ಅದರಗುಂಚಿ ಹಲ್ಲೆ ಪ್ರಕರಣ; ಮೂವರ ಬಂಧನ


Team Udayavani, May 20, 2019, 11:27 AM IST

hub-5

ಹುಬ್ಬಳ್ಳಿ: ಅದರಗುಂಚಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಶನಿವಾರ ಸಂಜೆ ನಡೆದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮೀಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದು, ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ.

ಘಟನೆಯಲ್ಲಿ ಅದರಗುಂಚಿ ಗ್ರಾಮದ ಶಿವಪ್ಪ ಬಿ. ಉಳ್ಳಾಗಡ್ಡಿ, ಮಕ್ತುಂಸಾಬ್‌ ನದಾಫ್ ಸೇರಿದಂತೆ ಇನ್ನಿತರರು ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಗ್ರಾಮದ ಮಲ್ಲಿಕಾರ್ಜುನ ಬುರಡಿ, ಗುರಪ್ಪ ಬುರಡಿ, ಮಹಾಂತೇಶ ಬುರಡಿ ಎಂಬುವರನ್ನು ಬಂಧಿಸಿದ್ದಾರೆ. ಪರಾರಿಯಾದವರ ಪತ್ತೆಗೆ ಜಾಲ ಬೀಸಿದ್ದಾರೆ.

ವೈಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳವಾಗಿ, ವಿಕೋಪಕ್ಕೆ ಹೋದಾಗ ಪರಸ್ಪರರು ಬಡಿಗೆಯಿಂದ ಹೊಡೆದಾಡಿಕೊಂಡಿದ್ದರು. ಈ ವೇಳೆ ಶಿವಪ್ಪ ಉಳ್ಳಾಗಡ್ಡಿ ಮತ್ತು ಮಕ್ತುಂಸಾಬ ನದಾಫಗೆ ಹೆಚ್ಚಿನ ಗಾಯವಾಗಿತ್ತು. ಕಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು.

ಕುಂದಗೋಳ ವಿಧಾನಸಭೆ ಉಪ ಚುನಾವಣೆ ಸಂದರ್ಭದಲ್ಲಿಯೇ ಎರಡು ಗುಂಪುಗಳ ನಡುವೆ ನಡೆದಿದ್ದ ಗಲಾಟೆಯು ರಾಜಕೀಯ ತಿರುವು ಪಡೆದುಕೊಂಡಿತ್ತು. ಆದರೆ ವೈಯಕ್ತಿಕ ಕಾರಣಕ್ಕೆ ಹೊಡೆದಾಟ ನಡೆದಿತ್ತು ಎಂದು ಗಾಯಾಳುಗಳು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲ್ವೆ ಬೋಗಿಯಲ್ಲಿ ಶವ ಪತೆ

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಹುಬ್ಬಳ್ಳಿ- ಚಿಕ್ಕಜಾಜೂರ ಪ್ಯಾಸೆಂಜರ್‌ (56916) ರೈಲಿನ ಬೋಗಿಯಲ್ಲಿ ಮಲಗಿದ್ದಲ್ಲಿಯೇ ಸ್ವಾಭಾವಿಕವಾಗಿ ಮೃತಪಟ್ಟ ವೃದ್ಧರೊಬ್ಬರ ಶವ ರೈಲ್ವೆ ಪೊಲೀಸರಿಗೆ ಶುಕ್ರವಾರ ದೊರೆತಿದೆ. ಯಾವುದೇ ಕಾಯಿಲೆಯಿಂದ ಬಳಲುತ್ತಿದ್ದ ಸುಮಾರು 65 ವರ್ಷದ ಅಪರಿಚಿತ ವೃದ್ಧ ಸಮಯಕ್ಕೆ ಸರಿಯಾಗಿ ಔಷಧೋಪಚಾರ ಇಲ್ಲದೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ. 5 ಅಡಿ 6 ಅಂಗುಲ ಎತ್ತರ, ಕಪ್ಪುಮೈಬಣ್ಣ, ದುಂಡು ಮುಖ, ದಪ್ಪ ಮೂಗು, ಸದೃಢ ಶರೀರ ಹೊಂದಿದ್ದಾರೆ.

ಸಬ್‌ವೇ ಬಳಿ ಶವ ಪತ್ತೆ: ಇಲ್ಲಿನ ರೈಲ್ವೆ ನಿಲ್ದಾಣದ ವೇದಿಕೆ ನಂ. 4-5ರ ಸಬ್‌ವೇ ಪಕ್ಕದಲ್ಲಿ 65-70 ವರ್ಷದ ವೃದ್ಧರೊಬ್ಬರ ಶವ ರೈಲ್ವೆ ಠಾಣೆ ಪೊಲೀಸರಿಗೆ ಶನಿವಾರ ಸಿಕ್ಕಿದೆ. ಅಪರಿಚಿತ ವೃದ್ಧ ಯಾವುದೋ ಕಾಯಿಲೆಯಿಂದ ಬಳಲಿ ಸರಿಯಾಗಿ ಚಿಕಿತ್ಸೆ ದೊರೆಯದೆ ಮಲಗಿದಲ್ಲಿಯೇ ಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆ. 5 ಅಡಿ 4ಅಂಗುಲ ಎತ್ತರ ಹೊಂದಿದ್ದಾರೆ. ಶವಗಳನ್ನು ಕಿಮ್ಸ್‌ ಶವಾಗಾರದಲ್ಲಿ ಇಡಲಾಗಿದೆ. ವಾರಸುದಾರರು ದೂ: 2364751, ಮೊ: 9480802126 ಸಂಪರ್ಕಿಸಬಹುದು.

ಚರ್ಚ್‌ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ
ಹುಬ್ಬಳ್ಳಿ:
ಹಳೇಹುಬ್ಬಳ್ಳಿ ಹೆಗ್ಗೇರಿ ಬಸವನಗರ ಸ್ಮಶಾನ ಬಳಿಯ ಅಬ್ರಾಹಂ ಚರ್ಚ್‌ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ ಘಟನೆ ರವಿವಾರ ನಡೆದಿದೆ. ಈ ಹಿಂದೆ ರವಿವಾರ ರಾತ್ರಿಯೇ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದರು. ಇಂದು ರಾತ್ರಿ ಸಹ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಿಡಿಗೇಡಿಗಳ ಪತ್ತೆ ಕೈಗೊಂಡಿದ್ದಾರೆ. ಇತ್ತೀಚೆಗಷ್ಟೆ ಚರ್ಚ್‌ನ್‌ ಆಡಳಿತ ಮಂಡಳಿಗೆ ಚುನಾವಣಾ ನಡೆದಿತ್ತು. ಈ ವೇಳೆ ಒಂದು ಗುಂಪಿನ ಸದಸ್ಯರು ಪರಾಭವಗೊಂಡಿದ್ದರು. ಇದೇ ವಿಷಯವಾಗಿ ಗುಂಪುಗಳ ನಡುವೆ ಒಂದಿಷ್ಟು ವೈಷಮ್ಯ ಉಂಟಾಗಿತ್ತು ಎನ್ನಲಾಗಿದೆ.

 

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.