ಬಡ ಕೂಲಿಕಾರ್ಮಿಕರಿಗೆ ವರದಾನವಾದ ನರೇಗಾ
Team Udayavani, Apr 30, 2020, 12:24 PM IST
ಸಾಂದರ್ಭಿಕ ಚಿತ್ರ
ಕಲಘಟಗಿ: ಲಾಕ್‌ಡೌನ್ ಕಾರಣ ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರಿಗೆ ನರೇಗಾ ಕಾಮಗಾರಿ ಜೀವನೋಪಾಯಕ್ಕೆ ಎಡೆಮಾಡಿಕೊಟ್ಟಿದ್ದು, ಗಲಗಿನಗಟ್ಟಿ ಗ್ರಾಮದ ಬಡಿಕಟ್ಟಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ಕೂಲಿ ಕಾರ್ಮಿಕರು ನಿರತರಾಗಿದ್ದಾರೆ.
ದಿನದ ದುಡಿಮೆಯನ್ನೇ ನಂಬಿಕೊಂಡಿದ್ದ ಅದೆಷ್ಟೋ ಕೂಲಿಕಾರ್ಮಿಕ ಕುಟುಂಬಗಳು ಹುಬ್ಬಳ್ಳಿಯ ಕೂಲಿಯನ್ನೇ ನೆಚ್ಚಿಕೊಂಡು ಬಾಳು ನಡೆಸುತ್ತಿದ್ದರು. ಲಾಕ್‌ಡೌನ್ ಘೋಷಣೆ ಬಳಿಕ ಕೆಲಸವಿಲ್ಲದೆ ಅರೆಹೊಟ್ಟೆಯಲ್ಲಿ ಕಾಲ ಕಳೆಯುತ್ತಿದ್ದ ಜನತೆಗೆ ನರೇಗಾ ನೆರವಾಗುತ್ತಿದೆ. ಕೆರೆ ಹೂಳೆತ್ತುವುದು, ಕಾಲುವೆ ನಿರ್ಮಾಣ, ಅರಣ್ಯೀಕರಣ, ಕೃಷಿ ಹೊಂಡ, ದನದ ಕೊಟ್ಟಿಗೆ ಸೇರಿ ಒಟ್ಟು 6.91 ಲಕ್ಷ ಮಾನವ ದಿನಗಳು ಮಂಜೂರಾಗಿದ್ದು, ಇದರಲ್ಲಿ ಈಗಾಗಲೇ 10 ಸಾವಿರ ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ತಾಪಂ ಇಒ ಎಂ.ಎಸ್. ಮೇಟಿ ಮಾಧ್ಯಮಕ್ಕೆ ತಿಳಿಸಿದರು.
ದೇವಿಕೊಪ್ಪ, ಜಿನ್ನೂರ, ಗಳಗಿಹುಲಕೊಪ್ಪ, ಜಿ.ಬಸವನಕೊಪ್ಪ ಸೇರಿದಂತೆ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಸಾವಿರಾರು ಕೂಲಿ ಕಾರ್ಮಿಕರು ಉದ್ಯೋಗದಲ್ಲಿ ನಿರತರಾಗಿದ್ದಾರೆ. ಉದ್ಯೋಗದಲ್ಲಿ ನಿರತರಾದವರಿಗೆ ಒಂದು ಜಾಬ್ ಕಾರ್ಡ್‌ಗೆ 100 ಮಾನವ ದಿನಗಳಿದ್ದು, ಒಂದು ದಿನದ ಕೂಲಿ 275 ಹಾಗೂ 10 ಸಾಮಗ್ರಿ ವೆಚ್ಚ ಸೇರಿ 285 ರೂ. ಪಾವತಿಸಲಾಗುತ್ತದೆ. ಜನರು ತಮ್ಮ ಗ್ರಾಪಂಗಳಿಗೆ ಭೇಟಿ ನೀಡಿ ಕೆಲಸ ಪಡೆಯಬಹುದು ಎಂದು ನರೇಗಾ ಸಹಾಯಕ ನಿರ್ದೇಶಕ ಚಂದ್ರು ಪೂಜಾರ ತಿಳಿಸಿದರು
ತಾಪಂ ಇಒ ಎಂ.ಎಸ್. ಮೇಟಿ, ನರೇಗಾ ಸಹಾಯಕ ನಿರ್ದೇಶಕ ಚಂದ್ರು ಪೂಜಾರ, ಪಿಡಿಒ ಚನ್ನಮಲ್ಲಪ್ಪ ಉಳ್ಳಾಗಡ್ಡಿ, ಗ್ರಾಪಂ ಅಧ್ಯಕ್ಷೆ ಚನ್ನವ್ವ ಆಲದಮರದ, ಉಪಾಧ್ಯಕ್ಷೆ ಈರವ್ವ ಬೇಗೂರ ಮುಂತಾದವರು ಕಾರ್ಯನಿರತ ಕಾರ್ಮಿಕರಿಗೆಲ್ಲಾ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.