ಕಾಸ್‌ ಬಾತ್‌: ಪಾಲಿಕೆ ಖಜಾನೆ ಖಾಲಿ ಆಗಿದ್ದೇಕೆ?


Team Udayavani, Oct 30, 2017, 12:38 PM IST

h1-hub-cor-off.jpg

ಹುಬ್ಬಳ್ಳಿ: ಪಿಂಚಣಿ ಬಾಕಿ ಅಂದಾಜು 120 ಕೋಟಿ ರೂ. ಬಾರದಿರುವುದು, ಆಸ್ತಿ ಕರ, ಜಾಹೀರಾತು ಶುಲ್ಕ, ಮಳಿಗೆಗಳ ಬಾಡಿಗೆ ಗುರಿ ಮುಟ್ಟದಿರುವುದು, ಭೂ ಬಾಡಿಗೆ ಆಸ್ತಿಯ ತ್ರಿಶಂಕು ಸ್ಥಿತಿ, ಕೈಗಾರಿಕಾ ವಲಯ, ವಿವಿಧ ಬಡಾವಣೆಗಳು ಹಸ್ತಾಂತರವಾಗದಿರುವುದು.

ಅನೇಕ ಆಸ್ತಿಗಳು ಕರ ಸಂಪರ್ಕ ಜಾಲದಿಂದ ಹೊರಗಿರುವುದು ಸೇರಿದಂತೆ ಹತ್ತಾರು ಕಾರಣಗಳಿಂದಾಗಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಖ್ಯಾತಿಯ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವೇತನ-ಬಿಲ್‌ ಪಾವತಿಗೂ ಪರದಾಡುವ ಸ್ಥಿತಿಗೆ ತಲುಪಿದೆ. 

ಪಾಲಿಕೆಗೆ ಮಾಸಿಕವಾಗಿ ಸರಾಸರಿ ಆದಾಯ 5ರಿಂದ 6 ಕೋಟಿ ರೂ. ವೆಚ್ಚ ಸುಮಾರು 12 ಕೋಟಿ ರೂ. ಅಲ್ಲಿಗೆ ಪ್ರತಿ ತಿಂಗಳು ಆದಾಯಕ್ಕಿಂತ ಶೇ.50ರಷ್ಟು ವೆಚ್ಚ ಹೆಚ್ಚಾಗಿರುವಾಗ ಯಾವ ಕುಬೇರನ ಆಸ್ಥಾನವಾದರೂ ಉಳಿಯಲು ಸಾಧ್ಯವಾದೀತು ಹೇಳಿ ಎಂಬುದು ಕೆಲವರ ಪ್ರಶ್ನೆಯಾಗಿದೆ. 

ಪಾಲಿಕೆ ತನ್ನ ಆದಾಯ ಮೂಲ ಹೆಚ್ಚಳಕ್ಕೆ ಹೆಚ್ಚಿನ ಆದ್ಯತೆ ನೀಡದೆ ಇದುವರೆಗೆ ಕೇವಲ ಸರ್ಕಾರಗಳಿಂದ ಬರುವ ಅನುದಾನಗಳನ್ನೇ ಹೆಚ್ಚಿಗೆ ಅವಲಂಬಿಸಿದ್ದು ಇದಕ್ಕೆ ಪ್ರಮುಖ ಕಾರಣವಾದರೆ, ಕಳೆದ ಮೂರ್‍ನಾಲ್ಕು ವರ್ಷಗಳಿಂದ ಪಿಂಚಣಿ ಬಾಕಿ ಹಣ ಬಾರದಿರುವುದು ಪಾಲಿಕೆಯ ಆರ್ಥಿಕ ಮುಗ್ಗಟ್ಟು ಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ನಡುವೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎರಡನೇ ಹಂತದ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಸ್ಥಾನ ಪಡೆದಿದೆ. ಸ್ಮಾರ್ಟ್‌ ಸಿಟಿ ಯೋಜನೆಯ ಪ್ರಮುಖ ಅಂಶಗಳಲ್ಲಿ ಪಾಲಿಕೆ ತನ್ನ ಸ್ವಂತ ಆದಾಯ ಮೂಲ ಹೆಚ್ಚಿಸಿಕೊಳ್ಳಬೇಕು ಎಂಬುದಾಗಿದೆ. ಇಲ್ಲಿನ ಪಾಲಿಕೆ ಮಟ್ಟಿಗೆ ಅದೇ ದುಸ್ತರವಾಗಿ ಕಾಡುತ್ತಿದೆ.

