
ಮಹದಾಯಿ ಶೀಘ್ರ ಜಾರಿಗೆ ಸಿಎಂಗೆ ಪತ್ರ ಬರೆಯುವೆ
Team Udayavani, Oct 21, 2018, 6:25 AM IST

ಹುಬ್ಬಳ್ಳಿ: ಮಹದಾಯಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸುವಂತೆ ಸರಕಾರ ಹಾಗೂ ಮುಖ್ಯಮಂತ್ರಿಗೆ ಸಲಹೆ ನೀಡುತ್ತೇನೆ. ಆದಷ್ಟು ಬೇಗ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಅ.25ರಂದು ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಜಾರಿಗಾಗಿ ಈ ಭಾಗದವರು ಸಾಕಷ್ಟು ಹೋರಾಟ ಮಾಡಿದ್ದಾರೆ. ಸರಕಾರ ಈ ಯೋಜನೆ ಜಾರಿಯಲ್ಲಿ ಮೀನಾಮೇಷ ಮಾಡದೆ ಶೀಘ್ರವೇ ಜಾರಿಗೊಳಿಸಬೇಕು. ಆ ನಿಟ್ಟಿನಲ್ಲಿ ಸರ್ವ ಪಕ್ಷಗಳ ಸಭೆ ಕರೆದು, ಆದಷ್ಟು ಬೇಗ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸುವೆ. ಯೋಜನೆ ಜಾರಿಯಲ್ಲಿ ನಿರ್ಲಕ್ಷéಗಳಾಗಿವೆ. ಈಗ ಆ ರೀತಿ ಆಗಲ್ಲ. ಅ.23ರಂದು ಮುಖ್ಯಮಂತ್ರಿ ಕಿತ್ತೂರಿಗೆ ಬರಲಿದ್ದು, ಆ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಈ ವಿಷಯ ಪ್ರಸ್ತಾಪಿಸಬಹುದು ಎಂದರು.
ಲಿಂಗಾಯತಕ್ಕೆ ಪ್ರತ್ಯೇಕ ಧರ್ಮ ನೀಡುವ ವಿಷಯದ ಶಿಫಾರಸ್ಸು ಕೇಂದ್ರ ಸರಕಾರ ಮುಂದಿದೆ. ಅದು ಯಾವ ನಿರ್ಣಯ ಕೈಗೊಳ್ಳುತ್ತದೋ ತೆಗೆದುಕೊಳ್ಳಲಿ. ಇಂತಹ ಸಂದರ್ಭದಲ್ಲಿ ಆ ಕುರಿತು ಮಾತನಾಡುವುದು ಸರಿಯಲ್ಲ. ಸಚಿವ ಡಿ.ಕೆ.ಶಿವಕುಮಾರ ಈ ವಿಷಯವಾಗಿ ಹೇಳಿಕೆ ಕೊಟ್ಟಿರುವುದರಿಂದ ಹೋರಾಟಕ್ಕೆ ಯಾವುದೇ ಹಿನ್ನಡೆ ಆಗಲ್ಲ.
– ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸಭಾಪತಿ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.