ಬಿಜೆಪಿಯಲ್ಲಿ ಬಂಡಾಯ ಯತ್ನ ನಡೆದಿತ್ತೇ?
Team Udayavani, Mar 5, 2017, 1:11 PM IST
ಹುಬ್ಬಳ್ಳಿ: ಮಹಾಪೌರ ಸ್ಥಾನ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ಸದಸ್ಯರೊಬ್ಬರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದರೆ? ಮಹಾಪೌರ-ಉಪಮಹಾಪೌರ ಆಯ್ಕೆ ಚುನಾವಣೆ ವೇಳೆ ಪಾಲಿಕೆ ಸಭಾಭವನದಲ್ಲಿ ಕಾಂಗ್ರೆಸ್ ನಾಯಕರು ಇಂತಹ ಗಂಭೀರ ವಿಷಯ ಪ್ರಾಸ್ತಾಪಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ.
ಬಿಜೆಪಿ ನಾಯಕರಿಗೆ ಇದು ಆಘಾತ ಸೃಷ್ಟಿಸಿತು ಎನ್ನಲಾಗಿದೆ. ಮಹಾಪೌರ ಸ್ಥಾನಕ್ಕೆ ಬಿಜೆಪಿಯಲ್ಲಿ ತೀವ್ರ ಪೈಪೋಟಿ ಒಡ್ಡಿದ್ದ ಆಕಾಂಕ್ಷಿಯೊಬ್ಬರು ಕಾಂಗ್ರೆಸ್‌ನವರನ್ನು ಸಂಪರ್ಕಿಸಿ, ಮಹಾಪೌರ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದಿದ್ದರೆ ಬಂಡಾಯ ಸಾರುವೆ. ನೀವು ಬೆಂಬಲ ನೀಡುವಂತೆ ಕೇಳಿದ್ದರೆನ್ನಲಾಗಿದೆ.
ಈ ವಿಷಯ ಬಿಜೆಪಿ ನಾಯಕ ಸಮ್ಮುಖದಲ್ಲೇ ಪಾಲಿಕೆ ಸಭಾಭವನದಲ್ಲಿ ಶನಿವಾರ ಕಾಂಗ್ರೆಸ್‌ನವರಿಂದ ಪ್ರಸ್ತಾಪಗೊಂಡಿದ್ದು, ನಿಜಕ್ಕೂ ಇಂತಹ ಯತ್ನ ನಡೆದಿತ್ತೇ ಅಥವಾ ಕಾಂಗ್ರೆಸ್‌ನವರು ತಮಾಷೆಗೆ ಇದನ್ನು ಪ್ರಸ್ತಾಪಿಸಿದರೆ? ಕೆಲ ಮೂಲಗಳ ಪ್ರಕಾರ ಬಿಜೆಪಿ ಸದಸ್ಯನ ಹೇಳಿಕೆಯನ್ನು ಕಾಂಗ್ರೆಸ್‌ನವರು ಗಂಭೀರವಾಗಿ ಪರಿಗಣಿಸಿ ತಯಾರಿಗೂ ಮುಂದಾಗಿದ್ದರು ಎನ್ನಲಾಗುತ್ತಿದೆ.
ಆಗಿದ್ದೇನು?: ಮಹಾಪೌರ-ಉಪ ಮಹಾಪೌರ ಆಯ್ಕೆಗೆಂದು ಪಾಲಿಕೆ ಸಭಾಭವನದಲ್ಲಿ ಸೇರಿದ್ದ ಕಾಂಗ್ರೆಸ್ ನಾಯಕರು ಬಿಜೆಪಿ ಸದಸ್ಯ ಶಿವಾನಂದ ಮುತ್ತಣ್ಣವರ ಅವರನ್ನು ಉದ್ದೇಶಿಸಿ ಬಂಡಾಯ ಹೇಳಿಕೆ ಕುರಿತಾಗಿ ಪ್ರಸ್ತಾಪಿಸಿದರು ಎನ್ನಲಾಗಿದೆ. ಮಹಾಪೌರ ಸ್ಥಾನಕ್ಕೆ ಬಿಜೆಪಿಯಲ್ಲಿ ಆರೇಳು ಆಕಾಂಕ್ಷಿಗಳ ತೀವ್ರ ಪೈಪೋಟಿಯಲ್ಲಿ ಶಿವಾನಂದ ಮುತ್ತಣ್ಣವರ ಪ್ರಮುಖರಾಗಿದ್ದರು.
ಅವರು ಒಂದು ಹೆಜ್ಜೆ ಮುಂದೆ ಹೋಗಿ ಮಹಾಪೌರ ಆಯ್ಕೆ ಚುನಾವಣೆಯ ಎರಡು ದಿನ ಮೊದಲು ಸುದ್ದಿಗೋಷ್ಠಿ ನಡೆಸಿ ತಾವು ಮಹಾಪೌರ ಸ್ಥಾನಕ್ಕೇರುವುದು ಖಚಿತ, ಈ ಬಗ್ಗೆ ಪಕ್ಷದ ನಾಯಕರಾದ ಜಗದೀಶ ಶೆಟ್ಟರ, ಪ್ರಹ್ಲಾದ ಜೋಶಿ ಸ್ಪಷ್ಟ ಭರವಸೆ ನೀಡಿದ್ದಾರೆ.
