ಜನರಲ್ಲಿ ಅರಿವು ಮೂಡಿಸಿ ಸ್ವಸ್ಥ ಸಮಾಜ ಸೃಷ್ಟಿಸಿ
ನ್ಯಾ| ಉಮೇಶ ಅಡಿಗ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ್ವೈಮಾಸಿಕ ಸಭೆ
Team Udayavani, May 6, 2022, 10:03 AM IST
ಧಾರವಾಡ: ಕಾನೂನು ಕುರಿತು ಹೆಚ್ಚಿನ ಜಾಗೃತಿ ಆದಾಗಲೇ ಜನಸಾಮಾನ್ಯರಲ್ಲಿ ಕಾನೂನು ಅರಿವು ಮೂಡಲು ಸಾಧ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಉಮೇಶ ಎಂ. ಅಡಿಗ ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ್ವೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೊಗದೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಪರಿಸರ ದಿನಾಚರಣೆ, ಬಾಲ ಕಾರ್ಮಿಕರ ದಿನ ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಜೂ. 25ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಸಲಾಗುತ್ತಿದ್ದು, ಇದಕ್ಕೆ ವ್ಯಾಪಕ ಪ್ರಚಾರ ನೀಡಬೇಕು. ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸುವುದರಿಂದ ಸಮಯ ಮತ್ತು ಹಣದ ಉಳಿತಾಯವಾಗುತ್ತದೆ. ಜಿಲ್ಲಾಡಳಿತ ಭೂಸ್ವಾಧೀನ ಪರಿಹಾರದ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಬಗೆಹರಿಸುವತ್ತ ಗಮನ ನೀಡಬೇಕು. ಇದರಿಂದ ಸರ್ಕಾರ ಬಡ್ಡಿ ಕಟ್ಟುವುದು ತಪ್ಪುವುದಲ್ಲದೇ ಭೂಮಿ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ಪಡೆಯಲು ಅನೂಕೂಲವಾಗಲಿದೆ ಎಂದು ಹೇಳಿದರು.
ಕಾರ್ಮಿಕರ ಕಲ್ಯಾಣಕ್ಕಾಗಿ ವಿವಿಧ ಯೋಜನೆಗಳಡಿ ಅನುದಾನ ಸೌಲಭ್ಯಗಳಿವೆ. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ದೊರೆಯುವಂತಾಗಬೇಕು. ಇದಕ್ಕಾಗಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರ ಪಟ್ಟಿ ಪರಿಶೀಲಿಸುವ ಕಾರ್ಯವಾಗಬೇಕು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಷ್ಪಲತಾ ಸಿ.ಎಂ ಮಾತನಾಡಿ, ಮಹಿಳಾ ದೌರ್ಜನ್ಯ ವಿಷಯವನ್ನು ಮಾರ್ಚ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ಪ್ರತಿ ವಾರವು ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಿಗೆ ಒತ್ತುಕೊಟ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಡಿಸಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳ ಮೂರನೇ ಶನಿವಾರ ನಡೆಯುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಎಂಬ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳಲ್ಲಿ ವಿವಿಧ ಯೋಜನೆ ಮತ್ತು ಕಾನೂನು ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಜಿಲ್ಲೆಯ ಎಲ್ಲ ನ್ಯಾಯಾಧೀಶರು, ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್, ಜಿಪಂ ಸಿಇಒ ಡಾ|ಸುರೇಶ ಇಟ್ನಾಳ, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಗೋಪಾಲಕೃಷ್ಣ ಡಿಸಿಎಫ್ ಸೋನಲ್ ವೃಷ್ಣಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.