JDS Leader; ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ; ನಾಯಕರ ವಿರುದ್ಧ ವಾಗ್ದಾಳಿ

Team Udayavani, Mar 21, 2024, 2:32 PM IST

Marithibbe gowda resigns to the council post

ಹುಬ್ಬಳ್ಳಿ: ವಿಧಾನ ಪರಿಷತ್ತು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮರಿತಿಬ್ಬೇಗೌಡ, ನಾನು ಸ್ವಇಚ್ಛೆಯಿಂದ ಪರಿಷತ್ತು ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಜೆಡಿಎಸ್ ನಲ್ಲಿ ಜಾತ್ಯತೀತ ತತ್ವಗಳು ಉಳಿದಿಲ್ಲ. ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ಈ ಬಗ್ಗೆ ಪಕ್ಷದ ವರಿಷ್ಠರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜವಾಗಿಲ್ಲ ಎಂದರು.

ನಾಲ್ಕು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದೇನೆ.  ಅಧಿವೇಶನದಲ್ಲಿ ವಿಷಯಾಧಾರಿತವಾಗಿ ಬೆಂಬಲ ನೀಡಿದ್ದೇನೆ. ಕೃಷಿ, ಎಪಿಎಂಸಿ ಕಾಯ್ದೆಗಳ ವಿಚಾರದಲ್ಲಿ ಜೆಡಿಎಸ್ ಅಂದಿನ ಆಡಳಿತ ಪಕ್ಷದ ಪರ ನಿಂತಿತು. ಆದರೆ ನಾನು ಆತ್ಮಸಾಕ್ಷಿ ಅನುಗುಣವಾಗಿ ರೈತರ ಪರ ನಿಲುವು ತಳೆದಿದ್ದೆ. ಜೆಡಿಎಸ್ ನಲ್ಲಿ ಯಾವುದೇ ಪ್ರಮುಖ ತೀರ್ಮಾನಗಳಲ್ಲಿ ಪಕ್ಷದ ಶಾಸಕರು, ನಾಯಕರನ್ನು ಕೇಳುತ್ತಿಲ್ಲ. ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರೇ ನಿರ್ಣಯಿಸುತ್ತಾರೆ ಎಂದರು.

ಮಂಡ್ಯದಲ್ಲಿ ಹಿಂದೆ ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬೇಡ ಎಂದಿದ್ದಕ್ಕೆ ಪಕ್ಷ ವರಿಷ್ಠರು ನನ್ನ ಮೇಲೆ ಕೆಂಗಣ್ಣು ಬೀರಿ, ಪಕ್ಷದ ಕಾರ್ಯಕ್ರಮಗಳಿಂದ ದೂರ ಇರಿಸಿದ್ದು ನಾಲ್ಕು ವರ್ಷಗಳಿಂದ ನನ್ನನ್ನು ದೂರ ಇರಿಸಲಾಗಿದೆ ಎಂದರು.

ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ ಮೊಸಳೆ ಮೇಲಿನ ಸವಾರಿಯಾಗಿದೆ ಎಂದರು. ನನ್ನ ಮುಂದಿನ ರಾಜಕೀಯ ನಿರ್ಧಾರ ಎರಡು ದಿನಗಳಲ್ಲಿ ತಿರ್ಮಾನ ಪ್ರಕಟಿಸುವೆ ಎಂದು ನುಡಿದರು.

ಮತ್ತೊಬ್ಬರು ರಾಜೀನಾಮೆ ಸಾಧ್ಯತೆ: ಹೊರಟ್ಟಿ

ವಿಧಾನ ಪರಿಷತ್ತು ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ನೀಡಿದ ರಾಜೀನಾಮೆ ಅಂಗೀಕರಿಸಿದ್ದೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ಮರಿತಿಬ್ಬೇಗೌಡ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾಗಿ ಹೇಳಿದ್ದಾರೆ. ನಿಯಮದಂತೆ ರಾಜೀನಾಮೆ ಅಂಗೀಕರಿಸಿದ್ದು, ಇಂದಿನಿಂದ ಅವರು ಪರಿಷತ್ತು ಸದಸ್ಯರಲ್ಲ. ನನ್ನ ಅವಧಿಯಲ್ಲಿ ಒಟ್ಟು 11 ಜನ ಸದಸ್ಯರು ರಾಜೀನಾಮೆ ನೀಡಿದ್ದು ಇದೊಂದು ದಾಖಲೆಯಾಗಿದೆ. ಇನ್ನೆರಡು ದಿನಗಳಲ್ಲಿ ಮತ್ತೊಬ್ಬ ಸದಸ್ಯರು ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದರಾದರೂ ಅವರು ಯಾರು ಎಂದು ಹೇಳಲಿಲ್ಲ.

ವಿಧಾನ ಮಂಡಲ ಅಧಿವೇಶನ ವರ್ಷದಲ್ಲಿ ಕನಿಷ್ಠ 60 ದಿನ ನಡೆಯಬೇಕೆಂಬ ನಿಯಮ ಇದೆ. ಆದರೆ ಅದು ಆಗುತ್ತಿಲ್ಲ ಎಂಬ ನೋವು ಇದೆ. ಅಧಿವೇಶನದಲ್ಲಿ ಆಡಳಿತ-ವಿಪಕ್ಷ ಸದ್ಯರು ವಿವಾದ, ಗದ್ದಲಕ್ಕೆ ಅವಕಾಶ ನೀಡದೆ ವಿಷಯಗಳ ಮೇಲೆ ಗಂಭೀರ ಚರ್ಚೆ ಆಗುವಂತಾಗಬೇಕಾಗಿದೆ ಎಂದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.