ಹುಬ್ಬಳ್ಳಿಯಲ್ಲಿ ಮೋದಿ ಫೆಸ್ಟ್‌ಗೆ ಚಾಲನೆ
Team Udayavani, Jun 3, 2017, 12:12 PM IST
ಹುಬ್ಬಳ್ಳಿ: ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆರೋಪಿಸಿದರು.
ನಗರದ ನೆಹರು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರು ವರ್ಷಗಳ ಸಾಧನೆ ಹಾಗೂ ಯೋಜನೆಗಳನ್ನು ಬಿಂಬಿಸುವ ಉದ್ದೇಶದ ಮೋದಿ ಫೆಸ್ಟ್‌ಗೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರ ಜನ ಸಾಮಾನ್ಯರಿಗಾಗಿ ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೀಡಿದ ಬೆಳೆನಷ್ಟ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ದುರಾಡಳಿತದಿಂದ ರೈತರು ಸಮಸ್ಯೆ ಎದುರಿಸುವಂತಾಗಿದೆ ಎಂದರು.
ರಾಜ್ಯದ ಅನೇಕ ರೈತರಿಗೆ ಇನ್ನೂ ಬೆಳೆಹಾನಿ ಪರಿಹಾರ ನೀಡಲು ಸಾಧ್ಯವಾಗಿಲ್ಲ ಎಂದು ಸಚಿವ ಕಾಗೋಡು ತಿಮ್ಮಪ್ಪ ಅವರೇ ಹೇಳಿಕೆ ನೀಡಿದ್ದಾರೆ.
ಬರಗಾಲ ಹಿನ್ನೆಲೆಯಲ್ಲಿ ರೈತರು ತೊಂದರೆಯಲ್ಲಿದ್ದಾರೆ. ಪರಿಹಾರದ ಹಣ ಬೇಗನೆ ತಲುಪಿಸಲು ಕ್ರಮ ಕೈಗೊಳ್ಳಬೇಕು. ಫಸಲ್ ಬಿಮಾ ಯೋಜನೆಯಲ್ಲಿ ಅ ಧಿಕಾರಿಗಳ ಬೇಜವಾಬ್ದಾರಿಯಿಂದ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಪ್ರಧಾನಿ ಮೋದಿ ಜನರೊಂದಿಗೆ ನೇರ ಸಂಪರ್ಕ ಹೊಂದಿದ್ದಾರೆ. ಪ್ರಧಾನಿಯವರ ಮನ್ ಕೀ ಬಾತ್ ಸಾಕಷ್ಟು ಮನ್ನಣೆ ದೊರೆತಿದೆ. ಮುಂದೆ ಜನರ ಮಾತು ಆಲಿಸಲು “ಜನ ಕೀ ಬಾತ್’ ಎಂಬ ಕಾರ್ಯಕ್ರಮ ಆರಂಭಿಸಿರುವುದು ಸ್ತುತ್ಯಾರ್ಹ ಎಂದರು.
ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ದೇಶದಲ್ಲಿ ನರೇಂದ್ರ ಮೋದಿಯವರ ಉತ್ತಮ ಆಡಳಿತದಿಂದ ಜನರ ವಿಶ್ವಾಸಗಳಿಸಿಕೊಂಡಿದೆ. ಬರುವ ವರ್ಷದಲ್ಲಿ ಜಿಎಸ್‌ಟಿ ಶೇ.7.8 ರಷ್ಟು ಅಭಿವೃದ್ಧಿ ಸಾಧಿ ಸುವ ಗುರಿ ಹೊಂದಲಾಗಿದೆ. ಜಾಗತಿಕ ಮಟ್ಟದಲ್ಲಿ ದೇಶದ ಸಾಲ ಕಡಿಮೆಯಾಗಿದೆ. ರಾಜ್ಯ ಸರ್ಕಾರಕ್ಕೆ ಈಗಾಗಲೇ 3500 ಕೋಟಿ ಹಣ ಬಿಡುಗಡೆ ಮಾಡಿದ್ದು, ಅದನ್ನು ಖರ್ಚು ಮಾಡಿದಲ್ಲಿ ಇನ್ನೂ 1000 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ ಎಂದರು. ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಹಾಪೌರ ಡಿ.ಕೆ. ಚವ್ಹಾಣ ಉಪಸ್ಥಿತರಿದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.