ಕಡ್ಡಾಯ ಮಾಸ್ಕ್ ಧಾರಣೆ ಅವಶ್ಯ: ಶೆಟ್ಟರ
Team Udayavani, Jun 19, 2020, 9:54 AM IST
ಹುಬ್ಬಳ್ಳಿ: ಕೋವಿಡ್ ವೈರಸ್ ವಿರುದ್ಧ ದೇಶ ಹೋರಾಟ ನಡೆಸುತ್ತಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಕೈ ತೊಳೆದುಕೊಳ್ಳುವುದನ್ನು ಕಡ್ಡಾಯವಾಗಿ ಮಾಡಬೇಕು ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು.
ಚನ್ನಮ್ಮ ವೃತ್ತದಲ್ಲಿ ಜಿಲ್ಲಾಡಳಿತ, ಹುಬ್ಬಳ್ಳಿ ತಾಲೂಕಾಡಳಿತ, ಮಹಾನಗರ ಪಾಲಿಕೆ ಆಶ್ರಯದಲ್ಲಿ ಮಾಸ್ಕ್ ಬಳಕೆಯ ಕುರಿತು ಜನಜಾಗೃತಿಗಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ವೈರಸ್ ಹೊಡೆದೋಡಿಸುವ ನಿಟ್ಟಿನಲ್ಲಿ ದೇಶ ಮಹತ್ತರ ಪಾತ್ರ ವಹಿಸಿದ್ದು, ಇನ್ನು ಕೂಡಾ ನಾವು ಎಚ್ಚರದಿಂದಿರಬೇಕಾಗಿದೆ ಎಂದರು.
ಕೋವಿಡ್ ಬಗ್ಗೆ ಅನಗತ್ಯ ಭಯ ಬೇಡ, ಆದರೆ ಎಚ್ಚರಿಕೆಯಿಂದ ಇರಬೇಕು. ದೇಶದಲ್ಲಿ ಕೋವಿಡ್ ಹರಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಮಿತ್ತ ಮಾಸ್ಕ್ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದಾರೆ. ವೈರಾಣು ತಕ್ಷಣವೇ ನಾಶವಾಗುವುದಿಲ್ಲ. ದಿನನಿತ್ಯದ ಜೀವನದಲ್ಲಿ ಹಲವು ಬದಲಾವಣೆ ಮಾಡಿಕೊಳ್ಳುವುದರ ಮೂಲಕ ವೈರಾಣು ವಿರುದ್ಧ ಹೋರಾಡಬೇಕಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಾಳಿತ ಹಾಗೂ ಆಡಳಿತ ವರ್ಗ ತುಂಬಾ ಉತ್ತಮ ಕಾರ್ಯ ಮಾಡಿದೆ ಎಂದು ಹೇಳಿದರು.
ದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. 130 ಕೋಟಿ ಜನರಿರುವ ದೇಶದಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸುವಂತೆ ಮಾಡಲು ಸರ್ಕಾರಕ್ಕೆ ಕಷ್ಟಸಾಧ್ಯ. ಜನರು ತಾವೇ ಅರಿತು ಇದನ್ನು ಪಾಲಿಸಬೇಕು. ಸರ್ಕಾರದ ನಿರ್ದೇಶನದಂತೆ ಕೋವಿಡ್ ಲಕ್ಷಣ ಕಂಡುಬರುವ ರೋಗಿಗಳಿಗೆ ಮಾತ್ರ ಕೊವೀಡ್ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
ಜನಜಾಗೃತಿ ಜಾಥಾ ಕಿತ್ತೂರು ಚನ್ನಮ್ಮ ವೃತ್ತದ ಮೂಲಕ ಲ್ಯಾಮಿಂಗ್ಟನ್ ರಸ್ತೆ, ಅಂಬೇಡ್ಕರ್ ಸರ್ಕಲ್, ಕೊಪ್ಪಿಕರ ರಸ್ತೆ, ಬ್ರಾಡ್‌ವೇ ಮೂಲಕ ದುರ್ಗದ ಬಯಲಿನಲ್ಲಿ ಸಂಚರಿಸಿತು. ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ದೀಪಾ ಚೋಳನ್, ಮಹಾನಗರ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾ ಧಿಕಾರಿ ಮಹ್ಮದ್ ಜುಬೇರ್, ಪಾಲಿಕೆ ಉಪ ಆಯುಕ್ತ ಅಜೀಜ್ ದೇಸಾಯಿ, ಡಿಎಚ್‌ಒ ಯಶವಂತ ಮದೀನಕರ್, ಹುಬ್ಬಳ್ಳಿ ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್ ಪ್ರಕಾಶ ನಾಸಿ, ಪಾಲಿಕೆ ಆರೋಗ್ಯಾಧಿಕಾರಿ ಡಾ| ಪ್ರಭು ಬಿರಾದಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.