Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Team Udayavani, Jan 11, 2025, 2:37 PM IST
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡದ ಜನರು ಏನೇ ಕಾರ್ಯಕ್ರಮ ಮಾಡಿದರೂ ಅದರಲ್ಲೊಂದು ಅಚ್ಚುಕಟ್ಟುತನ ಇರುತ್ತದೆ. ಈ ಕಾರಣದಿಂದಾಗಿ ಶಿಕ್ಷಣ ಕ್ಷೇತ್ರ, ವೈದ್ಯಕೀಯ ಕ್ಷೇತ್ರದಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ಹೇಳಿದರು.
ಅವರು ಶನಿವಾರ (ಜ.11) ಮಂಗಳೂರಿನ ಟಿಎಂಎ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 7ನೇ ವರ್ಷದ ಮಂಗಳೂರು ಲಿಟ್ ಫೆಸ್ಟ್ ಉದ್ಘಾಟಿಸಿ ಮಾತನಾಡಿದರು.
ಈ ಭೂಮಿ ಕನ್ನಡ ನಾಡಿಗೆ ಅನೇಕ ವೈದ್ಯರು, ಶಿಕ್ಷಕರು ಸೇರಿದಂತೆ ಕೋಟ ಶಿವರಾಮ ಕಾರಂತ, ರಾಷ್ಟ್ರಕವಿ ಗೋವಿಂದ ಪೈ, ಪಂಜೆ ಮಂಗೇಶರಾಯರು, ಸೇಡಿಯಾಪು, ವ್ಯಾಸರಾಯ ಬಲ್ಲಾಳರಂತಹ ಹೆಸರಾಂತ ಸಾಹಿತಿಗಳನ್ನು ನೀಡಿದೆ ಎಂದರು.
ವರ್ಷಕ್ಕೊಮ್ಮೆ ದೇಶದ ಮೂಲೆ, ಮೂಲೆಗಳಿಂದ ಖ್ಯಾತನಾಮರನ್ನು ಕರೆಯಿಸಿ ವಿವಿಧ ವೇದಿಕೆಗಳಲ್ಲಿ ವಿಚಾರ ಸಂಕೀರ್ಣ ಏರ್ಪಡಿಸುತ್ತಿದ್ದೀರಿ. ಆದರೆ ಇಲ್ಲಿ ಚರ್ಚಿಸಿದ, ಮಂಡಿಸಿದ ವಿಷಯಗಳು ತಲುಪಬೇಕಾದವರನ್ನು ತಲುಪುತ್ತಿದೆಯೇ, ನೀವು ನಿರೀಕ್ಷಿಸಿದ ಪರಿಣಾಮ ಆಗುತ್ತಿದೆಯೇ ಎಂಬ ಆತ್ಮವಿಶ್ವಾಸ ಮುಖ್ಯವಾಗಿದೆ. ಆದಾಗದಿದ್ದರೆ ವರ್ಷಕ್ಕೊಂದು ಬಾರಿ ನಡೆಸಲೇಬೇಕಾದ ಕಾರ್ಯಕ್ರಮವಾಗುವ ಮೂಲಕ ಇದು ಯಾಂತ್ರಿಕತೆಗೆ ತಿರುಗುತ್ತದೆ ಎಂದು ಭೈರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಯಾವುದೇ ಕಾರ್ಯ ಯಾಂತ್ರಿಕವಾದರೆ, ಅಲ್ಲಿ ಹೊಸ ವಿಚಾರ ಮೂಡಲು ಆಸ್ಪದ ಇರುವುದಿಲ್ಲ. ಇದರಿಂದಾಗಿ ಸಮಾಜಕ್ಕೂ ಹೊಸದೇನನ್ನೂ ನೀಡಲಾಗುವುದಿಲ್ಲ. ಸಾಹಿತ್ಯೋತ್ಸವವನ್ನು ವರ್ಷ, ವರ್ಷ ನಡೆಸಿಯೂ ಹೊಸತನವನ್ನು ಕಾಪಾಡಿಕೊಂಡು ಹೋಗುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ಭೈರಪ್ಪ ಹೇಳಿದರು.
ನನ್ನನ್ನು ಮಂಗಳೂರು ಲಿಟ್ ಫೆಸ್ಟ್ ಗೆ ಆಹ್ವಾನಿಸಿದ ವೇಳೆ, ಸರ್ ನೇರವಾಗಿ ಮಾತನಾಡಿದರೆ ಎಲ್ಲೆಲ್ಲೊ ಹೋಗುವ ಸಾಧ್ಯತೆಯಿದೆ. ಅದಕ್ಕೆ ನಿಮ್ಮ ಭಾಷಣ ಬರೆದುಕೊಂಡು ಬಂದು ಓದಿ ಅಂತ ಹೇಳಿದ್ದರು. ಹಾಗಾಗಿ ನಾನು ಈಗ ಬರೆದುಕೊಂಡು ಬಂದ ಭಾಷಣ ಓದುತ್ತೇನೆ ಎಂದು ಹೇಳಿ ಭೈರಪ್ಪ ಮಾತು ಆರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.