ವಿಜ್ಞಾನ ಕೇಂದ್ರದಲ್ಲಿ ಗಣಿತ ಮಾದರಿ ಸ್ಪರ್ಧೆ
Team Udayavani, Jan 23, 2021, 4:27 PM IST
ಧಾರವಾಡ: ಬೆಂಗಳೂರಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಅವ್ವ ಸೇವಾ ಟ್ರಸ್ಟ್, ಹಾಗೂ ಕರ್ನಾಟಕ ರಾಜ್ಯ ಗಣಿತ ಪರಿಷತ್ ಸಹಯೋಗದಲ್ಲಿ ರಾಜ್ಯಮಟ್ಟದ ಗಣಿತ ಮಾದರಿಗಳ ಆನ್‌ಲೈನ್ ತಯಾರಿಕಾ ಸ್ಪರ್ಧೆ 2020-21, ಅಕ್ಷರ ದಾಸೋಹ ಪುಸ್ತಕ ಬಿಡುಗಡೆ ಸಮಾರಂಭ, ಗಣಿತ ಹಾಗೂ ವಿಜ್ಞಾನ ಶಿಕ್ಷಕರ ಪುನಶ್ಚೇತನ ಕಾರ್ಯಾಗಾರವು ನಗರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜರುಗಿತು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಶಿಕ್ಷಕರಿಗೆ ಸಮಯ ಬಹಳ ಮಹತ್ವದ್ದು. ಶಿಕ್ಷಣದ ವ್ಯವಸ್ಥೆಗೆ ಮಹತ್ವವನ್ನು ಕೊಡಬೇಕು. ಪ್ರಾಮಾಣಿಕವಾಗಿ ಸೇವೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿದರೆ ಅವರ ಭವಿಷ್ಯ ಉಜ್ವಲವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಾದರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಇದನ್ನೂ ಓದಿ:ಯುವ ಸಮ್ಮೇಳನದಲ್ಲಿ ಐದು ನಿರ್ಣಯ ಮಂಡನೆ
ಅಧ್ಯಕ್ಷತೆ ವಹಿಸಿದ್ದ ಕವಿವಿ ಕುಲಪತಿ ಡಾ| ಕೆ.ಬಿ. ಗುಡಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯಕ್ಕೆ ಸಂಬಂಧಪಟ್ಟ ವಿಷಯದ ಜೊತೆಗೆ ನೀತಿ ಪಾಠದ ವಿಷಯವನ್ನು ಬೋ ಧಿಸಿದರೆ ಅಂಕಗಳ ಜೊತೆಗೆ ಉತ್ತಮ ನಾಗರಿಕನಾಗಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಲು ಸಾಧ್ಯ ಎಂದು ಹೇಳಿದರು.
ವಿಜ್ಞಾನ ಕೇಂದ್ರದ ನಿರ್ದೇಶಕ ಡಾ|ವೀರಣ್ಣ ಡಿ. ಬೋಳಿಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುರೇಶ ಕುಲಕರ್ಣಿ, ಎಂ. ಎ. ಬಾವಿಕಟ್ಟಿ, ಡಿಡಿಪಿಐ ಮೋಹನ ಹಂಚಾಟೆ, ಕ್ಷೇತ್ರ ಶಿಕ್ಷಣಾಧಿ ಕಾರಿ ಎ.ಎ. ಖಾಜಿ, ಉಮೇಶ ಬೊಮ್ಮಕ್ಕನವರ, ಬಿ.ಎಸ್. ಪಾಟೀಲ ಇದ್ದರು. ಆರ್.ಎಸ್. ದೇಶಪಾಂಡೆ ನಿರೂಪಿಸಿದರು. ಎ.ಎ.ಖಾಜಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.