ಆರ್ ಎಸ್ಎಸ್ ಏನು ಮಾಡುತ್ತಿದೆ ಎಂದು ತಿಳಿಯಲು ಎಚ್ ಡಿಕೆ ಶಾಖೆಗೆ ಬರಲಿ: ನಳಿನ್ ಕಟೀಲ್
Team Udayavani, Oct 19, 2021, 2:24 PM IST
ಹುಬ್ಬಳ್ಳಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಏನು ಮಾಡುತ್ತಿದೆ, ದೇಶಕ್ಕೆ ಅದರ ಸೇವೆ ಏನೆಂಬುದು ಅರಿಯಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಘ ಶಾಖೆಗೆ ಬಂದು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಷ್ಟ್ರ ಕಟ್ಟುವ, ಸೇವೆ ಸಲ್ಲಿಸುವ ಕಾಯಕದಲ್ಲಿ ತೊಡಗಿದೆ. ದೇಶದಲ್ಲಿ ಅಷ್ಟೇ ಅಲ್ಲ ವಿಶ್ವದ ಅನೇಕ ದೇಶಗಳಲ್ಲಿ ತನ್ನ ಕಾರ್ಯಕ್ಷೇತ್ರ ಹೊಂದಿದೆ ಎಂಬುದನ್ನು ಕುಮಾರಸ್ವಾಮಿ ಅರಿಯಲಿ ಎಂದರು.
ಕುಟುಂಬ ರಾಜಕಾರಣಕ್ಜೆ ಜೋತು ಬಿದ್ದಿರುವ ಕುಮಾರಸ್ವಾಮಿ ಅವರಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತಿದೆ. ಹಾಗಾಗಿಯೇ ಏನೇನೋ ಮಾತನಾಡುತ್ತಿದ್ದಾರೆ ಎಂದರು.
ಹಾನಗಲ್ಲ, ಸಿಂದಗಿ ಎರಡು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಲಿದೆ. ನಂತರ ವಿಧಾನಪರಿಷತ್ತುಗೆ ಸ್ಥಳೀಯ ಸಂಸ್ಥೆಗಳು, ಪದವೀಧರ ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷರು, ಷರಿಷತ್ತು ಚುನಾವಣೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದರು.
ಇದನ್ನೂ ಓದಿ:ಕಾಂಗ್ರೆಸ್-ಬಿಜೆಪಿ ಎರಡೂ ಪರ್ಸೆಂಟೆಜ್ ಪಕ್ಷಗಳು: ಮಾಜಿ ಸಿಎಂ ಕುಮಾರಸ್ವಾಮಿ
ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರೀಯ ಅಧ್ಯಕ್ಷರಿಂದ ಹಿಡಿದು ರಾಜ್ಯಾಧ್ಯಕ್ಷರವರೆಗೆ ಬೇಲ್ ಮೇಲೆ ಇದ್ದಾರೆ. ರಾಹುಲ್ ಗಾಂಧಿ ಮಾದಕದ್ರವ್ಯ ವ್ಯಸನಿ ಎಂಬುದನ್ನು ಮಾಧ್ಯಮಗಳು ಹೇಳಿವೆ. ಇನ್ನೊಂದು ಕಡೆ ವಿಶ್ವ ಮೆಚ್ಚುವ ರೀತಿ ಆಡಳಿತ ನೀಡುತ್ತಿರುವ ಪ್ರಧಾನಿ ಮೋದಿಯವರ ಬಗ್ಗೆ ಜನಮನ್ನಣೆ ಹೆಚ್ಚುತ್ತಿದೆ. ಮೋದಿಯವರು ಸಬ್ ಕಾ ಸಥ್ ಸಬ್ ಕಾ ವಿಕಾಸ ಎಂದರೆ, ಮುಸ್ಲಿಮರ ಅಭಿವೃದ್ಧಿ ಯೊಂದೇ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಮುಂದಿನ ವಿಧನಸಭೆ ಚುನಾವಣೆ ವೇಳೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ನಡುವಿನ ತಿಕ್ಕಾಟದಿಂದ ಕಾಂಗ್ರೆಸ್ ಎರಡು ಭಾಗವಾಲಿದೆ, ಇನ್ನು ಕುಟುಂಬ ಪಕ್ಷ ಜೆಡಿಎಸ್ ನಲ್ಲಿ ಕುಟುಂಬದಲ್ಲೇ ಕಲಹ ಶುರುವಾಗತೊಡಗಿದೆ. ಎರಡು ಪಕ್ಷಗಳಿಗೆ ಭವಿಷ್ಯ ಇಲ್ಲವಾಗಿದ್ದೂ ಬಿಜೆಪಿಗೆ ಭವ್ಯ ಭವಿಷ್ತವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.