17 ಸಾವಿರಕ್ಕಿಂತ ಹೆಚ್ಚು ಅನಧಿಕೃತ ಪ್ಲಾಟ್
•ಅವಳಿ ನಗರದ ಅಕ್ರಮ ಲೇಔಟ್‌ಗಳತ್ತ ತಕ್ಷಣ ಗಮನ ಹರಿಸಲು ಒತ್ತಾಯ
Team Udayavani, Jun 12, 2019, 9:06 AM IST
ಹುಬ್ಬಳ್ಳಿ: ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರ ಸಮೀಕ್ಷೆ ಪ್ರಕಾರ ಅವಳಿ ನಗರದಲ್ಲಿ 1400 ಎಕರೆ ಪ್ರದೇಶದಲ್ಲಿ 17 ಸಾವಿರಕ್ಕೂ ಅಧಿಕ ಅನಧಿಕೃತ ಪ್ಲಾಟ್‌ಗಳಿವೆ. ಜಿಲ್ಲಾಧಿಕಾರಿಗಳು ಅಕ್ರಮ ಲೇಔಟ್‌ಗಳ ಬಗ್ಗೆ ತಕ್ಷಣ ಗಮನ ಹರಿಸಬೇಕು. ಹುಡಾದಲ್ಲಿ ಈ ಹಿಂದಿದ್ದ ಟಾಸ್ಕ್ಫೋರ್ಸ್ ಸಮಿತಿ ಸಕ್ರಿಯಗೊಳಿಸಬೇಕು ಎಂದು ಹುಡಾ ಮಾಜಿ ಅಧ್ಯಕ್ಷ ಲಿಂಗರಾಜ ಪಾಟೀಲ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಅವಳಿ ನಗರದಲ್ಲಿ ಅಕ್ರಮ ಲೇಔಟ್‌ಗಳ ಹಾವಳಿ ತಡೆಗಟ್ಟುವ ಸಲುವಾಗಿ ಪಾಲಿಕೆ ಆಯುಕ್ತ ಪಿ. ಮಣಿವಣ್ಣನ್ ಇದ್ದಾಗ ಹಾಗೂ ನಾನು ಹುಡಾ ಅಧ್ಯಕ್ಷನಾಗಿದ್ದ ವೇಳೆ ಹುಡಾ, ಕಂದಾಯ ಇಲಾಖೆ, ಹೆಸ್ಕಾಂ ಹಾಗೂ ಪಾಲಿಕೆ ಹಿರಿಯ ಅಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್ ತಂಡ ರಚಿಸಿದ್ದೆ. ಸಮಿತಿ ನಿಷ್ಕ್ರಿಯವಾಗಿದ್ದು, ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ. ಹೀಗಾಗಿ ಅಕ್ರಮ ಲೇಔಟ್‌ಗಳು ಹುಟ್ಟುಕೊಳ್ಳುತ್ತಿವೆ ಎಂದರು.
ನಗರದಲ್ಲಿ ಕೆಲವರು ಲೇಔಟ್ ಎಂದು ಹೇಳಿ ನಾಲ್ಕು ಕಡೆ ಕಲ್ಲು ನಿಲ್ಲಿಸಿ, ಪ್ಲಾಟ್‌ಗಳನ್ನು ಬಡವರಿಗೆ ಕಡಿಮೆ ದರದಲ್ಲಿ ಹಾಗೂ ಕಂತುಗಳಲ್ಲಿ ಮಾರಾಟ ಮಾಡುವ ನೆಪದಲ್ಲಿ ಮೋಸ ಮಾಡುತ್ತಿದ್ದಾರೆ. ಇಂತಹ ಅಕ್ರಮ ಜಾಗ ಖರೀದಿಸಿದವರು ನಂತರ ಅಲ್ಲಿ ಮನೆ ಕಟ್ಟಿಸಿ ವಾಸಿಸುತ್ತಿದ್ದಾರೆ. ಅಲ್ಲದೆ ನೀರು, ರಸ್ತೆ, ವಿದ್ಯುತ್ ಸಂಪರ್ಕ ಪಡೆಯುತ್ತಿದ್ದಾರೆ. ಪಾಲಿಕೆಗೆ ಮನೆ ಕರ ಪಾವತಿಸುತ್ತಿದ್ದಾರೆ. ಕೆಲ ವರ್ಷಗಳ ನಂತರ ಜಮೀನಿನ ಮೂಲ ಮಾಲೀಕರು ತಮ್ಮದೆಂದು ಬಂದು ಅದನ್ನು ತಮ್ಮ ಕಬ್ಜಾಗೆ ಪಡೆಯುವುದು ಸಾಮಾನ್ಯವಾಗಿದೆ. ಇದರಿಂದ ಸಾಲಸೋಲ ಮಾಡಿ, ಕಷ್ಟಪಟ್ಟು ಮನೆ ಕಟ್ಟಿಕೊಂಡ ಬಡವರು