ಪಾಲಿಕೆ ಖಜಾನೆ ಭರ್ತಿಗೆ ಕ್ರಮ


Team Udayavani, Feb 10, 2021, 4:22 PM IST

ಪಾಲಿಕೆ ಖಜಾನೆ ಭರ್ತಿಗೆ ಕ್ರಮ

ಧಾರವಾಡ: ಹು-ಧಾ ಅವಳಿನಗರದ ಬಹುತೇಕ ಕಡೆಗಳಲ್ಲಿ ಪಾಲಿಕೆ ಜಾಗ ಲೀಸ್‌ ಮೇಲೆ ಪಡೆದಿದ್ದು, ಅವುಗಳ ನವೀಕರಣ ಕಾರ್ಯ ನಡೆದಿಲ್ಲ. ಇಂತಹ ಜಾಗಗಳನ್ನು ಗುರುತಿಸಿ ಪಾಲಿಕೆ ಸುಪರ್ದಿಗೆ ಪಡೆಯಲು ಅಥವಾ ನವೀಕರಣ ಮಾಡಿ ಆದಾಯಬರುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಹೇಳಿದರು.

ನಗರದ ಪಾಲಿಕೆ ಸಭಾಂಗಣದಲ್ಲಿ ಹು-ಧಾ ಮಹಾನಗರ ಪಾಲಿಕೆ ಆಯವ್ಯಯಕ್ಕೆ ಜನರಿಂದ ಸಲಹೆ ಸ್ವೀಕರಿಸುವ ನಿಟ್ಟಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಸಭೆಯಲ್ಲಿ ಅವರು ಮಾತನಾಡಿದರು. ಪಾಲಿಕೆ ಆಸ್ತಿಗಳನ್ನು ಮಾರಾಟ ಮಾಡಿಲ್ಲ. ಆದರೆಅವಳಿನಗರದ ಕೆಲ ಕಡೆಗಳಲ್ಲಿ ವಾಣಿಜ್ಯ ಮಳಿಗೆ ಹಾಗೂ ನಿವೇಶನಗಳನ್ನು ಲೀಸ್‌ ಮೇಲೆ ನೀಡಲಾಗಿತ್ತು. ಇದೀಗ ಅವುಗಳಿಂದ ಯಾವುದೇ ಆದಾಯ ಬರುತ್ತಿಲ್ಲ. ಕೆಲ ಮಳಿಗೆಗಳು ಹಾಳಾಗಿದ್ದು, ಅವುಗಳನ್ನು ಹರಾಜು ನಡೆಸಲಾಗುತ್ತದೆ. ನಿವೇಶನಗಳಲ್ಲಿ ಮನೆ ನಿರ್ಮಿಸಿದವರಿಗೆ ಸೂಕ್ತ ಬೆಲೆಯಲ್ಲಿ ಅವರ ಹೆಸರಿಗೆ ಮನೆಗಳನ್ನು ಮಾಡಿಕೊಡುವ ಮೂಲಕ ಪಾಲಿಕೆ ಆದಾಯ ಮಾಡಿಕೊಳ್ಳುವ ಚಿಂತನೆ ಸಾಗಿದೆ ಎಂದರು.

ಹು-ಧಾ ಮಹಾನಗರ ಪಾಲಿಕೆ ಆಯವ್ಯಯಕ್ಕೆ ಜನರಿಂದ ಸಲಹೆ ಸ್ವೀಕರಿಸಲು ಎಲ್ಲ ವಲಯ ಕಚೇರಿ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ನಡೆಸಲುಸೂಚಿಸಲಾಗುವುದು. ಆಯವ್ಯಯಕ್ಕೆ ಸಂಬಂಧಿಸಿದ ಸೂಚನೆ-ಸಲಹೆಗಳನ್ನು ಕಚೇರಿಗೆ ಲಿಖೀತ ರೂಪದಲ್ಲಿಸಲ್ಲಿಸಬಹುದು ಎಂದರು.

ಮಹಾನಗರ ಪಾಲಿಕೆಯ ವ್ಯಾಪ್ತಿಯ ಸತ್ತೂರು ಮತ್ತು ನವಲೂರು ಪ್ರದೇಶಗಳ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲು ಸರಕಾರದಿಂದ ಅನುಮೋದನೆ ಪಡೆದಿದ್ದು, ಕಾಮಗಾರಿ ಆರಂಭಿಸಲಾಗುವುದು.ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕರಿಸಿದ ದೂರು, ಸಲಹೆಗಳನ್ನು ಮುಂಬರುವ ಬಜೆಟ್‌ನಲ್ಲಿಅಳವಡಿಸುವ ಕುರಿತು ಚರ್ಚಿಸಲಾಗುವುದು ಎಂದರು.

