ರೈತ ಸಂಘದಿಂದ ಹಲವು ನಿರ್ಣಯ: ರೈತ ಹುತಾತ್ಮ ದಿನಾಚರಣೆ, ಧಾರವಾಡದಲ್ಲಿ ಸಮಾವೇಶ
Team Udayavani, Jul 22, 2023, 6:07 AM IST
ಧಾರವಾಡ: ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ 43ನೇ ರೈತ ಹುತಾತ್ಮ ದಿನಾಚರಣೆ ಪ್ರಯುಕ್ತ ನಗರದ ರಪಾಟಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿ ಕೊಂಡಿದ್ದ ರೈತ ಚಳವಳಿಯ ಮುಂದಿನ ಹೋರಾಟದ ಘೋಷಣ ಸಮಾವೇಶದಲ್ಲಿ ಒಮ್ಮತದಿಂದ ಹಲವು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಯಿತು.
ರೈತ ವಿರೋಧಿ ಕೇಂದ್ರ ಬಿಜೆಪಿ ಸರಕಾರವನ್ನು ಮುಂದಿನ ಚುನಾವಣೆ ಯಲ್ಲಿ ಕಿತ್ತೂಗೆದು ಪ್ರಜಾಸತ್ತಾತ್ಮಕ ರಾಜಕೀಯ ವ್ಯವಸ್ಥೆ ಸ್ಥಾಪಿಸಲು ಸಮಾ ವೇಶದಲ್ಲಿ ಸಂಕಲ್ಪ ಮಾಡಲಾಯಿತು.
ರಾಜ್ಯ ಕಾಂಗ್ರೆಸ್ ಸರಕಾರವು ಚುನಾವಣ ಪೂರ್ವ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳ ಜಾರಿ, ಹಿಂದಿನ ಸರಕಾರ ತಂದಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆದಿರುವ ಕ್ರಮವನ್ನು ಸ್ವಾಗತಿಸಿರುವ ಸಮಾವೇಶವು, ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದಿದೆ.
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಆತಂಕದ ಸಂಗತಿ. ಸರಕಾರ ಕೂಡಲೇ ರೈತರಿಗೆ ಆತ್ಮಸ್ಥೆರ್ಯ ತುಂಬುವ ಕಾರ್ಯಕ್ರಮಗಳನ್ನು ಘೋಷಿಸಬೇಕು. ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ಅವರ ಕುಟುಂಬಕ್ಕೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದೆ.
ಸಾಲವಿಲ್ಲದೇ ಕೃಷಿ ವ್ಯವಸ್ಥೆಯನ್ನು ಸ್ಥಾಪಿಸಲು ರೈತ ಆದಾಯ ಕೇಂದ್ರಿತ ಕೃಷಿ ನೀತಿ ರೂಪಿಸಬೇಕು. ಘನತೆ ಮತ್ತು ಗೌರವದಿಂದ ಬದುಕಲು ರೈತ ಕುಟುಂಬಗಳಿಗೆ ಕನಿಷ್ಠ ಆದಾಯ ಖಾತ್ರಿಯನ್ನು ಒದಗಿಸಲು ರೈತ ಆದಾಯ ಆಯೋಗ ರಚಿಸಬೇಕು. ಇದಕ್ಕೆ ಪೂರಕವಾಗಿ ಪ್ರತಿ ಜಿಲ್ಲೆಯಲ್ಲಿ ರೈತ ರಕ್ಷಣಮಂಡಳಿ ರಚಿಸಬೇಕು. ಡಾ|ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಅನ್ವಯ ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರ ಉತ್ಪನ್ನಗಳನ್ನು ಸಂಪೂರ್ಣವಾಗಿ ಕೊಳ್ಳುವ ವ್ಯವಸ್ಥೆ ರೂಪಿಸಬೇಕು. ಕನಿಷ್ಠ 5 ಸಾವಿರ ಕೋಟಿ ರೂ. ಆವರ್ತ ನಿಧಿ ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.
2013ರ ಕೇಂದ್ರ ಸ್ವಾಧೀನ ಕಾಯ್ದೆಗೆ ರಾಜ್ಯ ಸರಕಾರ ತಂದಿರುವ ತಿದ್ದುಪಡಿ ಮತ್ತು ರೂಪಿಸಿರುವ ನಿಯಮಗಳು ಕಾಯ್ದೆಯ ಮೂಲ ಉದ್ದೇಶಕ್ಕೆ ವ್ಯತಿರಿಕ್ತವಾಗಿದ್ದು, ಕೂಡಲೇ ಮಾರ್ಪಾಡು ಮಾಡಿ ರೈತಸ್ನೇಹಿಯಾಗಿ ರೂಪಿಸಬೇಕು. ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಶೀಘ್ರ ಅನುಷ್ಠಾನ ಮುಂತಾದ 16 ನಿರ್ಣಯಗಳನ್ನು ಒಮ್ಮತದಿಂದ ಅಂಗೀಕರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.