ಉಪ್ಪಿಟ್ಟು ತಿಂದು ಸಚಿವ ಶಿವಳ್ಳಿ ಅಸ್ವಸ್ಥ
Team Udayavani, Feb 5, 2019, 12:40 AM IST
ಹುಬ್ಬಳ್ಳಿ: ಪೌರಾಡಳಿತ ಸಚಿವ ಸಿ.ಎಸ್. ಶಿವಳ್ಳಿ ಹಾಗೂ ಅವರ ಗನ್ಮ್ಯಾನ್ ಭಾನುವಾರ ರಾತ್ರಿ ಕಾರ್ಯಕ್ರಮವೊಂದರಲ್ಲಿ ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದು, ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಉಪ್ಪಿಟ್ಟು ಸೇವಿಸಿದಾಗ ತೀವ್ರ ಅಸ್ವಸ್ಥರಾಗಿದ್ದರು. ಅಲ್ಲಿಯೇ
ವಾಂತಿ ಮಾಡಿಕೊಂಡಿದ್ದಾರೆ.
ನಂತರ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ಆರೋಗ್ಯವಾಗಿದ್ದಾರೆ.ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗ್ರಾಮದಲ್ಲಿನ ನೂರಾರು ಜನ ಸಹ ಉಪ್ಪಿಟ್ಟು ಸೇವಿಸಿದ್ದು, ಯಾರ ಆರೋಗ್ಯದಲ್ಲೂ ಏರುಪೇರು ಕಂಡು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಉಪ್ಪಿಟ್ಟು ಪರಿಶೀಲಿಸಿದ್ದಾರೆ. ಕರಡಿಕೊಪ್ಪ ಗ್ರಾಮದಲ್ಲಿ ಕಾರ್ಯಕ್ರಮ ಮುಗಿದ ಮೇಲೆ ಉಪ್ಪಿಟ್ಟು ಸೇವಿಸಿದೆ. ಎರಡನೇ ತುತ್ತು ಸೇವಿಸುವಾಗ ವಿಷ ಎನಿಸಿ ಉಗುಳಿದೆ. ಉಪ್ಪಿಟ್ಟನ್ನು ಪಕ್ಕಕ್ಕೆ ಸರಿಸಿದೆ ಅದೇ ಪ್ಲೇಟ್ನಲ್ಲಿದ್ದ ಆಹಾರವನ್ನು ಸೇವಿಸಿ ಗನ್ಮ್ಯಾನ್ ಸೇರಿ ಮೂವರು ವಾಂತಿ ಮಾಡಿಕೊಂಡರು. ಈಗ ಎಲ್ಲರೂ ಆರೋಗ್ಯವಾಗಿದ್ದೇವೆ. ಯಾರ ಮೇಲೂ ಅನುಮಾನವಿಲ್ಲ. ವೈದ್ಯರ ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಸಿ.ಎಸ್. ಶಿವಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.