ನಾಟಕಗಳಿಂದ ಮನಸ್ಸಿಗೆ ಮುದ

Team Udayavani, Feb 8, 2017, 12:41 PM IST

hub1.jpg

ಧಾರವಾಡ: ನಾಟಕ ಎನ್ನುವುದು ಮನಸ್ಸಿಗೆ ಮುದ ನೀಡುವುದರ ಜೊತೆಗೆ ಪ್ರೇಕ್ಷಕನಿಗೆ ಜೀವನ ದರ್ಶನ ನೀಡಿ ಹಿತ ಎನಿಸುವ ನೀತಿಯನ್ನು ಬೋಧಿಸಿ ಜೀವನದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಕಲೆಯಾಗಿದೆ ಎಂದು ಜೆಎಸ್‌ಎಸ್‌ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ|ಜಿನದತ್ತ ಹಡಗಲಿ ಹೇಳಿದರು. 

ನಗರದ ಕವಿಸಂನಲ್ಲಿ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಮಾರ್ಗದರ್ಶನಲ್ಲಿ ಶಿವಕುಮಾರ ಕಲಾ ಸಂಘ ಶಿವಸಂಚಾರ-2016-17 ಸಾಣೇಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ದೃಶ್ಯ, ಕಾವ್ಯಕ್ಕೆ ಪ್ರಸಿದ್ಧಿ ಪಡೆದ ನಾಟಕ ಸಾಹಿತ್ಯ, ಸಂಗೀತ, ನೃತ್ಯ, ಅಭಿನಯವೆಂಬ ಲಲಿತ ಕಲೆಗಳ ಸಂಗಮವಾಗಿದೆ ಎಂದರು. 

90ರ ದಶಕದಲ್ಲಿ ಟಿ.ವಿ. ಹಾಗೂ ಸಿನೆಮಾಗಳು ಹವ್ಯಾಸಿ ಹಾಗೂ ವೃತ್ತಿ ರಂಗಭೂಮಿಗೆ ಸವಾಲು ಒಡ್ಡಿದ್ದನ್ನು ನಂತರ ಮತ್ತೆ ರಂಗಭೂಮಿಯ ಕಡೆ ಪ್ರೇಕ್ಷಕರ ಒಲವು ಮೂಡುತ್ತಿರುವುದನ್ನು ನಾವು ಕಾಣುತ್ತೇವೆ. ರಂಗಭೂಮಿ ಎಂದರೆ ಜನತೆಯ ವಿಶ್ವವಿದ್ಯಾಲಯ. ಅಲ್ಲಿ ಪ್ರೇಕ್ಷಕರಾದವರು ಪಾತ್ರಗಳೊಂದಿಗೆ ನಕ್ಕು ಅವರೊಂದಿಗೆ ಅತ್ತು ಭಿನ್ನ ಭಾವಗಳನ್ನು ಅಂತರಂಗದಲ್ಲೇ ಅನುಭವಿಸಿ ಜೀವನದಲ್ಲಿ ಪಾಠ ಕಲಿಯುವಂತಿರಬೇಕು.

ಆ ರೀತಿಯಲ್ಲಿ ತಮ್ಮ ಮನೋಜ್ಞ ಹಾಗೂ ಪ್ರೌಢ ಅಭಿನಯದಿಂದ ಪಾತ್ರಗಳಿಗೆ ಜೀವತುಂಬಿ ಸಾಣೇಹಳ್ಳಿಯ ಶಿವಸಂಚಾರ ತಂಡದವರು ಅದ್ಭುತವಾಗಿ ಪ್ರೇಕ್ಷಕರಿಗೆ ತೋರಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ ಶಿವಣ್ಣ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು.

ಮೋಹನ ನಾಗಮ್ಮನವರ, ಗುರು ಹಿರೇಮಠ, ಡಾ|ಶ್ರೀಶೈಲ ಹುದ್ದಾರ, ಡಾ|ಹೇಮಾ ಪಟ್ಟಣಶೆಟ್ಟಿ, ಸುಜಾತಾ ಹಡಗಲಿ, ಶಂಕರ ರಾಜಗೋಳ, ಮಾರ್ಕಂಡೇಯ ದೊಡಮನಿ, ನಿಂಗಣ್ಣ ಕುಂಟಿ, ಡಾ|ವಿಶ್ವನಾಥ ಚಿಂತಾಮಣಿ, ಪುಷ್ಪಾ ಹಿರೇಮಠ, ಲಕ್ಷ್ಮಣ ಬಕ್ಕಾಯಿ, ಪ್ರಕಾಶ ಮುಳಗುಂದ, ಬಿ. ಎಸ್‌. ಶಿರೋಳ, ಬಿ.ಕೆ.ಎಸ್‌. ವರ್ಧನ್‌, ವಿಜಯಾ ಲಿಂಬಣ್ಣದೇವರಮಠ, ಎಚ್‌.ಡಿ.ನದಾಫ್‌, ಯಕ್ಕೇರಪ್ಪ ನಡುವಿನಮನಿ, ಆಯ್‌.ಕೆ.ಬಳ್ಳೂರ ಇದ್ದರು.

ತಂಡದ ಮುಖ್ಯಸ್ಥ ಬಿ.ಆರ್‌.ಮಂಜುನಾಥ, ಶಿವಾನಂದ ಭಾವಿಕಟ್ಟಿ ಇದ್ದರು. ಶಂಕರ ಹಲಗತ್ತಿ ನಿರೂಪಿಸಿದರು. ಕೋಟಿಗಾನಹಳ್ಳಿ ರಾಮಯ್ಯ ರಚನೆಯ, ಗಜಾನನ ಟಿ. ನಾಯ್ಕ ಸಂಗೀತ ನಿರ್ದೇಶನದಲ್ಲಿ, ಪ್ರಮೋದ ಶಿಗ್ಗಾಂವ ನಿರ್ದೇಶನದಲ್ಲಿ “ನನ್ನ ಅಂಬೇಡ್ಕರ್‌’ ನಾಟಕ ಉತ್ತಮವಾಗಿ ಪ್ರದರ್ಶನಗೊಂಡಿತು.  

ಟಾಪ್ ನ್ಯೂಸ್

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.