ಜಿಲ್ಲೆಯ 399 ಹಳ್ಳಿಗಳಿಗೂ ಮಲಪ್ರಭೆ
Team Udayavani, Feb 9, 2020, 11:21 AM IST
ಧಾರವಾಡ: ಜಿಲ್ಲೆಯ 399 ಹಳ್ಳಿಗಳಿಗೆ ಕುಡಿಯಲು ಮಲಪ್ರಭಾ ನದಿ ನೀರನ್ನು ಸರಬರಾಜು ಮಾಡಲು 1,300 ಕೋಟಿ ಅಂದಾಜು ಮೊತ್ತದ ಯೋಜನೆ ಅನುಷ್ಠಾನಗೊಳಿಸಲು ಈಗಾಗಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂಬರುವ ಮಂತ್ರಿ ಮಂಡಲ ಸಭೆಯಲ್ಲಿ ಅನುಮೋದಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಹು-ಧಾ ಮಹಾನಗರ ಪಾಲಿಕೆ ಆಶ್ರಯದಲ್ಲಿ ಅಮ್ಮಿನಬಾವಿಯಲ್ಲಿ ನಿರ್ಮಿಸಿರುವ 40 ಎಂಎಲ್‌ಡಿ ಸಾಮರ್ಥ್ಯದ ನೂತನ ಜಲಶುದ್ಧೀಕರಣ ಘಟಕದ ಉದ್ಘಾಟನೆ ಹಾಗೂ ಯಂತ್ರಾಗಾರದಲ್ಲಿ ಅಳವಡಿಸಿರುವ ನೂತನ ಯಂತ್ರೋಪಕರಣಗಳಿಗೆ ಚಾಲನೆ ನೀಡಿ, ಅವರು ಮಾತನಾಡಿದರು.
ಹು-ಧಾ ಮಹಾನಗರ ಪಾಲಿಕೆಯ ಠೇವಣಿ ಹಣದಲ್ಲಿನ 26 ಕೋಟಿ ರೂ. ಅನುದಾನದಲ್ಲಿ ಅನುಷ್ಠಾನಗೊಳಿಸಿರುವ ಈ ನೂತನ ಜಲಶುದ್ಧೀಕರಣ ಘಟಕ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ. ಮಹಾನಗರಕ್ಕೆ ಪ್ರತಿ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲು ಅನುಕೂಲವಾಗಲಿದೆ ಎಂದರು. ಮಹಾನಗರದ ಒಟ್ಟು 64 ವಾರ್ಡ್‌ಗಳ ಪೈಕಿ ಈಗಾಗಲೇ 11 ವಾರ್ಡ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ಮತ್ತು 15 ವಾರ್ಡ್‌ಗಳ ಭಾಗಶಃ ಪ್ರದೇಶಕ್ಕೆ ನಿರಂತರ ಕುಡಿಯುವ ನೀರು ಪೂರೈಸಲಾಗುತ್ತಿದೆ. ಎಲ್ಲ ವಾರ್ಡ್ ಗಳಿಗೂ ನಿರಂತರ ನೀರು ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ನಿರ್ವಹಿಸುವ ಗುತ್ತಿಗೆ ಕಂಪನಿಯ ಅನುಮೋದನೆಗಾಗಿ ಆರ್ಥಿಕ ನೆರವು ನೀಡಲಿರುವ ವಿಶ್ವ ಬ್ಯಾಂಕ್‌ಗೆ ಸಲ್ಲಿಸಲಾಗಿದೆ. ಸದ್ಯದಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗುವುದು ಎಂದು ತಿಳಿಸಿದರು.
