ಸ್ವಾತಂತ್ರ್ಯ ವೀರರ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ: ಶಾಸಕ ಅರವಿಂದ ಬೆಲ್ಲದ
ಮರು ದಾಖಲಿಸಿ, ಪುಸ್ತಕ ರೂಪದಲ್ಲಿ ಪ್ರಕಟಿಸುವ ಅಗತ್ಯವಿದೆ ಎಂದರು.
Team Udayavani, Aug 13, 2024, 6:01 PM IST
ಉದಯವಾಣಿ ಸಮಾಚಾರ
ಧಾರವಾಡ: ಜಿಲ್ಲೆಯ ಅನೇಕ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಅವರ ಕುರಿತು ಹೆಚ್ಚಿನ ಅಧ್ಯಯನದ ಅಗತ್ಯವಿದೆ. ಸಂಶೋಧಕರು ಅಖಂಡ ಧಾರವಾಡ ಜಿಲ್ಲೆಯನ್ನು ಅನುಲಕ್ಷಿಸಿ ಸ್ವಾತಂತ್ರ್ಯ ಸಂಗ್ರಾಮವನ್ನು ಅಧ್ಯಯನ ಮಾಡಿ ಪುಸ್ತಕ ಪ್ರಕಟಿಸಬೇಕು ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಶಾಸಕ ಅರವಿಂದ ಬೆಲ್ಲದ ಹೇಳಿದರು.
ಕವಿಸಂನಲ್ಲಿ ಜಿಲ್ಲಾಡಳಿತ ಮತ್ತು ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಸ್ವಾತಂತ್ರ್ಯ ಸಂಭ್ರಮಾಚರಣೆ ಪ್ರಯುಕ್ತ ಸೋಮವಾರದಿಂದ ಆಯೋಜಿಸಿರುವ ಐತಿಹಾಸಿಕ ದಾಖಲೆ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿ ಅವರು
ಮಾತನಾಡಿದರು.
ಮುಂಬೈ ಪ್ರಾಂತ್ಯದ ಸ್ವಾತಂತ್ರ್ಯ ಹೋರಾಟಗಳ ನೇರ ಪ್ರಭಾವಕ್ಕೆ ಒಳಗಾಗಿದ್ದ ಧಾರವಾಡ, ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಭಾಗದ ಜನರು ನಿರಂತರವಾಗಿ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಎಲ್ಲ ರೀತಿಯ ಹೋರಾಟಗಳಲ್ಲಿ ಪಾಲ್ಗೊಂಡು ತಮ್ಮ ಕುಟುಂಬ, ಆಸ್ತಿ ಕಳೆದುಕೊಂಡಿದ್ದಾರೆ. ಅನೇಕರು ಬಲಿದಾನವಾಗಿದ್ದಾರೆ. ಈ ಸಂಗತಿಗಳನ್ನು ಮರು ದಾಖಲಿಸಿ, ಪುಸ್ತಕ ರೂಪದಲ್ಲಿ ಪ್ರಕಟಿಸುವ ಅಗತ್ಯವಿದೆ ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ನರಗುಂದ, ನವಲಗುಂದ, ಹಾವೇರಿ, ಧಾರವಾಡದ ಅನೇಕ ಸ್ಥಳಗಳು ಚಳವಳಿಗೆ ಹೆಸರಾಗಿದ್ದವು. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಸಚಂದ್ರ ಬೋಸ್, ಬಾಲಗಂಗಾಧರ ತಿಲಕರಂತ ಅಪ್ರತಿಮ ಮಹಾನ ನಾಯಕರು ನಮ್ಮ ಜಿಲ್ಲೆಗೆ ಭೇಟಿ ನೀಡಿ ಹೋರಾಟಗಳಲ್ಲಿ ಭಾಗವಹಿಸಿದ್ದನ್ನು ತಿಳಿದು ಸ್ವಾಭಿಮಾನದ ಗರ್ವ ಮೂಡುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿದರು. ಮಾಜಿ ಸಂಸದ ಐ.ಜಿ.ಸನದಿ, ಹುಡಾ ಅಧ್ಯಕ್ಷ ಶಾಕೀರ ಸನದಿ, ಡಾ| ಐ.ಕೆ. ಪತ್ತಾರ, ಡಾ| ಅರವಿಂದ ಯಾಳಗಿ, ಹಿರಿಯ ಕಲಾವಿದ ಬಿ. ಮಾರುತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಇನ್ನಿತರರಿದ್ದರು. ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಸ್ವಾಗತಿಸಿದರು. ಪ್ರಾದೇಶಿಕ
ಪತ್ರಗಾರ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಡಾ| ಮಂಜುಳಾ ಯಲಿಗಾರ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.