ಪಿಂಚಣಿ ಬಾಕಿ ಹಣ ಬಾರದಿರುವುದರಿಂದ ಪಾಲಿಕೆ ಅಭಿವೃದ್ಧಿ ಯೋಜನೆಗೆಂದು ಇರುವ ಹಣವನ್ನು ಅನಿವಾರ್ಯವಾಗಿ ನಿವೃತ್ತ ನೌಕರರಿಗೆ ನೀಡಬೇಕಾಗಿದ್ದರಿಂದ ರಸ್ತೆ ಗುಂಡಿ ಮುಚ್ಚುವುದು, ಪಾಲಿಕೆಯ ವಿವಿಧ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಬಿಲ್‌ ಪಾವತಿಗೂ ಹಣದ ಅಡಚಣೆ ಉಂಟಾಗಿದೆ ಎಂಬುದು ಅಧಿಕಾರಿಗಳ ಅನಿಸಿಕೆ.

2004ರಿಂದ ಜಾರಿಗೆ ಬಂದ ನಿಧಿ ಆಧಾರಿತ ಖಾತೆ ವ್ಯವಸ್ಥೆಯಿಂದ ಇಂತಹ ಪರಿಸ್ಥಿತಿ ಉದ್ಭವಿಸಿರಲಿಲ್ಲ. ಈ ವ್ಯವಸ್ಥೆಯಲ್ಲಿ ಯಾವುದೋ ಹಣವನ್ನು ಇನ್ನಾವುದೋ ಕಾರ್ಯಗಳಿಗೆ ಬಳಸುವಂತಿರಲಿಲ್ಲ. ಹೀಗಾಗಿ ಇರುವ ಅನುದಾನದಲ್ಲಿ ಯೋಜನೆ ಸಿದ್ಧವಾಗುತ್ತಿತ್ತು. ಹೀಗಾಗಿ ಪಾಲಿಕೆಗಳಿಗೆ ಹಣದ ಕೊರತೆ ಉಂಟಾಗುತ್ತಿರಲಿಲ್ಲ.

ಆದರೆ, 2014ರಲ್ಲಾದ ಎಡವಟ್ಟಿನಿಂದ ಪಾಲಿಕೆ ಆರ್ಥಿಕ ಮುಗ್ಗಟ್ಟಿಗೆ ತಳ್ಳಲ್ಪಟ್ಟಿದೆ. ಪ್ರತಿ ತಿಂಗಳು ಪಾಲಿಕೆಗೆ ಆದಾಯದ ರೂಪದಲ್ಲಿ ಸರಾಸರಿ 6 ಕೋಟಿ ರೂ. ಬರುತ್ತಿದೆ. ಆದರೆ ಪಿಂಚಣಿ 3 ಕೋಟಿ ರೂ., ಸುಮಾರು 1880 ಗುತ್ತಿಗೆ ಪೌರ ಕಾರ್ಮಿಕರಿಗೆ 3 ಕೋಟಿ ರೂ. ವೇತನ ಸೇರಿದಂತೆ ಇತರೆ ಎಲ್ಲಾ ಖರ್ಚುಗಳನ್ನು ನೋಡಿದರೆ ಸುಮಾರು 12 ಕೋಟಿ ರೂ. ಬೇಕಾಗುತ್ತದೆ. 

