ಆರಂಭದಲ್ಲಿ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಲಾಗಿತ್ತು, ಈಗ ಪರಿಸ್ಥಿತಿ ಬದಲಾಗಿದೆ: ಶೆಟ್ಟರ್
Team Udayavani, Jun 21, 2021, 1:46 PM IST
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ದೇಶಾದ್ಯಂತ ಕೈಗೊಂಡಿರುವ ಕೋವಿಡ್ ಲಸಿಕೆ ಅಭಿಯಾನಕ್ಕೆ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೋಮವಾರ ಚಾಲನೆ ನೀಡಿದರು
ಇಲ್ಲಿನ ಕಾರವಾರ ರಸ್ತೆಯ ಹಳೇ ಸಿ.ಆರ್.ಮೈದಾನದಲ್ಲಿ ಪೊಲೀಸ್ ಕುಟುಂಬ ವರ್ಗದರಿಗಾಗಿ ಆಯೋಜಿಸಲಾಗಿದ್ದ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರಂಭದಲ್ಲಿ ಕೋವಿಡ್ ಲಸಿಕೆ ಬಗ್ಗೆ ಅಪಪ್ರಚಾರ, ಹಲವು ವದಂತಿಗಳಿಂದ ಜನರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದರು, ಇದೀಗ ಸ್ಥಿತಿ ಬದಲಾಗಿದೆ ಎಂದರು.
ಇದನ್ನೂ ಓದಿ:ಮತ್ತೆ ಆರು ಜಿಲ್ಲೆಗಳನ್ನು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ
ಕೋವಿಡ್ ಎರಡನೇ ಅಲೆ ತೀವ್ರವಾಗಿ ಹಾನಿ ಉಂಟುಮಾಡಿದ ಬಳಿಕ ಜನರಲ್ಲಿ ಎಚ್ಚರಿಕೆ ಮೂಡಿದೆ. ಲಸಿಕೆ ಪಡೆಯಲು ಮುಂದೆ ಬರುತ್ತಿದ್ದಾರೆ. ಕೇಂದ್ರ ಸರ್ಕಾರವೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಮುಂದೆ ಬಂದಿದೆ. ಧಾರವಾಡ ಜಿಲ್ಲೆಯಲ್ಲಿ 201 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಲಸಿಕಾ ಮೇಳದ ಆರಂಭದ ದಿನವಾದ ಇಂದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಟ್ಟು 50480 ಲಸಿಕೆ ಲಭ್ಯವಿದ್ದು 27000 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸ್ವತಃ ನಾನು ಕೋವಿಡ್ ಲಸಿಕೆ ಎರಡೂ ಡೋಸ್ ಪಡೆದಿದ್ದೇನೆ. ಯಾವುದೇ ಅಡ್ಡಪರಿಣಾಮ ಉಂಟಾಗಿಲ್ಲ. ಲಸಿಕೆ ನಿಮ್ಮನ್ನು ಕೋವಿಡ್‌ನಿಂದ ರಕ್ಷಿಸುತ್ತದೆ. ಪೊಲೀಸ್ ಆಯುಕ್ತ ಬೇಡಿಕೆಯಂತೆ ಪೊಲೀಸ್ ಕುಟುಂಬ ವರ್ಗದವರಿಗೂ ಇಂದು ಲಸಿಕೆ ಹಾಕಲಾಗುತ್ತಿದೆ. ಸಂಜೆ ವೇಳೆ 1000 ಜನರು ಲಸಿಕೆ ಪಡೆಯುವ ವಿಶ್ವಾಸವಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಶಾಸಕ ಪ್ರದೀಪ್ ಶೆಟ್ಟರ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್, ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ ಮದೀನಕರ್, ಜಿಲ್ಲಾ ಆರ್.ಸಿ.ಹೆಚ್.ಓ ಡಾ.ಎಸ್.ಎಮ್.ಹೊನಕೇರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.