ಆನ್‌ಲೈನ್‌ನಲ್ಲಿ ಧ್ಯಾನ ಶಿಬಿರ
Team Udayavani, May 29, 2020, 9:24 AM IST
ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಹಜ ಯೋಗ ಸಂಸ್ಥೆಯ ಧ್ಯಾನ ಕಾರ್ಯಕ್ರಮ ಮೇ 31ರಂದು ಆನ್‌ಲೈನ್ ಮೂಲಕ ನಡೆಯಲಿದೆ ಎಂದು ಜಿಲ್ಲಾ ಸಂಚಾಲಕ ರವಿ ನಾಯಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ವೀಕ್ಷಣೆಗೆ ಯಾವುದೇ ಶುಲ್ಕವಿರುವುದಿಲ್ಲ. ಕಾರ್ಯಕ್ರಮವನ್ನು ಹಿಂದೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತಿತ್ತು. ಆದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಸೇರಬಾರದು ಎನ್ನುವ ಕಾರಣಕ್ಕೆ ಆನ್‌ಲೈನ್ ಮೂಲಕ ನಡೆಸಲು ನಿರ್ಧರಿಸಲಾಗಿದ್ದು, syonline.in ಮೂಲಕ ನೇರವಾಗಿ ವೀಕ್ಷಣೆ ಮಾಡಬಹುದಾಗಿದೆ ಎಂದರು.
ಶ್ರೀ ಮಾತಾಜಿ ನಿರ್ಮಲಾ ದೇವಿ ಸ್ಥಾಪಿಸಿರುವ ಸಹಜ ಯೋಗ ಸಂಸ್ಥೆಯಿಂದ ಲಾಕ್‌ಡೌನ್ ಸಂದರ್ಭದಲ್ಲಿ ಜನರ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಆನ್‌ಲೈನ್ ಮೂಲಕ ಧ್ಯಾನ ಹಾಗೂ ಸೂಕ್ತ ಸಲಹೆಗಳನ್ನು ನೀಡುವ ಕಾರ್ಯ ಮಾಡಲಾಗಿದೆ. ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಈ ಸೇವೆ ಉಚಿತವಾಗಿ ನಡೆಯುತ್ತಿದ್ದು, 36 ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಮೇ 31ರಂದು ನಡೆಯುವ ಕಾರ್ಯಕ್ರಮ ಕನ್ನಡದಲ್ಲಿ ನಡೆಯಲಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಪಂಚಾಕ್ಷರಿ ಮಠದ, ರಾಜು ಮಂಗಳವಾಡಿ, ಚಂದ್ರಶೇಖರ ತಡಸ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.