ನಿಗೂಢವಾಗಿಯೇ ಉಳಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಮಗು ಅಪಹರಣ ಪ್ರಕರಣ
300 ಸಿಸಿಟಿವಿಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ತಡಕಾಡಿದ ಪೊಲೀಸರು
Team Udayavani, Jun 18, 2022, 5:33 PM IST
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಬಳಿ 40 ದಿನಗಳ ಮಗುವನ್ನು ತಾಯಿಯ ಮಡಿಲಿನಿಂದ ಕಿತ್ತುಕೊಂಡು ಹೋಗಿದ್ದ ಹಾಗೂ ರಾತ್ರೋರಾತ್ರಿ ಮಗುವನ್ನು ಮರಳಿ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋಗಿದ್ದವರ ಸುಳಿವು ಇದುವರೆಗೂ ಪೊಲೀಸರಿಗೆ ದೊರೆತಿಲ್ಲ.
ದೊಡ್ಡತಲೆ ಹೊಂದಿದ ಸಮಸ್ಯೆಯಿಂದ ಬಳಲುತ್ತಿದ್ದ ಕುಂದಗೋಳದ ಹಸುಗೂಸನ್ನು ಕಿಮ್ಸ್‌ನಲ್ಲಿ ದಾಖಲಿಸಲಾಗಿತ್ತು. ಮಗುವಿನ ತಾಯಿ ವ್ಯಕ್ತಿಯೊಬ್ಬ ಕಿತ್ತುಕೊಂಡು ಹೋಗಿದ್ದಾನೆಂದು ವಿದ್ಯಾನಗರ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಆದರೆ ಮರುದಿನ ಬೆಳಗಿನ ಜಾವ ಮಗು ಪಿಎಂಎಸ್‌ಎಸ್ ಆಸ್ಪತ್ರೆ ಹಿಂಭಾಗದಲ್ಲಿ ದೊರೆತಿತ್ತು. ಈ ಪ್ರಕರಣ ಭೇದಿಸಲು ಆಯುಕ್ತರು ಡಿಸಿಪಿ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್‌ಗಳುಳ್ಳ ವಿಶೇಷ ತನಿಖಾ ತಂಡ ಕೂಡ ರಚಿಸಿದ್ದಾರೆ. ಕಿಮ್ಸ್ ಆವರಣದಲ್ಲಿನ ಎಲ್ಲ 300 ಸಿಸಿಟಿವಿಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪೊಲೀಸರು ತಡಕಾಡಿದ್ದಾರೆ. ಆದರೆ ಮಗು ಅಪಹರಿಸಿದ್ದ ಹಾಗೂ ಆಸ್ಪತ್ರೆ ಆವರಣದಲ್ಲಿ ಬಿಟ್ಟು ಹೋದವರ ಬಗ್ಗೆ ಪೊಲೀಸರಿಗೆ ಇದುವರೆಗೆ ಸ್ಪಷ್ಟ ಚಿತ್ರಗಳು ದೊರೆತಿಲ್ಲ.
ಇನ್ನು ತನಿಖಾ ಹಂತದಲ್ಲಿದೆ, ವಿಚಾರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ ಮಗುವಿನ ತಾಯಿಯ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಹೈಡ್ರಾಮಾ ಹಿಂದೆ ಯಾರಿದ್ದಾರೆ? ಇದಕ್ಕೆ ಕಾರಣವೆನೆಂಬುದು ಮಾತ್ರ ಸ್ಪಷ್ಟವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ
ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್ ಅರೆಸ್ಟ್! ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.