ಕೇಂದ್ರದಿಂದ ಮೇ ತಿಂಗಳ ಪಡಿತರ ಆಹಾರ ಧಾನ್ಯ ಬಿಡುಗಡೆ
Team Udayavani, May 2, 2020, 1:31 PM IST
ಧಾರವಾಡ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಆಹಾರ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಲ್ಲಿ ಮೇ ತಿಂಗಳಲ್ಲಿ ಪಡಿತರ ಚೀಟಿದಾರರಿಗೆ ಹೆಚ್ಚುವರಿಯಾಗಿ ವಿತರಿಸಲು ಆಹಾರ ಧಾನ್ಯವನ್ನು ಬಿಡುಗಡೆ ಮಾಡಿದೆ.
ಈ ಆಹಾರ ಧಾನ್ಯವನ್ನು ಭಾರತ ಆಹಾರ ನಿಗಮದಿಂದ ಎತ್ತುವಳಿ ಮಾಡಿ ಜಿಲ್ಲೆಯ 8 ಸಗಟು ಮಳಿಗೆಗಳ ಮೂಲಕ 508 ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಏಕಕಾಲಕ್ಕೆ ಮೇ 3ರಂದು ಬೆಳಗ್ಗೆ 7 ಗಂಟೆಯಿಂದ ಆಹಾರಧಾನ್ಯ ವಿತರಣೆ ಆಗಲಿದ್ದು, ಪಡಿತರ ಚೀಟಿದಾರರು ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ನ್ಯಾಯಬೆಲೆ ಅಂಗಡಿಯಿಂದ ಆಹಾರ ಧಾನ್ಯವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಪಡೆಯಲು ಕೋರಲಾಗಿದೆ.
ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಒಬ್ಬ ಸದಸ್ಯರಿಗೆ 10 ಕೆಜಿಯಂತೆ ಅಕ್ಕಿ ಹಾಗೂ ಪ್ರತಿ ಚೀಟಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. ಬಿಪಿಎಲ್ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಹಾಗೂ ಪ್ರತಿ ಚೀಟಿಗೆ 1 ಕೆಜಿ ತೊಗರಿ ಬೇಳೆ ಉಚಿತವಾಗಿ ವಿತರಿಸಲಾಗುವುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ ಏಕ ಸದಸ್ಯ ಪಡಿತರ ಚೀಟಿಗೆ 5 ಕೆಜಿಯಂತೆ ಹಾಗೂ ಎರಡು ಅಥವಾ ಎರಡಕ್ಕಿಂತ ಹೆಚ್ಚಿಗೆ ಸದಸ್ಯರಿರುವ ಪಡಿತರ ಚೀಟಿಗೆ 10 ಕೆಜಿಯಂತೆ ಅಕ್ಕಿ ಪ್ರತಿ ಕೆಜಿಗೆ 15 ರೂ. ಗಳಂತೆ ವಿತರಿಸಲಾಗುವುದು. ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿದ ಬಿಪಿಎಲ್ ಪ್ರತಿ ಅರ್ಜಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ಎಪಿಎಲ್ ಪ್ರತಿ ಅರ್ಜಿಗೆ 10 ಕೆಜಿಯಂತೆ ಪ್ರತಿ ಕೆಜಿ 15 ರೂ.ಗಳಂತೆ ವಿತರಿಸಲಾಗುವುದು ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ.
ಅಕ್ರಮ ಕಂಡುಬಂದರೆ ದೂರು ನೀಡಿ: ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರಧಾನ್ಯ ವಿತರಿಸುವಾಗ ಅಕ್ರಮವೆಸಗಿದ ಸಂದರ್ಭದಲ್ಲಿ ತಕ್ಷಣ ಈ ಕೆಳಕಂಡ ಸಂಖ್ಯೆಗೆ ದೂರು ಸಲ್ಲಿಸಿದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಧಾರವಾಡ: 0836-2233822, ಮೊ:9845059245-9449357188, 9448221892, ಹುಬ್ಬಳ್ಳಿ: 0836 -2358388, ಮೊ: 9035074105, 8904840724, 8310490713, ಕಲಘಟಗಿ: 08370 – 284535, ಮೊ:7899972947, 8792340158, ಕುಂದಗೋಳ: 08304-290239, ಮೊ:9480145628, ನವಲಗುಂದ: 08380 -229240, ಮೊ:9620734505, 9902142458, ಹುಬ್ಬಳ್ಳಿ ಪಡಿತರ ಪ್ರದೇಶ: ಮೊ:9481008296, 9035074105, 9886320360, 9880725639 ಹಾಗೂ ಧಾರವಾಡ ಪಡಿತರ ಪ್ರದೇಶ: 0836-2446624, ಮೊ: 8088737170, 9108752005, ಜಿಲ್ಲಾಧಿಕಾರಿ ಕಾರ್ಯಾಲಯದ ಆಹಾರ ಶಾಖೆ-0836 2444594 ಸಂಪರ್ಕಿಸಬಹುದು ಎಂದು ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.