ಕಾನೂನು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಶಾಸಕ
Team Udayavani, Dec 11, 2021, 1:13 PM IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನವನಗರದ ಕರ್ನಾಟಕ ಕಾನೂನು ವಿವಿ ಎದುರು ಕಾನೂನು ವಿದ್ಯಾರ್ಥಿಗಳಿಂದ ಕಳೆದ 5 ದಿನಗಳಿಂದ ನಡೆಸುತ್ತಿರುವ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ಸಮಸ್ಯೆ ಆಲಿಸಿದರು.
ನಂತರ ಕಾನೂನು ವಿವಿ ಕುಲಪತಿ ಪ್ರೊ| ಈಶ್ವರ ಭಟ್ ಅವರನ್ನು ಪ್ರತಿಭಟನಾ ಸ್ಥಳಕ್ಕೆ ಕರೆಸಿಕೊಂಡ ಶಾಸಕರು, ವಿವಿಗಳು ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು. ಈಗಾಗಲೇ ಸೆಮಿಸ್ಟರ್ ಆರಂಭಕ್ಕೆ ಶುಲ್ಕ ಭರಿಸಿಕೊಂಡರೂ ತರಗತಿ ಆರಂಭಿಸಲು ಏನು ತೊಂದರೆ. ಪರೀಕ್ಷೆಯನ್ನು 15ರಿಂದ ನಡೆಸುವ ಉದ್ದೇಶ ಏನಿದೆ. ವಿದ್ಯಾರ್ಥಿಗಳ ಒತ್ತಾಸೆಯಂತೆಭೌತಿಕ ಪರೀಕ್ಷೆ ಕೈಬಿಟ್ಟು ಆನ್‌ಲೈನ್ ಮೂಲಕಅಥವಾ ಇನ್ನಿತರೆ ಮಾದರಿಯಲ್ಲಿ ಪರೀಕ್ಷೆ ನಡೆಸಲುಸಾಧ್ಯವೇ ಎಂಬುದನ್ನು ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದರು.
ಇದೇ 20ಕ್ಕೆ ನ್ಯಾಯಾಲಯದಲ್ಲಿ ವಿಚಾರಣೆಯಿದ್ದು, ಅಲ್ಲಿವರೆಗೂ ಪರೀಕ್ಷೆಮುಂದೂಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಿ. ನ್ಯಾಯಾಲಯ ತೀರ್ಮಾನ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಕುಲಪತಿಗೆ ತಿಳಿಸಿದರು.
ಕುಲಪತಿ ಪ್ರೊ| ಈಶ್ವರ ಭಟ್ ಮಾತನಾಡಿ,ಈಗಾಗಲೇ ಭೌತಿಕ ಪರೀಕ್ಷೆಗೆ ನೋಟಿμಕೇಶನ್ ಹೊರಡಿಸಲಾಗಿದೆ. ಪರೀಕ್ಷೆಗೆ ಸಂಬಂಧಿ ಸಿದಂತೆ ಉತ್ಛ ನ್ಯಾಯಾಲಯ ತೀರ್ಪು ನೀಡಿದ್ದು,ಅದರಂತೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.ಪರೀಕ್ಷೆಗೆ ತಡೆ ಹಿಡಿದರೆ ಕೋರ್ಟ್ ಆದೇಶಉಲ್ಲಂಘನೆಯಾಗುತ್ತದೆಯೇ ಎಂಬುದರಬಗ್ಗೆ ವಿವಿಯ ಹಿರಿಯ ಅಧಿ ಕಾರಿಗಳು, ಕಾನೂನು ತಜ್ಞರ ಜತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು.
ಕುಲಪತಿಗಳು ತಮ್ಮ ಹಠಮಾರಿತನದ ಧೋರಣೆ ಕೈಬಿಟ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ವಿದ್ಯಾರ್ಥಿ ಸ್ನೇಹಿಯಾಗಿ ಕಾರ್ಯ ನಿರ್ವ ಹಿಸಬೇಕು. ಇಲ್ಲದಿದ್ದರೆ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆಸದಸ್ಯರು, ಮುಖಂಡರು, ಕಾರ್ಯಕರ್ತರು ಸಹ ಭಾಗವಹಿಸಿ ಹೋರಾಟ ನಡೆಸುವ ಬಗ್ಗೆ ಎಚ್ಚರಿಕೆ ನೀಡಲಾಯಿತು.
ಈ ವಿಷಯ ಕುರಿತು ಡಿ.13ರಿಂದ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲೂ ವಿಷಯ ಪ್ರಸ್ತಾಪಿಸಿವಿದ್ಯಾರ್ಥಿಗಳ ಹಿತ ಕಾಯುವುದಾಗಿ ಶಾಸಕರು ತಿಳಿಸಿದರು.
ನಂತರ ಪ್ರತಿಭಟನಾ ನಿರತ ಕೆಲ ಕಾನೂನುವಿದ್ಯಾರ್ಥಿಗಳನ್ನು ಕರೆದುಕೊಂಡು ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಾಸಕ ಪ್ರಸಾದ ಅಬ್ಬಯ್ಯ,ಕಾನೂನು ವಿವಿ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು. ಅಧಿ ವೇಶನದಲ್ಲಿಪ್ರಶ್ನಿಸಿ ಮುಖ್ಯಮಂತ್ರಿ ಅವರಿಂದಲೇ ಉತ್ತರ ಕೊಡಿಸುವುದಾಗಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ, ಹುಡಾ ಮಾಜಿ ಅಧ್ಯಕ್ಷ ಅನ್ವರ್ ಮುಧೋಳ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಶಿವ ಬೆಂಡಿಗೇರಿ, ವರುಣಗೌಡ,ರಿತಿಕ್, ರೋಹಿತ್ ಘೋಡಕೆ, ಮುಜಾಹಿದ್ ಖಾನ್, ರೋಹಿತ ಇನ್ನಿತರದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.