Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
Team Udayavani, Sep 20, 2024, 1:58 PM IST
ಹುಬ್ಬಳ್ಳಿ: ಶಾಸಕ ಮುನಿರತ್ನ ನಾಯ್ಡು ಮಾಡಿರುವುದು ಜನಪ್ರತಿನಿಧಿಗಳೆಲ್ಲರೂ ತಲೆತಗ್ಗಿಸುವಂತಹ ವಿಚಾರವಾಗಿದೆ. ಪಕ್ಷದವರಿಗೆ ನೈತಿಕತೆ ಇದ್ದರೆ ಅವರನ್ನು ಕೂಡಲೇ ಹೊರಹಾಕಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಒತ್ತಾಯಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್‌ಐವಿ ಇಂಜೆಕ್ಷನ್ ಮಾಡಲು ಪ್ರಯತ್ನಿಸಿದ ಆರೋಪದಲ್ಲಿರುವ ಶಾಸಕ ಮುನಿರತ್ನ ಅವರು ಜನಪ್ರತಿನಿಧಿಗಳಾಗಿ ಮುಂದುವರೆಯಲು ಯೋಗ್ಯವಲ್ಲ. ಅವರೊಬ್ಬ ನಾಲಾಯಕ್, ಅಯೋಗ್ಯರು ಎಂದು ಹರಿಹಾಯ್ದರು.
ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಕಾನೂನು-ಸುವ್ಯವಸ್ಥೆ ಸುಭದ್ರವಾಗಿದೆ. ವಿನಾಕಾರಣ ಬಿಜೆಪಿಯವರು ಕುಮ್ಮಕ್ಕು ನೀಡಿ ಹಿಂದೂ-ಮುಸ್ಲಿಂ ವಿಚಾರ ತರುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಕಾರ್ಯಗಳು ಬೇಕಾಗಿಲ್ಲ. ಕೆಲಸ ಮಾಡುವ ಸರ್ಕಾರಗಳು ಬೇಕಾಗಿಲ್ಲ. ರಾಜ್ಯದಲ್ಲಿ ನಡೆಯುವ ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದಾಗಿ ಬಿಂಬಿಸುತ್ತಿದ್ದಾರೆ. ಏನಾದರೂ ಮಾಡಿ ರಾಜ್ಯ ಸರ್ಕಾರದ ಹೆಸರನ್ನು ಕೆಡಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಈ ಯಾವುದಕ್ಕೂ ಆಸ್ಪದ ಕೊಡದೇ ಸರ್ಕಾರವು ಕಾನೂನು-ಸುವ್ಯವಸ್ಥೆ ಕಾಪಾಡುತ್ತಿದೆ ಎಂದರು.
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ ಮುತಾಲಿಕ್ ಅವರನ್ನು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಅವರು ಕೂಡ ನನಗೆ ಅಬ್ದುಲ್ ನೋ? ಅಬ್ಬಯ್ಯ ನೋ ಎಂದು ಏಕವಚನದಲ್ಲಿ ಮಾತನಾಡಿದ್ದಾರೆ. ಮೊದಲು ಅವರು ಕ್ಷಮೆ ಯೋಚನೆ ಮಾಡಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.