ಹಣ ದ್ವಿಗುಣ ಆಮಿಷ; 80 ಲಕ್ಷ ಟೋಪಿ

Team Udayavani, Jun 19, 2019, 2:23 PM IST

Udayavani Kannada Newspaper

ಹುಬ್ಬಳ್ಳಿ: ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಕಲಘಟಗಿಯ ಸುರಭಿ ಟ್ರೇಡರ್ಸ್‌ ಮಾಲೀಕರು ಸುಮಾರು 80 ಲಕ್ಷ ರೂ. ವಂಚಿಸಿದ್ದಾರೆ. ಇದರಿಂದ ಮನನೊಂದು ನನ್ನ ಪತಿ ಡೆತ್‌ನೋಟ್ ಬರೆದಿಟ್ಟು ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ವಂಚಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಂಚನೆಗೊಳಗಾದ ಲಕ್ಷ್ಮೀ ಮೇಟಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಂಚನೆ ಮಾಡಿರುವ ಕುರಿತು 2017 ಆಗಸ್ಟ್‌ನಲ್ಲಿ ಕಲಘಟಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ನಂತರ ಈ ದೂರನ್ನು ಧಾರವಾಡ ಆರ್ಥಿಕ ವಿಭಾಗಕ್ಕೆ ವರ್ಗಾಯಿಸಲಾಯಿತು. ಈ ಕುರಿತು ಸಾಕಷ್ಟು ಬಾರಿ ಎಸ್ಪಿ ಕಚೇರಿ ಅಲೆದರೂ ನಮಗೆ ನ್ಯಾಯ ದೊರೆಯಲಿಲ್ಲ. ವಂಚನೆ ಮಾಡಿದ ಆರೋಪಿಗಳನ್ನು ಬಂಧಿಸಿ ನಮ್ಮ ಹಣ ನೀಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ನನ್ನ ಪತಿ ದ್ಯಾಮಣ್ಣ ಮೇಟಿ ಯಾದಗಿರಿ ಜಿಲ್ಲೆಯಲ್ಲಿ ಶಿಕ್ಷಕರಾಗಿದ್ದು, ಸುರಭಿ ಟ್ರೇಡರ್ಸ್‌ ಮಾಲೀಕರಾದ ಫ‌ಹೀದ್‌ ನುಚ್ಚಿಕದನ ಮತ್ತು ಇಲಿಯಾಸ್‌ ನುಚ್ಚಿಕದನ ಅವರು ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿದ್ದರು. ಅವರನ್ನು ನಂಬಿ ನನ್ನ ಪತಿ ತಾವು ಹಾಗೂ ತಮ್ಮ ಸ್ನೇಹಿತರಿಂದ ಸುಮಾರು 80.78 ಲಕ್ಷ ರೂ. ತೊಡಗಿಸಿದ್ದರು. ಸ್ನೇಹಿತರಾದ ಶರಣಪ್ಪ ಹಾಗೂ ಲಿಂಗಯ್ಯ ಎನ್ನುವ ಶಿಕ್ಷಕರು ನೇರವಾಗಿ ಹಣದ ವ್ಯವಹಾರ ಮಾಡಿದ್ದಾರೆ. ಇದಕ್ಕೆ ನನ್ನ ಪತಿ ಯಾವುದೇ ಜವಾಬ್ದಾರಿಯಿಲ್ಲ. ಆದರೆ ಇವರಿಬ್ಬರು ನನ್ನ ಪತಿಗೆ ಕಿರುಕುಳ ನೀಡಿ ನಿಮ್ಮ ಭರವಸೆ ಮೇಲೆ ಹಣ ತೊಡಗಿಸಿದ್ದೇವೆ ಎಂದು ಚೆಕ್‌ ಪಡೆದು ಚೆಕ್‌ಬೌನ್ಸ್‌ ಕೇಸ್‌ ದಾಖಲು ಮಾಡಿ ಹಿಂಸೆ ನೀಡಿದ್ದಾರೆ ಎಂದು ಹೇಳಿದರು.

ಹಣ ಕಳೆದುಕೊಂಡ ನಮಗೆ ಪೊಲೀಸರಿಂದಲೂ ನ್ಯಾಯ ಸಿಗಲಿಲ್ಲ. ಅಲ್ಲದೇ ಸ್ನೇಹಿತರಿಂದ ಮಾನಸಿಕ ಕಿರುಕುಳ ಹಾಗೂ ಚೆಕ್‌ಬೌನ್ಸ್‌ ಪ್ರಕರಣದಲ್ಲಿ ನ್ಯಾಯಾಲಯ ತಿರುಗಾಟದಿಂದ ನನ್ನ ಪತಿ ಮನನೊಂದು 2019 ಮಾ. 30ರಂದು ಡೆತ್‌ನೋಟ್ ಬರೆದಿಟ್ಟು ಯಾದಗಿರಿ ಮನೆಯಿಂದ ನಾಪತ್ತೆಯಾಗಿದ್ದಾರೆ. ನನ್ನ ಪತಿಯನ್ನು ಹುಡುಕಿಕೊಡುವಂತೆ ಯಾದಗಿರಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದರೂ ಇದುವರೆಗೆ ಯಾವುದೇ ಪ್ರಯೋಜನವಿಲ್ಲ ಎಂದು ಲಕ್ಷ್ಮೀ ಕಣ್ಣೀರಿಟ್ಟರು.

ಈ ಹಿಂದೆ ರಾಯಚೂರು ಜಿಲ್ಲೆ ಮಸ್ಕಿ ಠಾಣೆಯಲ್ಲಿ ನನ್ನ ಪತಿಯನ್ನು ಬಂಧಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ್ದರು. ಒಂದು ದಿನದ ನಂತರ ನಮ್ಮೊಂದಿಗೆ ಫೋನ್‌ ಮೂಲಕ ಮಾತನಾಡಲು ಅವಕಾಶ ನೀಡಿದ್ದರು. ಈ ಎಲ್ಲ ಘಟನೆಗಳಿಗೆ ಕಾರಣವಾಗಿರುವ ಸುರಭಿ ಟ್ರೇಡರ್ನ ಮಾಲೀಕರನ್ನು ಬಂಧಿಸಿ ಹಣ ಕೊಡಿಸುವ ಕೆಲಸ ಪೊಲೀಸರು ಮಾಡಬೇಕು. ಪ್ರಮುಖವಾಗಿ ನಮ್ಮ ಮನೆಯವರು ಸುರಕ್ಷಿತವಾಗಿ ವಾಪಸ್‌ ಬರಬೇಕು. ನಿತ್ಯವೂ ಎರಡು ಮಕ್ಕಳು ಅಪ್ಪ ಯಾವಾಗ ಬರುತ್ತಾರೆ ಎಂದು ಅಳುತ್ತಿದ್ದಾರೆ. ದಯವಿಟ್ಟು ಪೊಲೀಸರು ನಮಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.