50 ವರ್ಷಗಳಿಂದ ಕುರುಬ ಸಮಾಜಕ್ಕೆ ಮಹತ್ವದ ಅಧಿಕಾರ ಸಿಕ್ಕಿಲ್ಲ ಎಂಬುದನ್ನು ಪ್ರಸ್ತಾಪ ಮಾಡಿದ್ದರು. ಮಾ. 3ರಂದು ಶಿವಾನಂದ ಮುತ್ತಣ್ಣವರ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಿಜೆಪಿ ನಾಯಕರಾದ ಜಗದೀಶ ಶೆಟ್ಟರ ಹಾಗೂ ಪ್ರಹ್ಲಾದ ಜೋಶಿ ಅವರ ನಿವಾಸಕ್ಕೆ ತೆರಳಿ ತಮಗೆ ಮಹಾಪೌರ ಸ್ಥಾನ ನೀಡುವಂತೆ ಒತ್ತಡ ತಂದಿದ್ದರು.
ನಾಲ್ಕು ಸದಸ್ಯರನ್ನು ತರುವೆ ಎಂದಿದ್ದರೇ?: ಕಾಂಗ್ರೆಸ್‌ನವರ ಪ್ರಕಾರ, ಪಾಲಿಕೆಯ ಬಿಜೆಪಿ ಸದಸ್ಯ ಶಿವಾನಂದ ಮುತ್ತಣ್ಣವರ ಕಾಂಗ್ರೆಸ್‌ನ ಹಿರಿಯ ಸದಸ್ಯರೊಬ್ಬರನ್ನು ಸಂಪರ್ಕಿಸಿ, ತಮ್ಮನ್ನು ಮಹಾಪೌರ ಸ್ಥಾನಕ್ಕೆ ಪಕ್ಷ ಪರಿಗಣಿಸದಿದ್ದರೆ ನಾಲ್ವರು ಸದಸ್ಯರೊಂದಿಗೆ ಬರುತ್ತೇನೆ. ಮಹಾಪೌರ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸಬೇಕೆಂದು ಮನವಿ ಮಾಡಿದ್ದರು ಎನ್ನಲಾಗಿದೆ.
ಬಿಜೆಪಿಯಿಂದ ಅಧಿಕಾರ ಕಸಿಯಬಹುದು ಎಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರಿಂದಲೂ ಈ ಪ್ರಸ್ತಾಪಕ್ಕೆ ಹಸಿರು ನಿಶಾನೆ ಸಿಕ್ಕಿದ ಹಿನ್ನೆಲೆಯಲ್ಲಿಯೇ ಕಾಂಗ್ರೆಸ್ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಮುಖಂಡರು ಪಾಲಿಕೆಯ ಪಕ್ಷದ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿದ್ದು, ಶಿವಾನಂದ ಮುತ್ತಣ್ಣವರ ಬಂಡಾಯವಾಗಿ ಸ್ಪರ್ಧಿಸಿದರೆ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದರು ಎನ್ನಲಾಗಿದೆ.
ಠುಸ್ ಪಟಾಕಿ: ಅಂತಿಮವಾಗಿ ಬಿಜೆಪಿಯಲ್ಲಿ ಬಂಡಾಯ ಎಂಬುದು ಠುಸ್ ಪಟಾಕಿಯಾಗಿದೆ. ಆದರೆ, ಬಿಜೆಪಿಯಲ್ಲಿ ಬಂಡಾಯದ ಚಿಂತನೆ ಮೈದಳೆದಿತ್ತೇ ಎಂಬುದು ಗಂಭೀರ ವಿಷಯ. ಕಾಂಗ್ರೆಸ್‌ನವರು ಶನಿವಾರ ಪಾಲಿಕೆ ಸಭಾಭವನದಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲೇ ಏನೋ ಆಗುತ್ತದೆ ಅಂದುಕೊಂಡಿದ್ದೆವು. ನೀವೇನೂ ಮಾಡಲಿಲ್ಲ. ಕಾಂಗ್ರೆಸ್ -ಜೆಡಿಎಸ್ ಸೇರಿ ಬೆಂಬಲ ನೀಡುತ್ತಿತ್ತು. ಧೈರ್ಯ ಮಾಡಲೇ ಇಲ್ಲವಲ್ಲ ಎಂದು ಛೇಡಿಸಿದಾಗ, ಸದಸ್ಯ ಶಿವಾನಂದ ಮುತ್ತಣ್ಣವರ ಮೌನಕ್ಕೆ ಜಾರಿದ್ದರು ಎನ್ನಲಾಗಿದೆ.
* ಅಮರೇಗೌಡ ಗೋನವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.