ಕೃಷಿ ವಿವಿ ಜೋಳ ಸಂಶೋಧನಾ ವಿಭಾಗಕ್ಕೆ ರಾಷ್ಟ್ರಮಟ್ಟದ ಪ್ರಶಸಿ

Team Udayavani, Jun 30, 2020, 12:06 PM IST

ಕೃಷಿ ವಿವಿ ಜೋಳ ಸಂಶೋಧನಾ ವಿಭಾಗಕ್ಕೆ ರಾಷ್ಟ್ರಮಟ್ಟದ ಪ್ರಶಸಿ

ಧಾರವಾಡ: ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಜೋಳ ಸಂಶೋಧನಾ ವಿಭಾಗಕ್ಕೆ ದೇಶದ ಅತ್ಯುತ್ತಮ ಸಂಶೋಧನಾ ಕೇಂದ್ರ ಎಂಬ ಪ್ರಶಸ್ತಿ ಗರಿ ಲಭಿಸಿದೆ. 2017-2020ರ ಅವಧಿಗೆ “ದೇಶದ ಅತ್ಯುತ್ತಮ ಸಂಶೋಧನಾ ಕೇಂದ್ರ’ ಎಂದು ಪ್ರಶಸ್ತಿಗೆ ಆಯ್ಕೆಯಾಗಿದ್ದು, 50ನೇ ಅಖೀಲ ಭಾರತ ಸಂಶೋಧನಾ ಕಾರ್ಯಾಗಾರದಲ್ಲಿ ಪ್ರಕಟಿಸಲಾಗಿದೆ.

ದೇಶದ ಒಟ್ಟಾರೆ ಜೋಳದ ಅಭಿವೃದ್ಧಿಯಲ್ಲಿನ ಕೊಡುಗೆ ಗಮನಿಸಿ ಪ್ರಶಸ್ತಿ ನೀಡಲಾಗಿದೆ. 1969ರಲ್ಲಿ ಈ ಕೇಂದ್ರ ಕಾರ್ಯಾರಂಭ ಮಾಡಿದ್ದು, ಸುವರ್ಣ ಸಂಭ್ರಮದ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಬಂದಿದ್ದು ವಿಶೇಷವಾಗಿದೆ ಎಂದು ಕುಲಪತಿ ಡಾ|ಮಹಾದೇವ ಚೆಟ್ಟಿ ತಿಳಿಸಿದ್ದಾರೆ.

ಈ ಕೇಂದ್ರವು ಮುಂಗಾರು ಜೋಳದಲ್ಲಿ ಇಲ್ಲಿಯವರೆಗೆ 4 ಹೈ ಬ್ರೀಡ್‌ ಮತ್ತು 7 ಸುಧಾರಿತ ತಳಿಗಳನ್ನೂ, ಹಿಂಗಾರು ಜೋಳದಲ್ಲಿ 2 ಹೈಬ್ರಿಡ್‌ ಮತ್ತು 3 ಸುಧಾರಿತ ತಳಿಗಳನ್ನೂ ಅಭಿವೃದ್ಧಿಪಡಿಸಿ ರೈತರಿಗೆ ಬಿಡುಗಡೆ ಮಾಡಿದೆ. ಜೊತೆಗೆ ಅನೇಕ ಬೆಳೆ ಉತ್ಪಾದನೆ ಹಾಗೂ ಸಸ್ಯ ಸಂರಕ್ಷಣಾ ತಂತ್ರಜ್ಞಾನಗಳನ್ನು ಶಿಫಾರಸು ಮಾಡಲಾಗಿದೆ. ಇದಲ್ಲದೇ ಕೇಂದ್ರವು ಅಭಿವೃದ್ಧಿಪಡಿಸಿದ

ಬೇಗನೆ ಮಾಗುವ ಮುಂಗಾರು ಜೋಳದ ಹೈಬ್ರೀಡ್‌ ತಳಿ ಎಸ್‌ಪಿಎಚ್‌-1883ನ್ನು ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಾಗಿದೆ. ಈ ತಳಿಯನ್ನು ಡಾ| ಎನ್‌.ಈ. ಹನುಮರಟ್ಟಿ ಹಾಗೂ ಡಾ|ಎಸ್‌.ಟಿ.ಕಜ್ಜಿಡೋಣಿ ಅವರು ಡಾ|ವಿ.ಎಸ್‌. ಕುಬಸದ, ಡಾ|ಟಿ.ಟಿ. ಬಂಡಿವಡ್ಡರ, ಡಾ|ಎಸ್‌.ಎನ್‌. ಚಟ್ಟಣ್ಣವರ, ಡಾ|ಎಚ್‌.ಎಂ. ಶೈಲಾ ಅವರ ಸಹಾಯದೊಂದಿಗೆ ಅಭಿವೃದ್ಧಿಪಡಿಸಿದ್ದಾರೆ. ಈ ಹೈಬ್ರಿàಡ್‌ ತಳಿಯ ಬೀಜಗಳನ್ನು ಅಭಿವೃದ್ಧಿಪಡಿಸಿ 2021ನೇ ಮುಂಗಾರಿಗೆ ಪ್ರಾಯೋಗಿಕವಾಗಿ ಬೆಳೆಯಲು ರೈತರಿಗೆ ಒದಗಿಸಲು ಯೋಚಿಸಲಾಗಿದೆ. ಇದೇ ಕೇಂದ್ರದಿಂದ ಬಿಡುಗಡೆ ಮಾಡಿರುವ ಎಸ್‌ಪಿವಿ-2217 ತಳಿಯು ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಕಷ್ಟು ಜನಪ್ರಿಯವಾಗಿದ್ದು, ಹೆಚ್ಚಿನ ಕಾಳು ಮತ್ತು ಮೇವಿನ ಇಳುವರಿ ನೀಡುತ್ತದೆ ಎಂದು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ರಮೇಶಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.