ಬೀದಿಗೆ ಬರುತ್ತಿದ್ದಾರೆ. ಈ ರೀತಿ ಬಡವರಿಗೆ ಮೋಸ ಆಗದಂತೆ ಜಿಲ್ಲಾಡಳಿತ ಹಾಗೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕು. ಅಕ್ರಮ ಲೇಔಟ್‌ಗಳ ಮೇಲೆ ನಿಗಾ ವಹಿಸಬೇಕು. ರಾಜ್ಯ ಸರಕಾರ ಅಕ್ರಮ-ಸಕ್ರಮ ಮಸೂದೆ ಕೂಡಲೇ ಜಾರಿಗೆ ತಂದರೆ ಬಡವರು ಅನಧಿಕೃತವಾಗಿ ಖರೀದಿಸಿದ ಪ್ಲಾಟ್ಅನ್ನು ದಂಡ ಪಾವತಿಸಿ ಸಕ್ರಮಗೊಳಿಸಿಕೊಳ್ಳಲು ಅನುಕೂಲವಾಗುತ್ತದೆ ಎಂದರು. ವೀರೇಶ ಸಂಗಳ, ನಾಗೇಶ ಕಲಬುರ್ಗಿ ಇದ್ದರು.
ದಾಯಗೋಡಿ ಬಿಜೆಪಿಗೆ ಸೇರಿಲ್ಲ:
ಬೆಂಗೇರಿಯಲ್ಲಿ ಬೇರೆಯವರ ಜಾಗವನ್ನು ಬಡವರಿಗೆ ಅಕ್ರಮವಾಗಿ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಹೂವಪ್ಪ ದಾಯಗೋಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿಲ್ಲ. ಅವರು ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರಿಂದಲೇ ಅವರನ್ನು ಈ ಹಿಂದೆ ಪಕ್ಷದಿಂದ ಹೊರಗೆ ಹಾಕಲಾಗಿತ್ತು ಎಂದು ಬಿಜೆಪಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ನಾಗೇಶ ಕಲಬುರ್ಗಿ ಹೇಳಿದರು. ಇತ್ತೀಚೆಗೆ ನಗರದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಅವರು ವೇದಿಕೆ ಹಂಚಿಕೊಂಡಿರಬಹುದು. ಆದರೆ ಪಕ್ಷಕ್ಕೆ ಅವರನ್ನು ಸೇರ್ಪಡೆಗೊಳಿಸಿಕೊಂಡಿಲ್ಲ ಎಂದರು.
ನಗರದಲ್ಲಿ ಅನಧಿಕೃತ ಬಡಾವಣೆಗಳಿಗೆ ಬೆಂಬಲ ನೀಡಬಾರದು ಹಾಗೂ ಇಂತಹ ಲೇಔಟ್‌ಗಳ ನಿರ್ಮಾಣಕ್ಕೆ ಕೈಹಾಕಬಾರದೆಂದು ಪಕ್ಷದ ಧುರೀಣರು, ಪಾಲಿಕೆ ಮಾಜಿ ಸದಸ್ಯರು, ಕಾರ್ಯಕರ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಜಗದೀಶ ಶೆಟ್ಟರ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಸ್ಪಷ್ಟವಾಗಿ ಸೂಚಿಸಿದ್ದಾರೆ. ನಗರದಲ್ಲಿ ರಸ್ತೆ ಅತಿಕ್ರಮಿಸಿ ನಿರ್ಮಿಸಿದ ದರ್ಗಾಗಳನ್ನು ಜಿಲ್ಲಾಡಳಿತ ತೆರವುಗೊಳಿಸದಿದ್ದರೆ ಈದ್ಗಾ ಮೈದಾನ ರೀತಿ ಪಕ್ಷದಿಂದ ಹೋರಾಟ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.