ಹೋರಾಡುತ್ತಲೇ ಜೀವನ ರೂಪಿಸಿಕೊಳ್ಳಿ: ಸ್ವಾಮೀಜಿ
ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು
Team Udayavani, Jan 10, 2022, 5:49 PM IST
ಧಾರವಾಡ: ಜೀವನ ಹೂವಿನ ಹಾಸಿಗೆಯಲ್ಲ. ಪ್ರತಿಕ್ಷಣ ಸವಾಲುಗಳು ಎದುರಾಗುತ್ತವೆ. ನಮ್ಮ ಅಸ್ತಿತ್ವಕ್ಕಾಗಿ ಹೋರಾಡುತ್ತಲೇ ಜೀವನ ರೂಪಿಸಿಕೊಳ್ಳಬೇಕು ಎಂದು ಮನಗುಂಡಿಯ ಗುರುಬಸವಾನಂದ ಸ್ವಾಮೀಜಿ ಹೇಳಿದರು.
ನಗರದ ಕ್ಲಾಸಿಕ್ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಕ್ಲಾಸಿಕ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆಯ ಕ್ಲಾಸಿಕ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಿಯು ಕಾಲೇಜಿನ ಶೈಕ್ಷಣಿಕ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನೆ, ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಕಿರುದಾರಿ ಹಿಡಿಯದೆ, ಶಿಸ್ತು ಪ್ರಾಮಾಣಿಕತೆಯಿಂದ ಕಠಿಣವಾದ ಒಳ್ಳೆಯ ಆಯ್ಕೆಗಳನ್ನು ಮಾಡಿಕೊಂಡು ಯಶಸ್ಸು ಹೊಂದಬೇಕು ಎಂದರು.
ಡಾ| ಗೋಪಾಲ ಕಮಲಾಪುರ ಮಾತನಾಡಿ, ಪಿಯು ಹಂತ ವಿದ್ಯಾರ್ಥಿ ಜೀವನ ನಿರ್ಧರಿಸುವುದರಿಂದ ಆಧುನಿಕ ತಂತ್ರಜ್ಞಾನ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕ್ಲಾಸಿಕ್ ಸಮೂಹ ಸಂಸ್ಥೆಗಳ ನಿರ್ದೇಶಕ ಲಕ್ಷ್ಮಣ ಎಸ್. ಉಪ್ಪಾರ ಮಾತನಾಡಿ, ದುಶ್ಚಟಗಳಿಗೆ ಆಕರ್ಷಿತರಾಗದೇ ಮನಸ್ಸನ್ನು ನಿಯಂತ್ರಣದಲ್ಲಿಟ್ಟುಕೊಂಡು ತಮ್ಮ ಜವಾಬ್ದಾರಿ ಅರಿತುಕೊಂಡು ಆತ್ಮವಿಶ್ವಾಸ ಮತ್ತು ಬದ್ಧತೆಯಿಂದ ಗುರಿ ಮುಟ್ಟಬೇಕು ಎಂದು ಸಲಹೆ ನೀಡಿದರು.
ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಪ್ರಮಾಣ ವಚನ ಬೋಧಿಸಲಾಯಿತು. ಪಿಯು ಕಾಲೇಜು ಪ್ರಾಚಾರ್ಯ ಡಾ| ಎಚ್.ಎಂ. ಉಡಿಕೇರಿ ಪ್ರಾಸ್ತಾವಿಕ ಮಾತನಾಡಿದರು. ಕ್ಲಾಸಿಕ್ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ|ಕೆ.ಸಿ. ತಾರಾಚಂದ್, ಕ್ಲಾಸಿಕ್ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯ ಮನೋಹರ ಕೆಂಚರಾಹುತ್ ಇದ್ದರು.
ಕೀರ್ತಿ ಕೋಷ್ಠಿ ಸ್ವಾಗತಿಸಿದರು. ಸೃಷ್ಟಿ ಹಾಗೂ ಅನನ್ಯಾ ನಿರೂಪಿಸಿದರು. ಸ್ನೇಹಾ ಗಣಾಚಾರಿ, ಗೋಪಾಲಕೃಷ್ಣ, ಶಿವಾನಿ ಹಿರೇಮಠ, ಸರ್ವಮಂಗಳಾ ಲಕ್ಷೆಟ್ಟಿ ಪರಿಚಯಿಸಿದರು. ರಣವೀರ ಶರ್ಮಾ ವಂದಿಸಿದರು. ಶಿವಾನಿ ಮತ್ತು ತಂಡದವರು ಪ್ರಾರ್ಥಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.