ಪಾಲಿಕೆ ಆಯವ್ಯಯಕ್ಕೆ ಸಲಹೆ: ಧಾರವಾಡದಲ್ಲಿ ಮಿಚಗಿನ್‌ ಕಾಂಪೌಂಡ್‌, ಕೂರ್ಪಾಲಿಸ್‌ ಕಾಂಪೌಂಡ್‌, ಕೆಲ ಶಿಕ್ಷಣ ಸಂಸ್ಥೆ ಸೇರಿ ಒಟ್ಟು 17 ಕಡೆಗಳಲ್ಲಿಸುಮಾರು 400 ಎಕರೆ ಜಾಗ ಲೀಸ್‌ ಪಡೆಯಲಾಗಿದೆ. ಅವಳಿನಗರದ ವಾಣಿಜ್ಯ ಮಳಿಗೆಗಳಿಂದ ಸರಿಯಾಗಬಾಡಿಗೆ ಸಂದಾಯವಾಗುತ್ತಿಲ್ಲ. ಅವುಗಳನ್ನು ಸರಿಯಾಗಿ ವಸೂಲಿ ಮಾಡಿದರೆ ಪಾಲಿಕೆ ಆದಾಯ ಹಾಗೂ ನಿರ್ವಹಣೆಯೂ ಆಗಲಿದೆ ಎಂದು ಲಕ್ಷ್ಮಣ ಬಕ್ಕಾಯಿ ಹೇಳಿದರು. ನಗರದಲ್ಲಿ ನಿರ್ಮಿಸಿರುವ ಕಾಂಕ್ರೀಟ್‌ ರಸ್ತೆಗಳ ಪಕ್ಕ ಪೇವರ್ ಹಾಕದ ಕಾರಣ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ವಲಯ

ಕಚೇರಿವಾರು ಜನ ಸಂಪರ್ಕ ಸಭೆ ನಡೆಸಬೇಕು. ಇನ್ನು ಕೆಲವರು ವಾಣಿಜ್ಯ ಮಳಿಗೆ ಲೀಸ್‌ ಪಡೆದು ಮತ್ತೂಬ್ಬರಿಗೆ ನೀಡಿ ವಂಚನೆ ಮಾಡುತ್ತಿದ್ದು, ಈ ಬಗ್ಗೆ ಕ್ರಮ ತಡೆಯಬೇಕೆಂದು ಜಿ.ಬಿ. ಬಿಂಗೆ ಮನವಿ ಮಾಡಿದರು. ಆಸ್ತಿ ತೆರಿಗೆ ಹಾಗೂ ನೀರಿನ ಬಿಲ್‌ ವಸೂಲಿ ಸರಿಯಾಗಿ ನಡೆಯುತ್ತಿಲ್ಲ. ಬಾಕಿ ವಸೂಲಿಗೆ ಒಂದು ಸೂಕ್ತ ವ್ಯವಸ್ಥೆ ಮಾಡಬೇಕು. ಇದರ ಜತೆಗೆ ಜನರಿಗೆ ಸರಿಯಾಗಿ ಮೂಲ ಸೌಕರ್ಯ ಒದಗಿಸುವ ಕೆಲಸ ಮಾಡಬೇಕೆಂದು ಮಹಾವೀರ ಶಿವಣ್ಣವರ ಮನವಿ ಮಾಡಿದರು. ಬಡಾವಣೆಗಳಲ್ಲಿನ ರಸ್ತೆ, ಉದ್ಯಾನವನ, ಒಳಚರಂಡಿ ವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿದ್ದು ಕಲ್ಯಾಣಶೆಟ್ಟಿ, ಬಸವರಾಜ ಸೇರಿ ವಿವಿಧ ಬಡಾವಣೆ ನಿವಾಸಿಗಳು ಆಯುಕ್ತರ ಗಮನ ಸೆಳೆದರು.

