ತೋಟಗಾರಿಕಾ ಬೆಳೆಗಾರರಿಗೆ ಗರಿಷ್ಠ 15 ಸಾವಿರ ಪರಿಹಾರ
Team Udayavani, Jun 10, 2020, 11:00 AM IST
ಹುಬ್ಬಳ್ಳಿ: ಲಾಕ್‌ಡೌನ್‌ದಿಂದ ಹಣ್ಣು ಮತ್ತು ತರಕಾರಿಗಳನ್ನು ಬೆಳೆದು ನಷ್ಟ ಹೊಂದಿದ ರೈತರಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಪರಿಹಾರ ಧನ ನೀಡಲಾಗುತ್ತಿದೆ. ಪ್ರತಿ ಹೆಕ್ಟೇರ್ ಗೆ 15,000ರೂ. ನಿಗದಿಪಡಿಸಲಾಗಿದ್ದು, ಗರಿಷ್ಠ 1 ಹೆಕ್ಟೇರ್‌ಗೆ ಪರಿಹಾರ ನೀಡಲಾಗುವುದು.
ಬಾಳೆ, ಪಪ್ಪಾಯ, ಅಂಜೂರ, ಕಲ್ಲಂಗಡಿ ಮತ್ತು ಕರಬೂಜ, ತರಕಾರಿ ಬೆಳೆಗಳಾದ ಟೊಮೆಟೊ, ಹಸಿ ಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಗುಂಬಳ, ಬೂದುಗುಂಬಳ, ಗಜ್ಜರಿ, ಈರುಳ್ಳಿ ಮತ್ತು ಡೊಣ್ಣಮೆಣಸಿನಕಾಯಿ ಬೆಳೆದ ರೈತರು ಇದರ ಸದುಪಯೋಗ ಪಡೆಯಬಹುದು. 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಆಧಾರದ ಮೇಲೆ ಫಲಾನುಭವಿಯ ಆಯ್ಕೆ ಮಾಡಲಾಗುವುದು. ಬಾಳೆ ಹಾಗೂ ಈರುಳ್ಳಿ ಬೆಳೆಗೆ ಸಂಬಂಧಿಸಿದಂತೆ ಮಾರ್ಚ್ 2ನೇ ವಾರದ ನಂತರ ಕಟಾವಿಗೆ ಖರೀದಿಸುವ ಫಸಲಿಗೆ ಮಾತ್ರ ಪರಿಹಾರ ನೀಡಲಾಗುವುದು. ಕಲ್ಲಂಗಡಿ ಮತ್ತು ಕರಬೂಜಗಳು ಬೇಸಿಗೆ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಇವು ನಮೂದು ಆಗಿರದಿದ್ದರೆ, ನಿಗದಿತ ಅರ್ಜಿ ಜತೆಗೆ 2 ಫೋಟೋ, ಹೊಲದ ಉತಾರ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ ಕಾರ್ಡ್ ಪ್ರತಿ ಹಾಗೂ ಜಂಟಿ ಖಾತೆ ಇದ್ದಲ್ಲಿ ಮಾತ್ರ 20 ರೂ. ಬಾಂಡ್ ಪೇಪರ್ ನಲ್ಲಿ ನೋಟರಿ ಅವರಿಂದ ದೃಢೀಕರಿಸಿದ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಜೂನ್ 20 ಅಂತಿಮ ದಿನವಾಗಿದೆ. ಹೀಗೆ ಸಲ್ಲಿಸಿದ ಅರ್ಜಿಗಳನ್ನು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಜಯ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.