ಮಳೆಪ್ಪಜ್ಜರ 6ನೇ ಜಾತ್ರಾ ಮಹೋತ್ಸವ
Team Udayavani, Apr 21, 2019, 12:17 PM IST
ಧಾರವಾಡ: ನರೇಂದ್ರ ಗ್ರಾಮದ ಮಳೆಪ್ಪಜ್ಜ ಹಾಗೂ ಮೌನಯೋಗಿ ಮಹಾಂತ ಶಿವಯೋಗಿಗಳ 61ನೇ ಜಾತ್ರಾ ಮಹೋತ್ಸವ ಅಪಾರ ಭಕ್ತರ ಹರ್ಷೋದ್ಘಾರಗಳ ಮಧ್ಯೆ ಸಂಭ್ರಮದಿಂದ ಜರುಗಿತು.
ಗ್ರಾಮದೇವಿಗೆ ಉಡಿ ತುಂಬುವ ಕಾರ್ಯಕ್ರಮದ ಬಳಿಕ ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ, ವೇ|ಮೂ| ದುಂಡಯ್ಯ ಸ್ವಾಮೀಜಿ ಹಾಗೂ ಧರ್ಮದರ್ಶಿ ಸಂಗಮೇಶ ಅಜ್ಜನವರ ಸಾನ್ನಿಧ್ಯದಲ್ಲಿ ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥ ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಕೊಬ್ಬರಿ, ಉತ್ತತ್ತಿಗಳನ್ನು ರಥದತ್ತ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಮಳೆಪ್ಪಜ್ಜನ ಮಠದ ಟ್ರಸ್ಟ್ ಕಮಿಟಿ ಅಧ್ಯಕ್ಷ ಚಂದ್ರಗೌಡ ಪಾಟೀಲ, ಗ್ರಾಪಂ ಅಧ್ಯಕ್ಷ ಈರಪ್ಪ ಗಂಟಿ, ಸದಸ್ಯರಾದ ಮಂಜುನಾಥ ತಿರ್ಲಾಪುರ, ಈಶ್ವರ ಗಾಣಿಗೇರ, ತಾಪಂ ಸದಸ್ಯ ಮಹಾವೀರ ಜೈನರ್, ಎಪಿಎಂಸಿ ಸದಸ್ಯ ಚನವೀರಗೌಡ ಪಾಟೀಲ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.