ಆರೋಗ್ಯ ಮಾಹಿತಿ ಕಾರ್ಯ ಸಮರ್ಪಕವಾಗಿ ಮಾಡಿ
Team Udayavani, Jul 12, 2020, 11:55 AM IST
ಸಾಂದರ್ಭಿಕ ಚಿತ್ರ
ಧಾರವಾಡ: ಕೋವಿಡ್-19 ಸೋಂಕು ದೃಢಪಟ್ಟು, ಸೋಂಕಿನ ಲಕ್ಷಣಗಳು ಇಲ್ಲದಿರುವ ವ್ಯಕ್ತಿಗಳಿಗೂ ಹೋಂ ಐಸೋಲೇಷನ್ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಇಂತಹ ಸೋಂಕಿತರ ಆರೋಗ್ಯದ ಬಗ್ಗೆ ವೈದ್ಯಕೀಯ ತಂಡ ನಿರಂತರವಾಗಿ ಸಂಪರ್ಕಿಸಿ ಮಾಹಿತಿ ನೀಡುವ ಕಾರ್ಯವನ್ನು ಸಮರ್ಪಕವಾಗಿ ಮಾಡಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಆರೋಗ್ಯ ಕಾರ್ಯಪಡೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೋಂ ಐಸೋಲೇಶನ್ ಮತ್ತು ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುವ ಸೋಂಕಿತರು ಪಾಲಿಸಬೇಕಾದ ಕ್ರಮಗಳ ಬಗ್ಗೆ ವಿಡಿಯೋ ಸಂದೇಶ ಸಿದ್ಧಪಡಿಸಿ ತಿಳಿವಳಿಕೆ ಮೂಡಿಸಬೇಕಿದೆ. ರೋಗಿಗಳ ಸ್ಥಳಾಂತರಕ್ಕೆ ನಿಗದಿ ಮಾಡಿರುವ ಆಂಬ್ಯುಲನ್ಸ್‌ಗಳ ಮೂಲಕ ರೋಗಿಗಳ ವಾಸಸ್ಥಳದಿಂದ ಆಸ್ಪತ್ರೆಗೆ ಕರೆದು ತರುವ ಮತ್ತು ಗುಣಮುಖರಾಗಿ ಬಿಡುಗಡೆಯಾಗುವ ವ್ಯಕ್ತಿಗಳ ಮನೆ ತಲುಪಿಸುವ ಕಾರ್ಯ ಯೋಜಿತ ರೀತಿಯಲ್ಲಿ ನಿರ್ವಹಿಸಲು ರಚಿಸಿರುವ ತಂಡ ಸದಾ ಕಾಲ ಸನ್ನದ್ಧವಾಗಿರಬೇಕು. ಕೋವಿಡ್ ತಪಾಸಣೆ ಪ್ರಯೋಗಾಲಯ ವರದಿ ನೀಡುವ ಕಾರ್ಯವನ್ನು ಕಿಮ್ಸ್ ಇನ್ನಷ್ಟು ತ್ವರಿತಗೊಳಿಸಬೇಕು. ಅಗತ್ಯ ಬಿದ್ದರೆ ತಾಲೂಕು ಕೇಂದ್ರಗಳಲ್ಲೂ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ, ಲಕ್ಷಣ ರಹಿತ ರೋಗಿಗಳಿಗೆ ಅಲ್ಲಿಯೇ ಚಿಕಿತ್ಸೆ ನೀಡಲಾಗುವುದು. ಆಯಾ ತಹಸೀಲ್ದಾರರು ಸ್ಥಳೀಯವಾಗಿ ಆಸ್ಪತ್ರೆ,ವಸತಿ ಶಾಲೆಗಳಲ್ಲಿ, ಹಾಸಿಗೆಗಳು, ಆಹಾರ ಪೂರೈಕೆ ವ್ಯವಸ್ಥೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.
ಜಿಪಂ ಸಿಇಒ ಡಾ|ಬಿ.ಸಿ.ಸತೀಶ್ ಮಾತನಾಡಿ, ತಾಲೂಕು ಮಟ್ಟದಿಂದ ಕೋವಿಡ್ ಕೇರ್ ಸೆಂಟರ್‌ಗಳ ಆರಂಭಿಸುವ ಕಾರ್ಯದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು ಭಾಗಿಯಾಗಲಿದ್ದಾರೆ. ಜಿಲ್ಲೆಯಲ್ಲಿ ಲಭ್ಯವಿರುವ ಎಲ್ಲಾ ವಸತಿ ಶಾಲೆ, ವೈದ್ಯಕೀಯ, ಅರೆ ವೈದ್ಯಕೀಯ ಮಾನವ ಸಂಪನ್ಮೂಲ ಸಮರ್ಥ ಬಳಕೆಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಮಹಾನಗರ ಪಾಲಿಕೆ ಉಪ ಆಯುಕ್ತ ಅಜೀಜ್ ದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ|ಯಶವಂತ ಮದೀನಕರ್ ಸೇರಿದಂತೆ ಹಿರಿಯ ವೈದ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.