ಐಐಐಟಿ ನೂತನ ಕಟ್ಟಡ 2 ತಿಂಗಳಲ್ಲಿ ಪೂರ್ಣ: ಬೆಲ್ಲದ
Team Udayavani, Mar 4, 2021, 5:58 PM IST
ಧಾರವಾಡ: ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ)ಯ ನೂತನ ಭವ್ಯ ಕಟ್ಟಡ ಕಾಮಗಾರಿ 117 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.
ಇಲ್ಲಿನ ತಡಸಿನಕೊಪ್ಪದ ಬಳಿ 61 ಎಕರೆ ವಿಸ್ತಾರದ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಐಐಐಟಿ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ವಿವಿಧೋದ್ದೇಶ ಸಭಾಂಗಣ, ವರ್ಗ ಕೋಣೆಗಳು, ಆಡಳಿತ ಭವನ, ವಿದ್ಯಾರ್ಥಿ ನಿಲಯದ ಕಟ್ಟಡಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದ ಅವರು, ಧಾರವಾಡಕ್ಕೆ ಐಐಐಟಿ ಬರಲು ಆಗ ಉನ್ನತ ಶಿಕ್ಷಣ ಸಚಿವರಾಗಿದ್ದ ಆರ್.ವಿ.ದೇಶಪಾಂಡೆ, ಈಗ ಕೇಂದ್ರ ಸಚಿವರಾಗಿರುವ ಪ್ರಹ್ಲಾದ ಜೋಷಿ, ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಕಾರ್ಯದರ್ಶಿಗಳಾಗಿದ್ದ ಡಾ| ರಜನೀಶ್ ಗೋಯೆಲ್ ಅವರು ನೀಡಿದ ಸಹಕಾರವೇ ಕಾರಣ. ಈ ಐಐಐಟಿಯ ಹೊಸ ಕಟ್ಟಡ ನಿರ್ಮಿಸಲು ಈ ಮುಂಚೆ ಸಿದ್ಧಪಡಿಸಿದ್ದ ವಿನ್ಯಾಸ ನಿರೀಕ್ಷೆಗೆ ಅನುಗುಣವಾಗಿರಲಿಲ್ಲ. ಧಾರವಾಡದ ಕರ್ನಾಟಕ ವಿವಿ, ಕೃಷಿ ವಿವಿ, ಕೆಸಿಡಿಯಂತೆ ನಗರದ ಹೆಗ್ಗುರುತಾಗಿ ಗುರುತಿಸಲ್ಪಡುವ ಮಾದರಿಯಲ್ಲಿ ವಿಶಿಷ್ಟವಾಗಿ ವಿನ್ಯಾಸಗೊಳಿಸಲು ಸೂಚಿಸಿ ಪುನರ್ ರಚಿಸಲಾಯಿತು. ಅದರಂತೆ ಅತ್ಯಂತ ಸುಂದರವಾಗಿ, ಭವ್ಯವಾಗಿ ಈ ಕಟ್ಟಡ ತಲೆ ಎತ್ತಿದೆ ಎಂದರು.
ಇಲ್ಲಿ ಐಐಐಟಿ ಸ್ಥಾಪನೆಯಾಗಲು ತಡಸಿನಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ನೀಡಿದ ಸಹಕಾರ ಮಹತ್ವದ್ದಾಗಿದೆ. ಐಐಐಟಿಯು ಸರ್ಕಾರ ಹೂಡಿಕೆಯೊಂದಿಗೆ ನಿರ್ಮಾಣವಾಗುತ್ತವೆ. ಮುಂದೆ ಯಾವುದೇ ಅನುದಾನವಿಲ್ಲದೇ, ವಿದ್ಯಾರ್ಥಿಗಳ ಶುಲ್ಕ, ಸಂಶೋಧನೆ ಚಟುವಟಿಕಗಳ ಮೂಲಕ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸಿ ಸ್ವಾಯತ್ತವಾಗಿ ನಿರ್ವಹಿಸಲ್ಪಡುತ್ತದೆ ಎಂದರು. ಐಐಐಟಿ ನಿರ್ದೇಶಕ ಡಾ|ಕವಿ ಮಹೇಶ, ರಿಜಿಸ್ಟಾರ್ ಚನ್ನಪ್ಪ ಅಕ್ಕಿ, ಯಲ್ಲಪ್ಪ ಅರಿವಾಳದ, ಮಂಜುಳಾ ರವಿ ಅಕ್ಕೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Maharstra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.