ಅಧಿಕಾರಿಗಳ ಬೆವರಿಳಿಸಿದ ಸದಸ್ಯರು

Team Udayavani, Feb 16, 2017, 1:29 PM IST

hub1.jpg

ಧಾರವಾಡ: ಅವಳಿ ನಗರದಲ್ಲಿ ಉಂಟಾಗಿರುವ ಕುಡಿಯುವ ನೀರಿನ ತೊಂದರೆ ಕುರಿತು ಚರ್ಚಿಸಿ ಸಮಸ್ಯೆ ಬಗೆಹರಿಸಲು ಮುಂದಿನ ವಾರ ಮಹಾನಗರ ಪಾಲಿಕೆ ವಿಶೇಷ ಸಾಮಾನ್ಯ ಸಭೆ ನಡೆಸುವುದಾಗಿ ಮೇಯರ್‌ ಮಂಜುಳಾ ಅಕ್ಕೂರ್‌ ಠರಾವು ಪಾಸ್‌ ಮಾಡಿದರು. 

ಬುಧವಾರ ಇಲ್ಲಿ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಪಕ್ಷಬೇಧ ಮರೆತ ಪಾಲಿಕೆ ಎಲ್ಲ ಸದಸ್ಯರು ಜಲಮಂಡಳಿ ಅಧಿಕಾರಿಗಳ ಬೆವರಿಳಿಸಿದರು. ಅವಳಿ ನಗರ ಮಾತ್ರವಲ್ಲ ಇದಕ್ಕೆ ಹೊಂದಿಕೊಂಡಂತೆ ಇರುವ ಹಳ್ಳಿಗಳಲ್ಲೂ ಕುಡಿಯುವ ನೀರಿನ ಸಮಸ್ಯೆಯಾಗಿದ್ದು, ಜನ-ಜಾನುವಾರುಗಳು ತೊಂದರೆಯಲ್ಲಿವೆ.

ಹೀಗಾಗಿ ಪ್ರತ್ಯೇಕವಾಗಿ ಸಭೆ ನಡೆಸಬೇಕು ಎಂದು ಸರ್ವಪಕ್ಷಗಳ ಸದಸ್ಯರು ಒಕ್ಕೊರಲಿನಿಂದ ಆಗ್ರಹಿಸಿದರು. ಜಲಮಂಡಳಿಯ ವ್ಯವಸ್ಥಾಪಕ ನಿರ್ದೇಶಕರೇ ಖುದ್ದು ಸಭೆಗೆ ಹಾಜರಾಗುವಂತೆ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಈ ಕುರಿತು ಸುದೀರ್ಘ‌ ಚರ್ಚೆ ವೇಳೆ, ಸದಸ್ಯರಾದ ಯಾಸೀನ್‌ ಹಾವೇರ್‌ಪೇಟ್‌, ಸುಧೀರ್‌ ಸರಾಫ್‌, ಅಲ್ತಾಫ್‌ ಕಿತ್ತೂರ್‌, ಡಾ|ಪಾಂಡುರಂಗ ಪಾಟೀಲ ಸೇರಿದಂತೆ ಅನೇಕ ಸದಸ್ಯರು ಬೆಳಕು ಚೆಲ್ಲಿ 67 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 

ಇಲ್ಲಸಲ್ಲದ ನೆಪ ಹೇಳಿ ಅಧಿಕಾರಿಗಳು ಜನಪ್ರತಿನಿಧಿಗಳ ದಿಕ್ಕು ತಪ್ಪಿಸುತ್ತಿದ್ದಾರೆ. ಜನರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲು ಈ ಕುರಿತು ತುರ್ತು ಕ್ರಮದ ಅಗತ್ಯವಿದೆ. ಹೀಗಾಗಿ ವಿಶೇಷ ಸಭೆ ಕರೆಯಬೇಕು ಎಂದಾಗ, ಒತ್ತಡಕ್ಕೆ ಮಣಿದ ಮೇಯರ್‌ ಮಂಜುಳಾ ಅಕ್ಕೂರ್‌, ಮುಂದಿನ ಸೋಮವಾರ ಅಥವಾ ಮಂಗಳವಾರ ಮಹಾನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚಿಸುವುದಕ್ಕೆ ವಿಶೇಷ ಸಾಮಾನ್ಯ ಸಭೆ ಕರೆಯುವುದಾಗಿ ಠರಾವು ತೆಗೆದುಕೊಂಡರು. 

ಈ ಕುರಿತು ಸಭೆಯ ಗಮನ ಸೆಳೆದ ಕಾಂಗ್ರೆಸ್‌ ಸದಸ್ಯ ಯಾಸೀನ್‌ ಹಾವೇರ್‌ಪೇಟ್‌, ಕುಡಿಯುವ ನೀರು ಎಲ್ಲರಿಗೂ ಮುಖ್ಯ ಆದರೆ ಅಧಿಕಾರಿಗಳು ನೆಪ ಹೇಳುತ್ತಿದ್ದಾರೆ. ಹೀಗಾಗಿ ಕುಡಿಯುವ ನೀರು ಶೀಘ್ರ ಪೂರೈಕೆಗೆ ಇನ್ನಷ್ಟು ಹಣ ಖರ್ಚು ಮಾಡಿ ಚಾಕ್‌ವೆಲ್‌, ಓವರ್‌ಹೆಡ್‌ ಟ್ಯಾಂಕ್‌, ಉತ್ತಮ ಪೈಪ್‌ ಲೈನ್‌ ಹಾಕಬೇಕು ಎಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿಯ ಡಾ|ಪಾಂಡುರಂಗ ಪಾಟೀಲ, ಜಲಮಂಡಳಿ ಅಧಿಕಾರಿಗಳು ಎಲ್ಲರಿಗೂ ಪಂಗನಾಮ ಹಾಕುತ್ತಿದ್ದಾರೆ.

ಕಳೆದ 15 ವರ್ಷದಲ್ಲಿ 800 ಕೋಟಿ ರೂ.ಗಳಿಗೂ ಅಧಿಕ ಹಣ ಖರ್ಚು ಮಾಡಿದರೂ ಅವಳಿ ನಗರಕ್ಕೆ ಸಮರ್ಪಕ ನೀರು ಲಭಿಸುತ್ತಿಲ್ಲ.ಇದಕ್ಕೆ ಅಧಿಕಾರಿಗಳು ಜನಪ್ರತಿನಿಧಿಗಳ ದಿಕ್ಕು ತಪ್ಪಿಸಿರುವುದು  ಕಾರಣ. ಇದನ್ನು ಮೊದಲು ಸರಿಪಡಿಸೋಣ ಎಂದು ಆಗ್ರಹಿಸಿದರು. ಈ ವೇಳೆ ಬಿಜೆಪಿ, ಕಾಂಗ್ರೆಸ್‌ ಸದಸ್ಯರ ನಡುವೆ ಕೊಂಚ ಮಾತಿನ ಚಕಮಕಿ ನಡೆಯಿತು.  

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.