ಸರ್ಕಾರ ಪಿಂಚಣಿ ನೀಡದ ಕಾರಣ ಪಾಲಿಕೆ ಪ್ರತಿ ತಿಂಗಳು 3.30 ಕೋಟಿ ರೂ. ಸಾಮಾನ್ಯ ನಿಧಿಯಿಂದ ಪಾವತಿ ಮಾಡುತ್ತಿದೆ. ಇದಕ್ಕಾಗಿ ಬೇರಾವ ಆದಾಯ ಅಥವಾ ಅನುದಾನಗಳಿಲ್ಲ. ಇನ್ನು ಪಾಲಿಕೆಗೆ ಆದಾಯದ ಮೂಲವಾದ ಕರ-ಶುಲ್ಕ ರೂಪದಲ್ಲಿ ಪ್ರಸಕ್ತ ಸಾಲಿನಲ್ಲಿ 59 ಕೋಟಿ ರೂ. ನಿರೀಕ್ಷೆ ಮಾಡಲಾಗಿತ್ತು. ಆದರೆ ವಾಸ್ತವದಲ್ಲಿ ಶೇ.65-75ರಷ್ಟು ಮಾತ್ರ ಕರ ಸಂಗ್ರಹವಾಗಿದೆ.

ಸರ್ಕಾರ ಈ ಹಿಂದೆ ಎಸ್‌ಎಫ್ಸಿ ಅನುದಾನದಲ್ಲಿ ಹಾಲಿ ನೌಕರರ ವೇತನ ಹಾಗೂ ಪಿಂಚಣಿಯನ್ನು ನೀಡುತ್ತಿತ್ತು. ಆದರೆ, 2014ರಲ್ಲಿ ಪಾಲಿಕೆಗೆ ಬೇಕಾದ ಅನುದಾನ ಬೇಡಿಕೆಯನ್ನು ಸಲ್ಲಿಸುವಲ್ಲಿ ಪಿಂಚಣಿ ಬಗ್ಗೆ ಪ್ರಸ್ತಾಪ ಮಾಡದಿರುವುದೆ ಈ ಆರ್ಥಿಕ ಮುಗ್ಗಟ್ಟಿಗೆ ಕಾರಣ ಎಂಬ ಅಭಿಪ್ರಾಯವಿದೆ.

ಅಲ್ಲದೇ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಉದ್ದೇಶಪೂರ್ವಕವಾಗಿ ರಾಜ್ಯ ಸರ್ಕಾರ ಪಿಂಚಣಿ ಹಣ ನೀಡುತ್ತಿಲ್ಲ ಎಂಬ ಆರೋಪವೂ ಇದೆ. ಒಟ್ಟಾರೆ ಹಲವು ಕಾರಣದಿಂದ ಪಾಲಿಕೆ ಆರ್ಥಿಕ ಮುಗ್ಗಟ್ಟಿನಿಂದ ನಗರದಲ್ಲಿ ಸಣ್ಣ ಕಾಮಗಾರಿಗಳನ್ನೂ ಕೈಗೊಳ್ಳಲು ಪರದಾಡುವಂತಾಗಿದ್ದು ಮಾತ್ರ ವಿಪರ್ಯಾಸ. 

* „ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

Manipur: ಮತ್ತೆ ಸಶಸ್ತ್ರಪಡೆಗಳ ಕಾಯ್ದೆ ಜಾರಿ; ಸೇನಾ ಕಾರ್ಯಾಚರಣೆ:ಶಸ್ತ್ರಾಸ್ತ್ರಗಳು ವಶಕ್ಕೆ

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ss

BBK11: ಬಿಗ್ ಬಾಸ್ ಮನೆಯಲ್ಲಿ ಮದುವೆ ಸಂಭ್ರಮ: ಭಾವುಕರಾದ ಸ್ಪರ್ಧಿಗಳು.!

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Chennai: ತಮಿಳುನಾಡಿನಲ್ಲಿ ಮತ್ತೊಬ್ಬ ವೈದ್ಯನ ಮೇಲೆ ದಾಳಿ, ಪರಾರಿ

Suilla

Bantwala: ಬೋಳಂಗಡಿ; ಅಡಿಕೆ ಕೀಳುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಸಾವು

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

ud

Puttur: ಮನೆ ಅಂಗಲದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.