ಉಪ ಆಯುಕ್ತ ಎ.ಆರ್‌. ದೇಸಾಯಿ ಸೇರಿ ಪಾಲಿಕೆ ಅಧಿಕಾರಿಗಳು, ವಿವಿಧ ವಾರ್ಡುಗಳ ಪ್ರಮುಖರು ಪಾಲ್ಗೊಂಡಿದ್ದರು.

ತೆರಿಗೆ ಹೆಚ್ಚಳವಿಲ್ಲ:ಆಯುಕ್ತರ ಸ್ಪಷ್ಟನೆ :

ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ 3 ವರ್ಷಕ್ಕೊಮ್ಮೆ ತೆರಿಗೆ ಹೆಚ್ಚಿಸುವ ನಿಯಮವಿದೆ. ಆದರೆ ಕಳೆದ ವರ್ಷ ಹೆಚ್ಚಳ ಮಾಡಿದ್ದರಿಂದ ಈ ಬಾರಿ ಅಸಾಧ್ಯ. ಸರ್ಕಾರ ಮಹಾನಗರ ಪಾಲಿಕೆ ಕಾಯ್ದೆಗೆ ತಿದ್ದುಪಡಿ ತಂದು ಹೊಸ ಮಾರ್ಗಸೂಚಿ ಹೊರಡಿಸಿದೆ. ಹೀಗಾಗಿ ಆಮಾರ್ಗಸೂಚಿ ಪ್ರಕಾರ ತೆರಿಗೆ ಕುರಿತು ಜನರಿಗೆ ತಿಳಿವಳಿಕೆನೀಡಲಾಗುವುದೆಂದು ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಸ್ಪಷ್ಟಪಡಿಸಿದ್ದಾರೆ.

ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆಗೆ ಮನವಿ :

ಆಸ್ತಿ ತೆರಿಗೆ ಹೆಚ್ಚಳ ಅನಿಯಂತ್ರಿತವಾಗಿದ್ದು, ಅದನ್ನು ಸರಿ ಮಾಡುವ ಕೆಲಸ ಮಾಡಬೇಕು.ಮನೆ ಮನೆಗೆ ಕಸ ವಿಲೇವಾರಿ, ನಗರ ಸ್ವತ್ಛತೆ ಕಾರ್ಯಗಳಲ್ಲಿನ ಸಮಸ್ಯೆ ಪರಿಹರಿಸುವಕೆಲಸವಾಗಲಿ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಿದರೆ ಅನುಕೂಲ. ಈ ವಿಷಯದಲ್ಲಿಪಾಲಿಕೆ ಆಯುಕ್ತರು ಸರಕಾರದ ಜತೆ ಮಾತುಕತೆ ನಡೆಸಬೇಕೆಂದು ಶ್ರೀನಗರದ ನಿವಾಸಿ ಅಶೋಕ ಕುಂಬಾರಿ ಮನವಿ ಮಾಡಿದರು.

ಧಾರವಾಡಕ್ಕೆ ಸುಮಾರು 75 ಕೋಟಿ ರೂ.ಪ್ರತ್ಯೇಕ ಅನುದಾನವಿದೆ. ಈ ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಟೆಂಡರ್‌ ಕರೆಯಲಾಗಿದ್ದು, ಮಳೆಗಾಲಕ್ಕೂ ಪೂರ್ವದಲ್ಲಿ ಕಾಮಗಾರಿ ನಡೆಸಲಾಗುವುದು. ನಗರದ 78 ಕಡೆಗಳಲ್ಲಿ ಶೌಚಗೃಹ ನಿರ್ಮಿಸಲು ಸರ್ವೇ ನಡೆಸಿ ಸರ್ಕಾರ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯ ಶೌಚಗೃಹ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಇದಲ್ಲದೇ ಕಲಾಭವನವನ್ನು ಜನರ ಬಳಕೆಗೆ ನೀಡಲು ಶೀಘ್ರ ಬಾಡಿಗೆ ಪರಿಷ್ಕರಣೆ ಮಾಡಲಾಗುವುದು.ಸುರೇಶ ಇಟ್ನಾಳ, ಆಯುಕ್ತರು, ಹು-ಧಾ ಪಾಲಿಕೆ

ಟಾಪ್ ನ್ಯೂಸ್

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

BJP ಡಬಲ್‌ ಗೇಮ್‌; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

siddaramaiah

Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

2

Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

aane

Shimoga; ವಿದ್ಯುತ್‌ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.