ಮಹಾನಗರದ ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು ಸರಬರಾಜು ಮಾಡಲು ಪ್ರತಿದಿನಕ್ಕೆ ಸುಮಾರು 200 ಎಂಎಲ್‌ಡಿ ನೀರಿನ ಅಗತ್ಯವಿದೆ. ಹುಬ್ಬಳ್ಳಿ ಮಹಾನಗರಕ್ಕೆ ನೀರಸಾಗರ ಜಲಾಶಯದಿಂದ ಸುಮಾರು 40 ಎಂಎಲ್‌ಡಿ ನೀರನ್ನು ಪಡೆಯಲಾಗುತ್ತಿತ್ತು. ಆದರೆ ಜಲಾಶಯ ಬತ್ತಿದ್ದರಿಂದ ಮಲಪ್ರಭಾ ಜಲಾಶಯದಿಂದ 160 ಎಂಎಲ್‌ಡಿ ನೀರಿನ ಮೇಲೆ ಅವಳಿನಗರಕ್ಕೆ ನೀರು ಪೂರೈಸಿದ್ದರಿಂದ ಬೇಸಿಗೆ ಕಾಲದಲ್ಲಿ 8-10 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಬೇಕಾಯಿತು. ಈ ಸಮಸ್ಯೆ ಪರಿಹರಿಸಲು ಸುಮಾರು 26 ಕೋಟಿ ಮೊತ್ತದಲ್ಲಿ ಮಲಪ್ರಭಾ ಜಲಾಶಯದಿಂದ ನೀರು ತರಲು ಸವದತ್ತಿ ಜಾಕ್ವೆಲ್ ಹಾಗೂ ಅಮ್ಮಿನಬಾವಿ ಪಂಪ್‌ಹೌಸ್ ಹೊಸ ಯಂತ್ರೋಪಕರಣ, ಪಂಪ್‌ಸೆಟ್‌ಗಳ ಅಳವಡಿಕೆ ಹಾಗೂ ಅಮ್ಮಿನಭಾವಿಯಲ್ಲಿ 40 ಎಂಎಲ್‌ಡಿ ಸಾಮರ್ಥ್ಯದ ಹೊಸ ಜಲ ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ.
ಈಗ ಮಲಪ್ರಭಾ ಜಲಾಶಯದಿಂದ 200 ಎಂಲ್‌ಡಿ ಹಾಗೂ ನೀರಸಾಗರ ಜಲಾಶಯದಿಂದ 40 ಎಂಎಲ್‌ಡಿ ಸೇರಿ ಒಟ್ಟು 240 ಎಂಎಲ್‌ಡಿ ನೀರು ಸರಬರಾಜು ಆಗುತ್ತದೆ. ಇದರಿಂದ ಅವಳಿನಗರದ ಜನತೆಗೆ ಪ್ರತಿ ಮೂರು ದಿನಕ್ಕೊಮ್ಮೆ ಕುಡಿಯುವ ನೀರನ್ನು ನಿರಾತಂಕವಾಗಿ ಪೂರೈಸಲಾಗುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಅಮೃತ ದೇಸಾಯಿ ಮಾತನಾಡಿ, ಎಲ್ಲ ಹಳ್ಳಿಗೂ ಮಲಪ್ರಭೆ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಶಾಸಕ ಅರವಿಂದ ಬೆಲ್ಲದ, ಡಿಸಿ ದೀಪಾ ಚೋಳನ್, ಮಾಜಿ ಶಾಸಕಿ ಸೀಮಾ ಮಸೂತಿ, ಕಾರ್ಯಪಾಲಕ ಅಭಿಯಂತ ಅಶೋಕ ಮಾಡ್ಯಾಳ, ಸಹಾಯಕ ಕಾರ್ಯ ಅಭಿಯಂತ ವೆಂಕಟರಾವ್, ಮಲ್ಲಿಕಾರ್ಜುನ ಹಳೆಮನಿ ಇನ್ನಿತರರಿದ್ದರು.
ಜಲಮಂಡಳಿ ನಿವೃತ್ತ ಮುಖ್ಯ ಅಭಿಯಂತ ಡಿ.ಎಲ್. ರಾಜು, ಕಾಮಗಾರಿ ಗುತ್ತಿಗೆ ಪಡೆದಿದ್ದ ಹೈದರಾಬಾದ್ ಇನ್‌ಫ್ರಾಟೆಕ್ ಸಂಸ್ಥೆಯ ಪ್ರತಿನಿಧಿ ಹಾಗೂ ಪುಣೆ ಮೂಲದ ಮೆ| ಎಸ್.ಬಿ.ಎಂ. ಪ್ರಾಜೆಕ್ಟ್ ಸಂಸ್ಥೆಯ ಪ್ರತಿನಿಧಿಯನ್ನು ಗೌರವಿಸಲಾಯಿತು. ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಸ್ವಾಗತಿಸಿದರು. ಮುಖ್ಯ ಅಭಿಯಂತ ಎ.ಸಿ. ಚಾಮರಾಜೇಗೌಡ ಪ್ರಾಸ್ತಾವಿಕ ಮಾತನಾಡಿದರು. ಗೌರಿ ನಿರೂಪಿಸಿದರು. ಜಗದೀಶ ಬಳಬಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.