ ಜೋಶಿ ಅವರು ಸುಳ್ಳು ಹೇಳುತ್ತಾ ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ. ಕೇಂದ್ರ ಸರಕಾರದ ಮೇಲೆ ಯಾವುದೇ ರೀತಿ ಒತ್ತಡ ತರುವ ಕೆಲಸ ಮಾಡಲಿಲ್ಲ. ಈಗ ನ್ಯಾಯಾಧೀಕರಣ ತೀರ್ಪು ನೀಡಿದ ಬಳಿಕವೂ ನೀರು ಬಳಕೆ ಮಾಡಲು ಕೇಂದ್ರ ಅಧಿಸೂಚನೆ ಹೊರಡಿಸದೇ ಇರುವುದಕ್ಕೆ ಜೋಶಿ ಅವರೇ ಕಾರಣ. ಮಹದಾಯಿ ವ್ಯಾಪ್ತಿಗೆ ಬರುವ
ನಾಲ್ಕು ಜಿಲ್ಲೆಗಳ ಸಂಸದರ ಕೊಡುಗೆ ಏನಿಲ್ಲ. ಈ ಸತ್ಯ ಅರಿತಿರುವ ಮಹದಾಯಿ ಹೋರಾಟಗಾರರು ಮತ್ತು ಜನರು ಜೋಶಿ ವಿರುದ್ಧ ಈ ಚುನಾವಣೆಯಲ್ಲಿ ಮತ ಹಾಕಲಿದ್ದಾರೆ ಎಂದರು.
ಕಳೆದ 20 ವರ್ಷಗಳಿಂದ ಹು-ಧಾ ಮಹಾನಗರ ಪಾಲಿಕೆಯಲ್ಲಿ ಅಧಿಕಾರದಲ್ಲಿರುವ ಬಿಜೆಪಿಯಿಂದ ಅವಳಿನಗರ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಬಿಜೆಪಿ ಆಡಳಿತದ ಕಾರ್ಯವೈಖರಿಯಿಂದ ಜನ ಬೇಸತ್ತಿದ್ದು, ಈ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಸಿಎಂ ಸೂಚನೆ: ಮೈತ್ರಿ ಅಭ್ಯರ್ಥಿ ವಿನಯ ಕುಲಕರ್ಣಿ ಅವರನ್ನು ಗೆಲ್ಲಿಸಲೇಬೇಕು ಎಂದು ಸಿಎಂ ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ದಿಸೆಯಲ್ಲಿ ಜೆಡಿಎಸ್ ನಾಯಕರು ಗಂಭೀರವಾಗಿ ಪರಿಗಣಿಸಿ, ಬೂತ್ ಮಟ್ಟದಲ್ಲಿ ಪ್ರಚಾರ ನಡೆಸಿದ್ದೇವೆ. ಜೆಡಿಎಸ್ ಬೆಂಬಲದಿಂದ 1ರಿಂದ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಿನಯ ಕುಲಕರ್ಣಿ ಆಯ್ಕೆಯಾಗಲಿದ್ದಾರೆ. ಅವರ ಗೆಲುವಿನಲ್ಲಿ ಜೆಡಿಎಸ್ ಬಹುದೊಡ್ಡ ಪಾತ್ರ ವಹಿಸಲಿದೆ ಎಂದರು.
ಸಿಎಂ ಕುಮಾರಸ್ವಾಮಿ ಅವರ ತಾಯಿ ಎಂದಿಗೂ ರಾಜಕಾರಣಕ್ಕೆ ಬರಲ್ಲ. ಆ ಮಹಾತಾಯಿ ಬಗ್ಗೆ ಶೆಟ್ಟರ ಮಾತನಾಡಿದ್ದಾರೆ ಅಂತ ಶೆಟ್ಟರ ತಾಯಿ ಬಗ್ಗೆ ನಾವೂ ಮಾತನಾಡಲು ಆಗಲ್ಲ. ಅದು ನಮ್ಮ ಸಂಸ್ಕೃತಿಯೂ ಅಲ್ಲ ಎಂದು ತಿಳಿಸಿದರು.
ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಬಿಜೆಪಿ ಅಭ್ಯರ್ಥಿ ಕೊಡುಗೆ ಏನಿಲ್ಲ. ಬರೀ ಬೇರೊಬ್ಬರ ಅಲೆಯಿಂದ ಆರಿಸಿ ಬಂದಿದ್ದಾರೆ ಹೊರತು ತಮ್ಮ ಸ್ವಯಂ ಬಲದಿಂದ ಅಲ್ಲ. ಧರ್ಮಗಳ ನಡುವೆ ಒಡಕು ತಂದು ಅದರಲ್ಲಿ ರಾಜಕಾರಣ ಮಾಡುತ್ತಾ ಬಂದಿರುವ ಜೋಶಿ ಅವರಿಗೆ ಈ ಬಾರಿ ಯಾವುದೇ ಅಲೆ ಇಲ್ಲವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.